INDvSL: ಅಂತಿಮ ಪಂದ್ಯದಲ್ಲಿ ಟಾಸ್ ಗೆದ್ದ ಶ್ರೀಲಂಕಾ

Suvarna News   | stockphoto
Published : Jan 10, 2020, 06:35 PM IST
INDvSL: ಅಂತಿಮ ಪಂದ್ಯದಲ್ಲಿ ಟಾಸ್ ಗೆದ್ದ ಶ್ರೀಲಂಕಾ

ಸಾರಾಂಶ

ಭಾರತ ಹಾಗೂ ಶ್ರೀಲಂಕಾ ನಡುವಿನ 3ನೇ ಹಾಗೂ ಅಂತಿಮ ಪಂದ್ಯ ಅಭಿಮಾನಿಗಳ ಕುತೂಹಲ ಇಮ್ಮಡಿಗೊಳಿಸಿದೆ. 3ನೇ ಪಂದ್ಯ ಗೆದ್ದು ಸರಣಿ ಗೆಲುವಿಗೆ ಭಾರತ ಹೊಂಚು ಹಾಕಿದೆ. ಈಗಾಗಲೇ ಟಾಸ್ ಪ್ರಕ್ರಿಯೆ ಮುಗಿದಿದ್ದು ಶ್ರೀಲಂಕಾ ಟಾಸ್ ಗೆದ್ದುಕೊಂಡಿದೆ.

ಪುಣೆ(ಜ.10): ಭಾರತ ಹಾಗೂ ಶ್ರೀಲಂಕಾ ನಡುವಿನ 3 ಪಂದ್ಯಗಳ ಟ20 ಸರಣಿ ಅಂತಿಮ ಘಟ್ಟ ತಲುಪಿದೆ. ಪುಣೆಯಲ್ಲಿ ನಡೆಯುತ್ತಿರುವ ಮಹತ್ವದ ಪಂದ್ಯದಲ್ಲಿ ಟಾಸ್ ಗೆದ್ದ ಶ್ರೀಲಂಕಾ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ. ಭಾರತ ತಂಡದಲ್ಲಿ 3 ಬದಲಾವಣೆ ಮಾಡಲಾಗಿದೆ. ಮನೀಶ್ ಪಾಂಡೆ, ಸಂಜು ಸಾಮ್ಸನ್ ಹಾಗೂ ಯಜುವೇಂದ್ರ ಚಹಾಲ್ ತಂಡ ಸೇರಿಕೊಂಡಿದ್ದಾರೆ.ಶಿವಂ ದುಬೆ , ಕುಲ್ದೀಪ್ ಹಾಗೂ ರಿಷಪ್ ಪಂತ್ ತಂಡದಿಂದ ಹೊರಗುಳಿದಿದ್ದಾರೆ. ಹಲವು ದಿನಗಳ ಬಳಿಕ ಮನೀಶ್ ಪಾಂಡೆ ಹಾಗೂ ಸಂಜು ಸಾಮ್ಸನ್‌ಗೆ ಅವಕಾಶ ನೀಡಲಾಗಿದೆ.  

ಶ್ರೀಲಂಕಾ ತಂಡದಲ್ಲಿ ಎರಡು ಬದಲಾವಣೆ ಮಾಡಲಾಗಿದ್ದು, ಸಂದಕನ ಹಾಗೂ ಎಂಜೋಲೋ ಮ್ಯಾಥ್ಯೂಸ್ ತಂಡ ಸೇರಿಕೊಂಡಿದ್ದಾರೆ. 

ಇದನ್ನೂ ಓದಿ: ಧೋನಿ ನಿವೃತ್ತಿ ಬಗ್ಗೆ ಅಚ್ಚರಿಯ ಹೇಳಿಕೆ ನೀಡಿದ ರವಿಶಾಸ್ತ್ರಿ..!.

ಶ್ರೀಲಂಕಾ ನಡುವಿನ ಮೊದಲ ಟಿ20 ಪಂದ್ಯ ಮಳೆಯಿಂದ ರದ್ದಾಗಿತ್ತು. 2ನೇ ಪಂದ್ಯದಲ್ಲಿ ಟೀಂ ಇಂಡಿಯಾ 7 ವಿಕೆಟ್ ಗೆಲುವು ಸಾಧಿಸಿತು. ಈ ಮೂಲಕ ಸರಣಿಯಲ್ಲಿ 1-0 ಅಂತರದ ಮುನ್ನಡೆ ಕಾಯ್ದುಕೊಂಡಿದೆ. ಇದೀಗ ಅಂತಿಮ ಪಂದ್ಯ ಗೆದ್ದು ಸರಣಿ ಕೈವಶ ಮಾಡಲು ಮುಂದಾಗಿದೆ. ಇತ್ತ ಲಂಕಾ ಸರಣಿ ಉಳಿಸಿಕೊಳ್ಳಲು ಸಜ್ಜಾಗಿದೆ.
 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ದೇಶದ ಅಗ್ರ ಟಿ20 ಟೂರ್ನಿಯಲ್ಲೇ ಮ್ಯಾಚ್‌ ಫಿಕ್ಸಿಂಗ್‌, ನಾಲ್ವರು ಕ್ರಿಕೆಟಿಗರ ಸಸ್ಪೆಂಡ್‌ ಮಾಡಿ ತನಿಖೆಗೆ ಆದೇಶಿಸಿದ ಬಿಸಿಸಿಐ!
ಹೃತಿಕ್‌ ರೋಶನ್‌ 'ಕ್ರಿಶ್‌' ಸಿನಿಮಾದಲ್ಲಿ ಬಾಲನಟಿಯಾಗಿದ್ರಾ ಧೋನಿ ಪತ್ನಿ ಸಾಕ್ಷಿ?