2027ರ ಏಕದಿನ ವಿಶ್ವಕಪ್ ಟೂರ್ನಿಗೆ ಅಚ್ಚರಿಯ ಭಾರತ ತಂಡವನ್ನು ಆಯ್ಕೆ ಮಾಡಿದ ರವಿಚಂದ್ರನ್ ಅಶ್ವಿನ್! ಇಬ್ಬರು ಆರ್‌ಸಿಬಿ ಚಾಂಪಿಯನ್ ಅಟಗಾರರಿಗೆ ಸ್ಥಾನ

Published : Jul 27, 2026, 02:40 PM IST
R Ashwin Backs Virat and Rohit Sharma

ಸಾರಾಂಶ

ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ರವಿಚಂದ್ರನ್ ಅಶ್ವಿನ್, 2027ರ ಏಕದಿನ ವಿಶ್ವಕಪ್ ಟೂರ್ನಿಗೆ ತಮ್ಮ ಬಲಿಷ್ಠ ಭಾರತ ತಂಡವನ್ನು ಆಯ್ಕೆ ಮಾಡಿದ್ದಾರೆ. ಈ ತಂಡದಲ್ಲಿ ಅನುಭವಿ ವೇಗಿಗಳಾದ ಮೊಹಮ್ಮದ್ ಶಮಿ ಮತ್ತು ಭುವನೇಶ್ವರ್ ಕುಮಾರ್‌ಗೆ ಅಚ್ಚರಿಯ ಸ್ಥಾನ ನೀಡಿದ್ದು, ಆರ್‌ಸಿಬಿಯ ಇಬ್ಬರು ಆಟಗಾರರಿಗೆ ಮಣೆ ಹಾಕಿದ್ದಾರೆ.

ಬೆಂಗಳೂರು: 2027ರ ಏಕದಿನ ವಿಶ್ವಕಪ್ ಟೂರ್ನಿಗೆ ದಿನಗಣನೆ ಶುರುವಾಗಿದೆ. 2027ರ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಟ್ರೋಫಿ ಗೆಲ್ಲಲು ಟೀಂ ಇಂಡಿಯಾ ಪಣತೊಟ್ಟಿದೆ. ಕಳೆದ ಬಾರಿ ಅಂದರೆ 2023ರ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಭಾರತ ತಂಡವು ಅಜೇಯವಾಗಿ ಫೈನಲ್ ಪ್ರವೇಶಿಸಿತ್ತಾದರೂ, ಪ್ರಶಸ್ತಿ ಸುತ್ತಿನಲ್ಲಿ ಆಸೀಸ್ ಎದುರು ಮುಗ್ಗರಿಸಿತ್ತು. ಹೀಗಾಗಿ ಈ ಬಾರಿ ಟೀಂ ಇಂಡಿಯಾ ಶತಾಯಗತಾಯ ಕಪ್ ಗೆಲ್ಲಲು ರಣತಂತ್ರ ಹೆಣೆಯುತ್ತಿದೆ. ಇನ್ನು ಈಗಾಗಲೇ ಹಲವು ಕ್ರಿಕೆಟಿಗರು 2027ರ ಏಕದಿನ ವಿಶ್ವಕಪ್ ಟೂರ್ನಿಗೆ ಭಾರತ ತಂಡ ಹೇಗಿರಬೇಕು ಎಂದು ತಮ್ಮದೇ ಆದ ತಂಡವನ್ನು ಪ್ರಕಟಿಸುತ್ತಿದ್ದಾರೆ. ಇದೀಗ ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ರವಿಚಂದ್ರನ್ ಅಶ್ವಿನ್, 2027ರ ಏಕದಿನ ವಿಶ್ವಕಪ್ ಟೂರ್ನಿಗೆ ಬಲಿಷ್ಠ ಭಾರತ ತಂಡವನ್ನು ಆಯ್ಕೆ ಮಾಡಿದ್ದು, ಇಬ್ಬರು ಆರ್‌ಸಿಬಿ ಆಟಗಾರರಿಗೆ ಮಣೆ ಹಾಕಿದ್ದಾರೆ.

ಹಿರಿಯ ಅನುಭವಿಗಳಿಗೆ ಅಶ್ವಿನ್ ಅಚ್ಚರಿಯ ಆಯ್ಕೆ:

ತಮ್ಮದೇ ಯೂಟ್ಯೂಬ್ ಚಾನೆಲ್‌ನಲ್ಲಿ ಮಾತನಾಡಿರುವ ಅಶ್ವಿನ್, 2027ರ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಗೆ ಭಾರತ ತಂಡವನ್ನು ಆಯ್ಕೆ ಮಾಡುವ ಸಂದರ್ಭದಲ್ಲಿ ಅನುಭವಿ ವೇಗಿಗಳಾದ ಮೊಹಮ್ಮದ್ ಶಮಿ ಹಾಗೂ ಭುವನೇಶ್ವರ್ ಕುಮಾರ್‌ಗೆ ಮಣೆ ಹಾಕಿದ್ದಾರೆ. ಮೊಹಮ್ಮದ್ ಶಮಿ 2025ರ ಐಸಿಸಿ ಚಾಂಪಿಯನ್ಸ್ ಟ್ರೋಫಿ ಫೈನಲ್ ಬಳಿಕ ಭಾರತ ತಂಡದಲ್ಲಿ ಸ್ಥಾನ ಪಡೆದಿಲ್ಲ. ಶಮಿ ಐಸಿಸಿ ಟೂರ್ನಿಯ ಇತಿಹಾಸದಲ್ಲಿ ಭಾರತ ಪರ ಅತಿಹೆಚ್ಚು ವಿಕೆಟ್ ಕಬಳಿಸಿದ ಬೌಲರ್ ಆಗಿ ಹೊರಹೊಮ್ಮಿದ್ದಾರೆ. ಇನ್ನು ಭುವನೇಶ್ವರ್ ಕುಮಾರ್ ಕಳೆದೆರಡು ಐಪಿಎಲ್‌ ಸೀಸನ್‌ನಲ್ಲಿ 45 ವಿಕೆಟ್ ಕಬಳಿಸುವ ಮೂಲಕ ಆರ್‌ಸಿಬಿ ತಂಡವು ಸತತ ಎರಡು ಬಾರಿ ಕಪ್ ಗೆಲ್ಲುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಹೀಗಾಗಿ ಈ

'ಸದ್ಯದ ಟೀಂ ಇಂಡಿಯಾದ ವೇಗಿಗಳ ಬೌಲಿಂಗ್ ಪ್ರದರ್ಶನವನ್ನು ಗಮನಿಸಿದರೇ, ಭುವನೇಶ್ವರ್ ಕುಮಾರ್ ಹಾಗೂ ಮೊಹಮ್ಮದ್ ಶಮಿಗೆ ಯಾಕೆ ಅವಕಾಶ ಕೊಡಬಾರದು? ಭುವಿ ಆರ್‌ಸಿಬಿ ತಂಡವು ಎರಡು ಬಾರಿ ಚಾಂಪಿಯನ್ ಅಗುವಲ್ಲಿ ನೇರ ಕಾರಣರಾಗಿದ್ದಾರೆ. ಅವರು ಚೆಂಡನ್ನು ಸ್ವಿಂಗ್ ಮಾಡುವ ಸಾಮರ್ಥ್ಯವನ್ನು ಹೊಂದಿದ್ದಾರೆ. ಡೆತ್ ಓವರ್‌ನಲ್ಲಿಯೂ ಬೌಲಿಂಗ್ ಮಾಡಬಲ್ಲರು. ಇದರ ಜತೆಗೆ ಬ್ಯಾಟಿಂಗ್ ಮಾಡುವ ಸಾಮರ್ಥ್ಯವು ಇದೆ' ಹೀಗಾಗಿ ಆರ್‌ಸಿಬಿ ವೇಗಿ ಭುವಿಗೆ ವಿಶ್ವಕಪ್ ತಂಡದಲ್ಲಿ ಅಶ್ವಿನ್ ಸ್ಥಾನ ನೀಡಿದ್ದಾರೆ.

ಗುರ್ನೂರ್ ಬ್ರಾರ್, ಪ್ರಸಿದ್ದ್ ಕೃಷ್ಣ ಹಾಗೂ ಪ್ರಿನ್ಸ್ ಯಾದವ್ ಅವರಂತಹ ಬೌಲರ್‌ಗಳನ್ನು ಕಟ್ಟಿಕೊಂಡು ವಿಶ್ವಕಪ್‌ಗೆ ಹೋಗಲು ಸಾಧ್ಯವೇ? ಜಸ್ಪ್ರೀತ್ ಬುಮ್ರಾ ಹಾಗೂ ಹರ್ಷಿತ್ ರಾಣಾ ಜತೆಗೆ ಅನುಭವಿ ವೇಗಿಗಳಾದ ಭುವನೇಶ್ವರ್ ಕುಮಾರ್ ಹಾಗೂ ಮೊಹಮ್ಮದ್ ಶಮಿ ತಂಡದಲ್ಲಿದ್ದರೇ ಭಾರತ ತಂಡವು ಮತ್ತಷ್ಟು ಬಲಿಷ್ಠವಾಗಲಿದೆ ಎಂದು ಅಶ್ವಿನ್ ಅಭಿಪ್ರಾಯಪಟ್ಟಿದ್ದಾರೆ.

