ದಯವಿಟ್ಟು ತಂಡದಿಂದ ನನ್ನನ್ನು ಕೈಬಿಡಿ: ಚೆನ್ನೈ ಫ್ರಾಂಚೈಸಿಗೆ ಪತ್ರ ಬರೆದ ಸ್ಟಾರ್ ಕ್ರಿಕೆಟಿಗ?

Published : Aug 08, 2025, 04:21 PM IST
MS Dhoni, Ravichandran Ashwin and Rachin Ravindra during Indian Premier League 2025 match against Mumbai Indians

ಸಾರಾಂಶ

ಐಪಿಎಲ್‌ನ ಮುಂದಿನ ಆವೃತ್ತಿಯಲ್ಲಿ ಆಡದಿರಲು ರವಿಚಂದ್ರನ್ ಅಶ್ವಿನ್ ನಿರ್ಧರಿಸಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ. ಚೆನ್ನೈ ಸೂಪರ್ ಕಿಂಗ್ಸ್ ತಂಡದಿಂದ ಬಿಡುಗಡೆ ಕೋರಿ ಅಶ್ವಿನ್ ಪತ್ರ ಬರೆದಿದ್ದಾರೆ ಎನ್ನಲಾಗಿದೆ. ಕಳೆದ ಐಪಿಎಲ್‌ನಲ್ಲಿ ನಿರೀಕ್ಷಿತ ಪ್ರದರ್ಶನ ತೋರದ ಕಾರಣ ಈ ನಿರ್ಧಾರಕ್ಕೆ ಬಂದಿರಬಹುದು.

ಚೆನ್ನೈ: ಮುಂದಿನ ಐಪಿಎಲ್‌ನಲ್ಲಿ ಆಡುವುದಿಲ್ಲ ಎಂಬ ಸುಳಿವು ನೀಡಿದ್ದಾರೆ ಚೆನ್ನೈ ಸೂಪರ್ ಕಿಂಗ್ಸ್ ತಾರೆ ರವಿಚಂದ್ರನ್ ಅಶ್ವಿನ್. ಮುಂದಿನ ಐಪಿಎಲ್‌ಗೂ ಮುನ್ನ ತಂಡದಿಂದ ಬಿಡುಗಡೆ ಮಾಡುವಂತೆ ಅಶ್ವಿನ್, ಚೆನ್ನೈ ಸೂಪರ್ ಕಿಂಗ್ಸ್ ಟೀಮ್ ಮ್ಯಾನೇಜ್‌ಮೆಂಟ್‌ಗೆ ಪತ್ರ ಬರೆದಿದ್ದಾರೆ ಎನ್ನಲಾಗಿದೆ. ಅಶ್ವಿನ್‌ನ ಅತ್ಯಂತ ಯಶಸ್ವಿ ಸ್ಪಿನ್ ಬೌಲರ್‌ಗಳಲ್ಲಿ ಒಬ್ಬರಾಗಿ ಗುರುತಿಸಿಕೊಂಡಿದ್ದ ಅಶ್ವಿನ್ ಇದೀಗ ಸ್ಪರ್ಧಾತ್ಮಕ ಕ್ರಿಕೆಟ್‌ಗೆ ಗುಡ್ ಬೈ ಹೇಳಲು ತೀರ್ಮಾನಿಸಿದ್ದಾರಾ ಎನ್ನುವ ಅನುಮಾನ ಮೂಡಲಾರಂಭಿಸಿದೆ. ಐಪಿಎಲ್ ವೃತ್ತಿಜೀವನದಲ್ಲಿ 221 ಪಂದ್ಯಗಳಿಂದ 187 ವಿಕೆಟ್‌ಗಳನ್ನು ಅಶ್ವಿನ್ ಪಡೆದಿದ್ದಾರೆ.

