ಭಾರತ ಹಾಗೂ ಸೌತ್ ಆಫ್ರಿಕಾ ನಡುವಿನ 2ನೇ ಟೆಸ್ಟ್ ಪಂದ್ಯದಲ್ಲಿ ಕೊಹ್ಲಿ ಸೈನ್ಯ ಮೇಲುಗೈ ಸಾಧಿಸಿದೆ. ಆರಂಭಿಕ 2 ದಿನದಲ್ಲೂ ಟೀಂ ಇಂಡಿಯಾ ಅಬ್ಬರಿಸಿದೆ. ದ್ವಿತೀಯ ಬ್ಯಾಟಿಂಗ್ ಹಾಗೂ ಬೌಲಿಂಗ್‌ನಲ್ಲಿ ಭಾರತ ಮಿಂಚಿದೆ. ದ್ವಿತೀಯ ದಿನದಾಟದ ಹೈಲೈಟ್ಸ್ ಇಲ್ಲಿದೆ.
ಪುಣೆ(ಅ.11): ಭಾರತ ಹಾಗೂ ಸೌತ್ ಆಫ್ರಿಕಾ ನಡುವಿನ 2ನೇ ಟೆಸ್ಟ್ ಪಂದ್ಯ 2ನೇ ದಿನದ ಮುಕ್ತಾಯಕ್ಕೆ ತೀವ್ರ ಕುತೂಹಲ ಕೆರಳಿಸಿದೆ. ಮೊದಲ ಅಬ್ಬರಿಸಿದ ಟೀಂ ಇಂಡಿಯಾ 2ನೇ ದಿನವೂ ಮಿಂಚಿತು. ಭಾರತ 5 ವಿಕೆಟ್ ನಷ್ಟಕ್ಕೆ 601 ರನ್ ಸಿಡಿಸಿ ಮದಲ ಇನಿಂಗ್ಸ್ ಡಿಕ್ಲೇರ್ ಮಾಡಿಕೊಂಡಿತು. ಇದಕ್ಕುತ್ತರವಾಗಿ ಮೊದಲ ಇನಿಂಗ್ಸ್ ಆರಂಭಿಸಿದ ಸೌತ್ ಆಫ್ರಿಕಾ 3 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದೆ.
ಇದನ್ನೂ ಓದಿ: ಬ್ರಾಡ್ಮನ್ to ಸಚಿನ್; ಕೊಹ್ಲಿ ದ್ವಿಶತಕಕ್ಕೆ ದಿಗ್ಗಜರ ದಾಖಲೆ ಪುಡಿ ಪುಡಿ!
2ನೇ ದಿನದಾಟದಲ್ಲಿ 3 ವಿಕೆಟ್ ನಷ್ಟಕ್ಕೆ 273 ರನ್‌ಗಳೊಂದಿಗೆ ದಿನದಾಟ ಆರಂಭಿಸಿದ ಭಾರತಕ್ಕೆ ನಾಯಕ ವಿರಾಟ್ ಕೊಹ್ಲಿ ಹಾಗೂ ಅಜಿಂಕ್ಯ ರಹಾನೆ ದಿಟ್ಟ ಹೋರಾಟ ನೀಡಿದರು. ರಹಾನೆ 59 ರನ್ ಸಿಡಿಸಿ ಔಟಾದರು. ಆದರೆ ಕೊಹ್ಲಿ ದ್ವಿಶತಕ ಸಿಡಿಸಿ ದಾಖಲೆ ಬರೆದರು.
ಇದನ್ನೂ ಓದಿ: ಪುಣೆ ಟೆಸ್ಟ್; ಬೃಹತ್ ಮೊತ್ತ ಸಿಡಿಸಿ ಭಾರತ ಇನಿಂಗ್ಸ್ ಡಿಕ್ಲೇರ್!
ಕೊಹ್ಲಿ ಜೊತೆ ಸ್ಫೋಟಕ ಬ್ಯಾಟಿಂಗ್ ಪ್ರದರ್ಶನ ನೀಡಿದ ರವೀಂದ್ರ ಜಡೇಜಾ 91 ರನ್ ಸಿಡಿಸಿದರು. ಜಡೇಜಾ ವಿಕೆಟ್ ಪತನದ ಬೆನ್ನಲ್ಲೇ ಭಾರತ 5 ವಿಕೆಟ್ ನಷ್ಟಕ್ಕೆ 601 ರನ್ ಸಿಡಿಸಿ ಇನಿಂಗ್ಸ್ ಡಿಕ್ಲೇರ್ ಮಾಡಿಕೊಂಡಿತು. ಕೊಹ್ಲಿ ಅಜೇಯ 254 ರನ್ ಸಿಡಿಸಿತು.
ಇದನ್ನೂ ಓದಿ: ದ್ರಾವಿಡ್- ಗಂಗೂಲಿ ದಾಖಲೆ ಮುರಿದ ಕೊಹ್ಲಿ-ರಹಾನೆ!
ಬೃಹತ್ ಮೊತ್ತ ನೋಡಿ ಬೆಚ್ಚಿ ಬಿದ್ದ ಸೌತ್ ಆಫ್ರಿಕಾ ನಿರೀಕ್ಷಿತ ಬ್ಯಾಟಿಂಗ್ ಪ್ರದರ್ಶನ ನೀಡಲು ಸಾಧ್ಯವಾಗಲಿಲ್ಲ. ಉಮೇಶ್ ಯಾದವ್ ದಾಳಿಗೆ ನಲುಗಿದ ಸೌತ್ ಆಫ್ರಿಕಾ 3 ವಿಕೆಟ್ ಕಳೆದುಕೊಂಡಿತು. ದಿನದಾಟ ಅಂತ್ಯಕ್ಕೆ ಸೌತ್ ಆಫ್ರಿಕಾ 3 ವಿಕೆಟ್ ನಷ್ಟಕ್ಕೆ 36 ರನ್ ಸಿಡಿಸಿದೆ. ಉಮೇಶ್ ಯಾದವ್ 2 ಹಾಗೂ ಮೊಹಮ್ಮದ್ ಶಮಿ 1 ವಿಕೆಟ್ ಕಬಳಿಸಿದರು.