ಅಹಮ್ಮದಾಬಾದ್ ಟೆಸ್ಟ್: ದಾಖಲೆ ಬರೆಯಲು ಸಜ್ಜಾದ ಅಶ್ವಿನ್, ಇಶಾಂತ್!

By Suvarna NewsFirst Published Feb 22, 2021, 2:44 PM IST
Highlights

ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿ 1-1 ಅಂತರದಲ್ಲಿ ಸಮಬಲಗೊಂಡಿದೆ. ಇದೀಗ ಅಹಮ್ಮದಾಬಾದ್‌ನಲ್ಲಿ ನಡೆಯಲಿರುವ 3ನೇ ಟೆಸ್ಟ್ ಪಂದ್ಯ ಉಭಯ ತಂಡಗಳಿಗೂ ಮಹತ್ವದ್ದಾಗಿದೆ. ಇದೀಗ ಈ ಮಹತ್ವದ ಪಂದ್ಯದಲ್ಲಿ ಆರ್ ಅಶ್ವಿನ್ ಹಾಗೂ ಇಶಾಂತ್ ಶರ್ಮಾ ದಾಖಲೆ ಬರೆಯಲು ಸಜ್ಜಾಗಿದ್ದಾರೆ.

ಅಹಮ್ಮದಾಬಾದ್(ಫೆ.22): ವಿಶ್ವದ ಅತೀ ದೊಡ್ಡ ಕ್ರೀಡಾಂಗಣ ಮೊಟೆರಾ ಕ್ರೀಡಾಂಗಣ ಇದೀಗ ಮೊದಲ ಪಂದ್ಯಕ್ಕೆ ಸಜ್ಜಾಗಿದೆ. ಭಾರತ ಹಾಗೂ ಇಂಗ್ಲೆಂಡ್ ನಡುವಿನ 3ನೇ ಟೆಸ್ಟ್ ಪಂದ್ಯ ಇದೇ ಮೊಟೇರಾ ಕ್ರೀಡಾಂಗಣದಲ್ಲಿ ನಡೆಯಲಿದೆ. ಮತ್ತೊಂದು ವಿಶೇಷ ಅಂದರೆ ಇದು ಪಿಂಕ್ ಬಾಲ್ ಟೆಸ್ಟ್. ಹಲವು ವಿಶೇಷತೆಗಳಿಗೆ ಸಾಕ್ಷಿಯಾಗಲಿರುವ ಈ ಪಂದ್ಯದಲ್ಲಿ ವೇಗಿ ಇಶಾಂತ್ ಶರ್ಮಾ ಹಾಗೂ ಸ್ಪಿನ್ನರ್ ಆರ್ ಅಶ್ವಿನ್ ದಾಖಲೆ ಬರೆಯಲು ರೆಡಿಯಾಗಿದ್ದಾರೆ.

ಭಾರತ ಎದುರಿನ 3ನೇ ಟೆಸ್ಟ್‌ಗೆ 17 ಆಟಗಾರರನ್ನೊಳಗೊಂಡ ಇಂಗ್ಲೆಂಡ್‌ ತಂಡ ಪ್ರಕಟ..!.

ಇಶಾಂತ್ ಶರ್ಮಾಗೆ 100ನೇ ಟೆಸ್ಟ್:
ಇಶಾಂತ್ ಶರ್ಮಾ ಪಾಲಿಗೆ ಇದು 100ನೇ ಟೆಸ್ಟ್ ಪಂದ್ಯವಾಗಿದೆ. ಈ ಸಾಧನೆ ಮಾಡುತ್ತಿರುವ 11ನೇ ಟೀಂ ಇಂಡಿಯಾ ಕ್ರಿಕೆಟಿಗ ಅನ್ನೋ ಹೆಗ್ಗಳಿಕೆಗೆ ಇಶಾಂತ್ ಪಾತ್ರರಾಗಲಿದ್ದಾರೆ. ಮತ್ತೊಂದು ವಿಶೇಷ ಅಂದರೆ ಕಪಿಲ್ ದೇವ್ ಬಳಿಕ 100ನೇ ಟೆಸ್ಟ್ ಪಂದ್ಯ ಆಡುತ್ತಿರುವ ಟೀಂ ಇಂಡಿಯಾ ವೇಗಿ ಅನ್ನೋ ಹೆಗ್ಗಳಿಕೆಗೆ ಇಶಾಂತ್ ಪಾತ್ರರಾಗಿದ್ದಾರೆ. ಇತ್ತೀಚೆಗೆ ಇಶಾಂತ್ ಶರ್ಮಾ 300 ವಿಕೆಟ್ ಕ್ಲಬ್‌ಗೆ ಸೇರಿಕೊಂಡಿದ್ದಾರೆ.

ಚೆನ್ನೈ ಟೆಸ್ಟ್‌: ಇಂಗ್ಲೆಂಡ್‌ ಬಗ್ಗುಬಡಿದ ಟೀಂ ಇಂಡಿಯಾ, ಸರಣಿ ಸಮಬಲ

400 ವಿಕೆಟ್ ಕ್ಲಬ್‌ನತ್ತ ಆರ್ ಅಶ್ವಿನ್‌:
ಟೀಂ ಇಂಡಿಯಾ ಸ್ಪಿನ್ನರ್ ಆರ್ ಅಶ್ವಿನ್ ಸದ್ಯ 394 ವಿಕೆಟ್ ಕಬಳಿಸಿದ್ದಾರೆ. ಈ ಮೂಲಕ 400ರ ಗಡಿ ದಾಟಲು ಕೇವಲ 6 ವಿಕೆಟ್ ಅವಶ್ಯಕತೆ ಇದೆ. 3ನೇ ಟೆಸ್ಟ್ ಪಂದ್ಯದಲ್ಲಿ ಅಶ್ವಿನ್ 6 ವಿಕೆಟ್ ಕಬಳಿಸಿ 400 ವಿಕೆಟ್ ಕ್ಲಬ್ ಸೇರಿಕೊಂಡರೆ ಮತ್ತೊಂದು ದಾಖಲೆ ಬರೆಯಲಿದ್ದಾರೆ. ಶ್ರೀಲಂಕ ದಿಗ್ಗಜ ಮುತ್ತಯ್ಯ ಮುರಳೀದರನ್ ಬಳಿಕ ಅತೀ ವೇಗದಲ್ಲಿ 400 ವಿಕೆಟ್ ಕಬಳಿಸಿದ ಬೌಲರ್ ಅನ್ನೋ ಹೆಗ್ಗಳಿಕೆಗೆ ಅಶ್ವಿನ್ ಪಾತ್ರರಾಗಲಿದ್ದಾರೆ.ಮುತ್ತಯ್ಯ 72 ಟೆಸ್ಟ್ ಪಂದ್ಯದಿಂದ 400 ವಿಕೆಟ್ ಸಾಧನೆ ಮಾಡಿದ್ದಾರೆ. ಸದ್ಯ ಅಶ್ವಿನ್ 76 ಟೆಸ್ಟ್ ಪಂದ್ಯ ಆಡಿದ್ದಾರೆ. 
 

click me!