ಆರ್‌ಸಿಬಿಯ ಇಬ್ಬರು ಆಟಗಾರರಿಗೆ ಮಣೆ:

ಇನ್ನು 2027ರ ಏಕದಿನ ವಿಶ್ವಕಪ್ ಟೂರ್ನಿಗೆ ಅಶ್ವಿನ್ ಆಯ್ಕೆ ಮಾಡಿದ ಭಾರತ ತಂಡದಲ್ಲಿ ಇಬ್ಬರು ಆರ್‌ಸಿಬಿ ಆಟಗಾರರಿಗೆ ಮಣೆ ಹಾಕಿದ್ದಾರೆ. ಸಹಜವಾಗಿಯೇ ಟೀಂ ಇಂಡಿಯಾ ರನ್ ಮಷೀನ್ ವಿರಾಟ್ ಕೊಹ್ಲಿ ಭಾರತ ತಂಡದಲ್ಲಿ ಸ್ಥಾನ ಪಡೆದುಕೊಂಡಿದ್ದಾರೆ. ಇದೀಗ ಅನುಭವಿ ವೇಗಿ ಭುವನೇಶ್ವರ್ ಕುಮಾರ್‌ಗೆ ಮಣೆ ಹಾಕಿದ್ದಾರೆ. ಹೀಗಾಗಿ 2027ರ ಏಕದಿನ ವಿಶ್ವಕಪ್ ಟೂರ್ನಿಗೆ ಆರ್‌ಸಿಬಿ ತಂಡದ ಇಬ್ಬರು ಆಟಗಾರರು ಅಶ್ವಿನ್ ಕನಸಿನ ತಂಡದಲ್ಲಿ ಸ್ಥಾನ ಪಡೆದುಕೊಂಡಿದ್ದಾರೆ.

ಅಶ್ವಿನ್ ಆಯ್ಕೆ ಮಾಡಿದ ತಂಡದಲ್ಲಿ ಶುಭ್‌ಮನ್ ಗಿಲ್ ನಾಯಕರಾಗಿದ್ದರೇ, ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಜತೆಗೆ ಯಶಸ್ವಿ ಜೈಸ್ವಾಲ್ ಅಗ್ರಕ್ರಮಾಂಕದಲ್ಲಿ ಸ್ಥಾನ ಪಡೆದುಕೊಂಡಿದ್ದಾರೆ. ಮಧ್ಯಮ ಕ್ರಮಾಂಕದಲ್ಲಿ ಶ್ರೇಯಸ್ ಅಯ್ಯರ್, ವಿಕೆಟ್ ಕೀಪರ್ ಬ್ಯಾಟರ್‌ಗಳಾಗಿ ಕೆ ಎಲ್ ರಾಹುಲ್ ಹಾಗೂ ಇಶಾನ್ ಕಿಶನ್ ಸ್ಥಾನ ಪಡೆದುಕೊಂಡಿದ್ದಾರೆ. ಆಲ್ರೌಂಡರ್‌ಗಳಾಗಿ ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್ ಹಾಗೂ ನಿತೀಶ್ ಕುಮಾರ್ ರೆಡ್ಡಿ ಸ್ಥಾನ ಪಡೆದುಕೊಂಡಿದ್ದಾರೆ. ಇನ್ನು ತಜ್ಞ ಸ್ಪಿನ್ನರ್ ಆಗಿ ಕುಲ್ದೀಪ್ ಯಾದವ್, ವೇಗದ ಬೌಲಿಂಗ್ ವಿಭಾಗದಲ್ಲಿ ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಜಸ್ಪ್ರೀತ್ ಬುಮ್ರಾ ಹಾಗೂ ಭುವನೇಶ್ವರ್ ಕುಮಾರ್ ಸ್ಥಾನ ಪಡೆದುಕೊಂಡಿದ್ದಾರೆ.

2027ರ ಏಕದಿನ ವಿಶ್ವಕಪ್ ಟೂರ್ನಿಗೆ ಆರ್‌ ಅಶ್ವಿನ್ ಆಯ್ಕೆ ಮಾಡಿದ ಭಾರತ ತಂಡ ಹೀಗಿದೆ:

ಶುಭ್‌ಮನ್ ಗಿಲ್(ನಾಯಕ), ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆ ಎಲ್ ರಾಹುಲ್(ವಿಕೆಟ್ ಕೀಪರ್), ಇಶಾನ್ ಕಿಶನ್(ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್, ಕುಲ್ದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಭುವನೇಶ್ವರ್ ಕುಮಾರ್, ಯಶಸ್ವಿ ಜೈಸ್ವಾಲ್, ನಿತೀಶ್ ಕುಮಾರ್ ರೆಡ್ಡಿ.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ದುರ್ಬಲ ಜಿಂಬಾಬ್ವೆ ಎದುರು ಫೇಲ್; ಟೀಂ ಇಂಡಿಯಾದ ಈ ಐವರಿಗೆ ತಂಡದಿಂದ ಗೇಟ್‌ಪಾಸ್? ಮುಗಿಯಿತಾ ಇವರ ಕ್ರಿಕೆಟ್ ಬದುಕು
ಸರಣಿ ಗೆಲುವಿನ ಬೆನ್ನಲ್ಲೇ ವೈಭವ್ ಸೂರ್ಯವಂಶಿಗೆ ಮಹತ್ವದ ಸಂದೇಶ ನೀಡಿದ ಕೋಚ್ ವಿವಿಎಸ್ ಲಕ್ಷ್ಮಣ್