ರಾಹುಲ್ ದ್ರಾವಿಡ್ ಸ್ವಹಿತಾಸಕ್ತಿ ವಿಚಾರಣೆ ಅಂತ್ಯ; ಶೀಘ್ರದಲ್ಲಿ ತೀರ್ಪು!

Published : Nov 12, 2019, 10:01 PM IST
ರಾಹುಲ್ ದ್ರಾವಿಡ್ ಸ್ವಹಿತಾಸಕ್ತಿ ವಿಚಾರಣೆ ಅಂತ್ಯ; ಶೀಘ್ರದಲ್ಲಿ ತೀರ್ಪು!

ಸಾರಾಂಶ

ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿ ಮುಖ್ಯಸ್ಥ ರಾಹುಲ್ ದ್ರಾವಿಡ್ ಮೇಲಿನ ಸ್ವಹಿತಾಸಕ್ತಿ ಆರೋಪದ ತೀರ್ಪು ಶೀಘ್ರದಲ್ಲೇ ಹೊರಬೀಳಲಿದೆ. ಈ  ಕುರಿತು ಬಿಸಿಸಿಐ ಎಥಿಕ್ಸ್ ಆಫೀಸರ್ ಡಿಕೆ ಜೈನ್ ಪ್ರತಿಕ್ರಿಯೆ ನೀಡಿದ್ದಾರೆ.  

ಮುಂಬೈ(ನ.12): ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿ ಮುಖ್ಯಸ್ಥ ರಾಹುಲ್ ದ್ರಾವಿಡ್ ಮೇಲಿನ ಸ್ವಹಿತಾಸಕ್ತಿ ಆರೋಪದ ಕಾರಣ ವಿಚಾರಣೆ ನಡೆಸಿದ ಬಿಸಿಸಿಐ ಇದೀಗ ತೀರ್ಪು ಪ್ರಕಟಿಸಲಿದೆ. ಮಧ್ಯಪ್ರದೇಶ ಕ್ರಿಕೆಟ್ ಸಂಸ್ಥೆ ಸದಸ್ಯ ಸಂಜೀವ್ ಗುಪ್ತಾ ದೂರಿನ ಆಧಾರದಲ್ಲಿ ಬಿಸಿಸಿಐ ಎಥಿಕ್ಸ್ ಅಧಿಕಾರಿ ಡಿಕೆ ಜೈನ್ ವಿಚಾರಣೆ ನಡೆಸಿದ್ದರು. ಇದೀಗ ವಿಚಾರಣೆ ಪೂರ್ಣಗೊಂಡಿದೆ.

ಇದನ್ನೂ ಓದಿ: ಬೆಂಗ್ಳೂರಲ್ಲಿ ಗಂಗೂಲಿ-ದ್ರಾವಿಡ್ ಸುದೀರ್ಘ ಚರ್ಚೆ; NCAಗೆ ಹೊಸ ರೂಪ!.

ರಾಹುಲ್ ದ್ರಾವಿಡ್ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯಲ್ಲಿ ಚೇರ್ಮೆನ್  ಹಾಗೂ ಇಂಡಿಯಾ ಸೆಮೆಂಟ್ ಕಂಪನಿಯಲ್ಲಿ ಉದ್ಯೋಗಿಯಾಗಿದ್ದಾರೆ. ಎರಡೆರಡು ಹುದ್ದೆ ಹೊಂದುವುದು ಸ್ವಹಿತಾಸಕ್ತಿ ಸಂಘರ್ಷ ಎಂದು ಸಂಜೀವ್ ಗುಪ್ತಾ ದೂರು ನೀಡಿದ್ದರು. 

ಇದನ್ನೂ ಓದಿ: ಸ್ವಹಿತಾಸಕ್ತಿಗೆ ದ್ರಾವಿಡ್‌ ಒಳಪಡಲ್ಲ: BCCI ಸ್ಪಷ್ಟನೆ

ದೂರಿನ ಆಧಾರದಲ್ಲಿ ಡಿಕೆ ಜೈನ್, NCA ಚೇರ್ಮೆನ್ ದ್ರಾವಿಡ್‌ಗೂ ನೊಟೀಸ್ ನೀಡಿದ್ದರು. ಈ ಹಿನ್ನಲೆಯಲ್ಲಿ ಸೆಪ್ಟೆಂಬರ್ 26 ರಂದು ಬಿಸಿಸಿಐನ ಮುಂಬೈ ಕಚೇರಿಯಲ್ಲಿ ದ್ರಾವಿಡ್ ವಿಚಾರಣೆ ಎದುರಿಸಿದ್ದರು. ಬಳಿಕ ನವೆಂಬರ್ 11ಕ್ಕೆ ಎರಡನೆ ಬಾರಿ ಎಥಿಕ್ಸ್ ಆಫೀಸರ್ ಪ್ರಶ್ನೆಗೆ ಉತ್ತರಿಸಿದ್ದಾರೆ.

ಹಲವು ವಿಚಾರಗಳ ಕುರಿತು ಸ್ಪಷ್ಟತೆ ಬೇಕಿತ್ತು. ರಾಹುಲ್ ದ್ರಾವಿಡ್ ಹಾಗೂ ದೂರು ದಾರ ಸಂಜೀವ್ ಗುಪ್ತಾರನ್ನು ಕರೆಸಿ ಮಾಹಿತಿ ಕಲೆಹಾಕಿದ್ದೇವೆ. ಶೀಘ್ರದಲ್ಲೇ ತೀರ್ಪು ಪ್ರಕಟಿಸಲಿದೆ ಎಂದು ಬಿಸಿಸಿಐ ಎಥಿಕ್ಸ್ ಅಧಿಕಾರಿ ಡಿಕೆ ಜೈನ್ ಹೇಳಿದ್ದಾರೆ.
 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕ್ರೈಸ್ಟ್‌ಚರ್ಚ್ ಪವಾಡ: ಕಿವೀಸ್ ಎದುರು ಐತಿಹಾಸಿಕ ಡ್ರಾ ಸಾಧಿಸಿದ ವೆಸ್ಟ್ ಇಂಡೀಸ್!
20 ಮ್ಯಾಚ್ ಬಳಿಕ ಕೊನೆಗೂ ಟಾಸ್ ಗೆದ್ದ ಭಾರತ! ದಕ್ಷಿಣ ಆಫ್ರಿಕಾ ತಂಡದಲ್ಲಿ 2 ಬದಲಾವಣೆ!