ಒಂದೇ ವಾರದಲ್ಲಿ ತಮ್ಮ ಕುಟುಂಬದ 10 ಮಂದಿಗೆ ಕೋವಿಡ್ ದೃಢಪಟ್ಟ ಆ ಭೀಕರ ಕ್ಷಣವನ್ನು ರವಿಚಂದ್ರನ್ ಅಶ್ವಿನ್ ಪತ್ನಿ ಪ್ರೀತಿ ನಾರಾಯಣನ್ ಟ್ವೀಟ್ ಮೂಲಕ ಬಿಚ್ಚಿಟ್ಟಿದ್ದಾರೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ
ಚೆನ್ನೈ(ಮೇ.01): ಟೀಂ ಇಂಡಿಯಾ ಕ್ರಿಕೆಟಿಗ ರವಿಚಂದ್ರನ್ ಅಶ್ವಿನ್ ಕುಟುಂಬ ಕೋವಿಡ್ ಅಟ್ಟಹಾಸಕ್ಕೆ ನಲುಗಿ ಹೋಗಿದ್ದು, ಒಂದು ವಾರದ ಅವಧಿಯಲ್ಲಿ ಅಶ್ವಿನ್ ಕುಟುಂಬದ 10 ಮಂದಿಗೆ ಕೋವಿಡ್ 19 ಸೋಂಕು ದೃಢಪಟ್ಟಿದ್ದು, ಆ ಭೀಕರ ಕ್ಷಣಗಳನ್ನು ಅಶ್ವಿನ್ ಪತ್ನಿ ಪ್ರೀತಿ ನಾರಾಯಣನ್ ಬಿಚ್ಚಿಟ್ಟಿದ್ದಾರೆ.
ಕೋವಿಡ್ 19 ಎರಡನೇ ಅಲೆ ಭಾರತವನ್ನು ಬೆಚ್ಚಿಬೀಳಿಸಿದೆ. ಕಳೆದೊಂದು ವಾರದಲ್ಲಿ ಭಾರತದಲ್ಲಿ ಪ್ರತಿನಿತ್ಯ 3 ಲಕ್ಷಕ್ಕೂ ಅಧಿಕ ಕೋವಿಡ್ ಪ್ರಕರಣಗಳು ಪತ್ತೆಯಾಗುತ್ತಿವೆ. ಕೋವಿಡ್ 19 ಬಿಸಿ ಇಂಡಿಯನ್ ಪ್ರೀಮಿಯರ್ ಲೀಗ್‌ಗೂ ತಟ್ಟಿದೆ. ಕೆಲ ದಿನಗಳ ಹಿಂದಷ್ಟೇ ಡೆಲ್ಲಿ ಕ್ಯಾಪಿಟಲ್ಸ್ ಅನುಭವಿ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ದಿಢೀರ್ ಎನ್ನುವಂತೆ ಐಪಿಎಲ್‌ನಿಂದ ಹಿಂದೆ ಸರಿದಿದ್ದರು.
undefined
ಕುಟುಂಬ ಸದಸ್ಯರಿಗೆ ಕೊರೋನಾ: IPLನಿಂದ ಹೊರ ಬಂದ ಅಶ್ವಿನ್
ಇದೀಗ ಅಶ್ವಿನ್ ಪತ್ನಿ ಪ್ರೀತಿ ನಾರಾಯಣನ್ ಸರಣಿ ಟ್ವೀಟ್‌ಗಳ ಮೂಲಕ ಕಳೆದೊಂದು ವಾರದಲ್ಲಿ ತಮ್ಮ ಕುಟುಂಬ ಅನುಭವಿಸಿದ ಕರಾಳ ದಿನಗಳನ್ನು ಮೆಲುಕು ಹಾಕಿದ್ದಾರೆ. ಒಂದೇ ವಾರದಲ್ಲಿ 6 ವಯಸ್ಕರು ಹಾಗೂ 4 ಮಕ್ಕಳಿಗೆ ಕೋವಿಡ್ 19 ಸೋಂಕು ದೃಢಪಟ್ಟಿತ್ತು. ಎಲ್ಲರೂ ವಿವಿಧ ನಗರಗಳ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದಷ್ಟು ಎಲ್ಲರೂ ಕೋವಿಡ್ ಲಸಿಕೆ ಪಡೆದುಕೊಳ್ಳಿ. ಇದೊಂದೆ ಕೋವಿಡ್ ವಿರುದ್ದ ಹೋರಾಡುವ ಅಸ್ತ್ರ ಎಂದು ಪ್ರೀತಿ ಕರೆಕೊಟ್ಟಿದ್ದಾರೆ.