ಕಳೆದ ಐಪಿಎಲ್ ಹರಾಜಿನಲ್ಲಿ 9.75 ಕೋಟಿ ರೂ.ಗೆ ತಮ್ಮ ಮೊದಲ ತಂಡ ಚೆನ್ನೈ ಸೂಪರ್ ಕಿಂಗ್ಸ್‌ಗೆ ಅಶ್ವಿನ್ ಮರಳಿದ್ದರು. 2009ರಿಂದ 2015ರವರೆಗೆ ಚೆನ್ನೈ ಸೂಪರ್ ಕಿಂಗ್ಸ್‌ ಪರ ಆಡಿದ್ದ ಅಶ್ವಿನ್ ಬಳಿಕ ಪಂಜಾಬ್ ಕಿಂಗ್ಸ್‌ ತಂಡದ ನಾಯಕರಾಗಿದ್ದರು. ನಂತರ ರಾಜಸ್ಥಾನ ರಾಯಲ್ಸ್‌ಗೆ ಸೇರಿದ್ದರು. ಚೆನ್ನೈ ಸೂಪರ್ ಕಿಂಗ್ಸ್‌ ತಂಡದಲ್ಲೇ ವೃತ್ತಿಜೀವನ ಅಂತ್ಯಗೊಳಿಸಬೇಕೆಂಬ ಆಸೆಯಿಂದ ಅಶ್ವಿನ್ ಮತ್ತೆ ಚೆನ್ನೈ ಜೆರ್ಸಿ ತೊಟ್ಟಿದ್ದರು ಎನ್ನಲಾಗಿದೆ. ಆದರೆ ಕಳೆದ ಋತುವಿನಲ್ಲಿ ಒಂಬತ್ತು ಪಂದ್ಯಗಳಲ್ಲಿ ಅಶ್ವಿನ್ ಕೇವಲ ಏಳು ವಿಕೆಟ್‌ಗಳನ್ನು ಮಾತ್ರ ಪಡೆದಿದ್ದರು. ಕಳೆದ ಆವೃತ್ತಿಯ ಐಪಿಎಲ್‌ನಲ್ಲಿ ಅಶ್ವಿನ್ ಬೌಲಿಂಗ್‌ನಲ್ಲೂ 9.1ರ ಎಕನಮಿಯಲ್ಲಿ ರನ್ ಬಿಟ್ಟುಕೊಡುವ ಮೂಲಕ ಸಾಕಷ್ಟು ದುಬಾರಿಯಾಗಿದ್ದರು. ಕೊನೆಗೆ ಅಶ್ವಿನ್ ಆಡುವ ಹನ್ನೊಂದರ ಬಳಗದಲ್ಲೂ ಸ್ಥಾನ ಪಡೆಯಲು ವಿಫಲವಾಗಿದ್ದರು.

ಐಪಿಎಲ್ ಬಳಿಕ ತಮಿಳುನಾಡು ಪ್ರೀಮಿಯರ್ ಲೀಗ್‌ನಲ್ಲಿ ಆಡಿದ್ದ ಅಶ್ವಿನ್ ವಿರುದ್ಧ ಬಾಲ್ ಟ್ಯಾಂಪರಿಂಗ್ ಆರೋಪ ಕೇಳಿಬಂದಿತ್ತು. ಆದರೆ ಇದು ಸುಳ್ಳು ಎಂದು ನಂತರ ಸ್ಪಷ್ಟವಾಗಿತ್ತು. ಕಳೆದ ವರ್ಷ ಅಂತಾರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತಿ ಘೋಷಿಸಿದ್ದ ಅಶ್ವಿನ್ ಸಕ್ರಿಯ ಕ್ರಿಕೆಟ್‌ನಿಂದಲೂ ನಿವೃತ್ತಿ ಘೋಷಿಸುವುದಕ್ಕೆ ಮುನ್ನವೇ ಚೆನ್ನೈ ತಂಡದಿಂದ ಬಿಡುಗಡೆ ಕೋರಿದ್ದಾರಾ ಎಂಬುದು ಸ್ಪಷ್ಟವಿಲ್ಲ. 

 

ಐಪಿಎಲ್‌ನಲ್ಲಿ ರಾಜಸ್ಥಾನ ರಾಯಲ್ಸ್‌ನಲ್ಲಿ ಅಶ್ವಿನ್ ಅವರಿಗೆ ನಾಯಕರಾಗಿದ್ದ ಕೇರಳದ ಸಂಜು ಸ್ಯಾಮ್ಸನ್ ಚೆನ್ನೈ ಸೂಪರ್ ಕಿಂಗ್ಸ್‌ಗೆ ಸೇರ್ಪಡೆಯಾಗಲಿದ್ದಾರೆ ಎಂಬ ವರದಿಗಳ ನಡುವೆಯೇ ಅಶ್ವಿನ್ ಚೆನ್ನೈ ತಂಡ ತೊರೆಯಲಿದ್ದಾರೆ ಎಂಬ ಸುದ್ದಿ ಹೊರಬಿದ್ದಿದೆ. ಕಳೆದ ವರ್ಷ ಆಸ್ಟ್ರೇಲಿಯಾ ಪ್ರವಾಸದ ವೇಳೆ ಅನಿರೀಕ್ಷಿತವಾಗಿ ಟೆಸ್ಟ್ ಕ್ರಿಕೆಟ್‌ನಿಂದ ಅಶ್ವಿನ್ ದಿಢೀರ್ ನಿವೃತ್ತಿ ಘೋಷಿಸಿದ್ದರು.

ಒಂದು ವೇಳೆ ರವಿಚಂದ್ರನ್ ಅಶ್ವಿನ್ ಅವರನ್ನು ರಿಲೀಸ್ ಮಾಡಿದರೇ, ಚೆನ್ನೈ ಸೂಪರ್ ಕಿಂಗ್ಸ್ ಫ್ರಾಂಚೈಸಿ ಪರ್ಸ್‌ಗೆ ಸುಮಾರು 10 ಕೋಟಿ ರುಪಾಯಿ ಸೇರ್ಪಡೆಯಾಗಲಿದೆ. ಕಳೆದ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ ನೀರಸ ಪ್ರದರ್ಶನ ತೋರಿದ್ದ ಮಹೇಂದ್ರ ಸಿಂಗ್ ಧೋನಿ ನೇತೃತ್ವದ ಚೆನ್ನೈ ಸೂಪರ್ ಕಿಂಗ್ಸ್‌, ಕೇವಲ 4 ಪಂದ್ಯಗಳನ್ನು ಗೆಲ್ಲುವ ಮೂಲಕ ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನ ಪಡೆಯುವ ಮೂಲಕ ಮುಖಭಂಗ ಅನುಭವಿಸಿತ್ತು. ಇದೀಗ 2026ರ ಐಪಿಎಲ್ ಟೂರ್ನಿಗೆ 5 ಬಾರಿಯ ಚಾಂಪಿಯನ್ ಈಗಿನಿಂದಲೇ ರಣತಂತ್ರ ಹೆಣೆಯುತ್ತಿದೆ.

ಮುಂಬರುವ ಐಪಿಎಲ್ ಟೂರ್ನಿಯಲ್ಲಿ ಮಹೇಂದ್ರ ಸಿಂಗ್ ಧೋನಿ ಮತ್ತೆ ಕಣಕ್ಕಿಳಿಯುತ್ತಾರಾ ಎನ್ನುವುದಕ್ಕೆ ಇನ್ನೂ ಉತ್ತರ ಸಿಕ್ಕಿಲ್ಲ. ಈ ಕುರಿತಂತೆ ಕೆಲದಿನಗಳ ಹಿಂದಷ್ಟೇ ಪ್ರತಿಕ್ರಿಯಿಸಿದ್ದ ಧೋನಿ, ಟೂರ್ನಿಗೆ ಇನ್ನೂ ಸಾಕಷ್ಟು ಸಮಯವಿದೆ. ಅಲ್ಲಿಯವರೆಗೆ ಫಿಟ್ ಆಗಿದ್ದರೇ ಮತ್ತೆ ಐಪಿಎಲ್ ಅಡುವುದಾಗಿ ಹೇಳಿದ್ದಾರೆ. ಅದಕ್ಕೆ ನಿಜಕ್ಕೂ ಧೋನಿ ಮುಂದಿನ ಸೀಸನ್‌ನಲ್ಲಿ ಪೂರ್ಣ ಪ್ರಮಾಣದ ವಿಕೆಟ್ ಕೀಪರ್ ಬ್ಯಾಟರ್ ಆಗಿ ಕಣಕ್ಕಿಳಿಯುತ್ತಾರೋ ಅಥವಾ ಸಬ್‌ಸ್ಟಿಟ್ಯೂಟ್ ಆಗಿ ಕಣಕ್ಕಿಳಿಯುತ್ತಾರೋ ಕಾದು ನೋಡಬೇಕಿದೆ.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಮಹಿಳಾ ಟಿ20: ಸರಣಿ ಜಯದ ಮೇಲೆ ಕಣ್ಣಿಟ್ಟ ಟೀಂ ಇಂಡಿಯಾ!
ವಿಜಯ್‌ ಹಜಾರೆ ಟೂರ್ನಿ: ಕೇರಳ ಎದುರು ಕರ್ನಾಟಕಕ್ಕೆ 2ನೇ ಜಯದ ಗುರಿ!