Feeling ok enough to croak a tiny hi to all of you.6 adults and 4 children ended up testing+ the same week,with our kids being the vehicles of transmission - the core of my family,all down with the virus in different homes/hospitals..Nightmare of a week.1 of 3 parents back home.
— Wear a mask. Take your vaccine. (@prithinarayanan)ನನಗನಿಸುತ್ತೆ, ದೈಹಿಕ ಆರೋಗ್ಯಕ್ಕಿಂತ ಮಾನಸಿಕ ಆರೋಗ್ಯ ಮುಖ್ಯ. ಕಳೆದ 5 ರಿಂದ 8 ದಿನಗಳು ನನ್ನ ಪಾಲಿಗೆ ಅತ್ಯಂತ ಕ್ಲಿಷ್ಟಕರವಾಗಿತ್ತು. ಎಲ್ಲರೂ ಇದ್ದೂ, ಎಲ್ಲಾ ರೀತಿಯ ಸಹಾಯ ಮಾಡಿದರೂ, ಯಾರೊಬ್ಬರು ಜತೆಗಿರಲಿಲ್ಲ. ಇದೊಂದು ಅತ್ಯಂತ ಕೆಟ್ಟ ಐಸೋಲೆಷನ್ ರೋಗ ಎಂದು ಪ್ರೀತಿ ಟ್ವೀಟ್ ಮಾಡಿದ್ದಾರೆ.
I guess physical health will recover faster than mental health. Days 5-8 were the absolute worst for me. Everybody was there, offering help yet there's no one with you. Most isolating disease. Please do reach out and seek help.
— Wear a mask. Take your vaccine. (@prithinarayanan)ರವಿಚಂದ್ರನ್ ಅಶ್ವಿನ್ 14ನೇ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಪರ ಕೇವಲ 5 ಪಂದ್ಯವನ್ನಾಡಿದ್ದರು. ಇದಾದ ಬಳಿಕ ತಮ್ಮ ಕುಟುಂಬಸ್ಥರಿಗೆ ಕೋವಿಡ್ 19 ವೈರಸ್ ತಗುಲಿರುವ ವಿಚಾರ ತಿಳಿಯುತ್ತಿದ್ದಂಯೇ ಬಯೋ ಬಬಲ್ ತೊರೆದು ಮನಗೆ ವಾಪಾಸಾಗಿದ್ದರು
The headaches this virus causes need their own twitter thread.
— Wear a mask. Take your vaccine. (@prithinarayanan)2010ರಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿದ್ದ ಅಶ್ವಿನ್ ಭಾರತ ಪರ 78 ಟೆಸ್ಟ್, 111 ಏಕದಿನ ಹಾಗೂ 46 ಟಿ20 ಪಂದ್ಯಗಳನ್ನಾಡಿದ್ದಾರೆ. ಇನ್ನು 159 ಐಪಿಎಲ್ ಪಂದ್ಯಗಳನ್ನಾಡಿರುವ ಅನುಭವಿ ಆಫ್‌ಸ್ಪಿನ್ನರ್ 139 ವಿಕೆಟ್ ಕಬಳಿಸಿದ್ದಾರೆ.
ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್ ನ್ಯೂಸ್ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona