ಕರ್ನಾಟಕ ಅಂಡರ್‌-14 ತಂಡಕ್ಕೆ ದ್ರಾವಿಡ್‌ ಪುತ್ರ

Suvarna News   | Asianet News
Published : Jan 11, 2020, 10:01 AM IST
ಕರ್ನಾಟಕ ಅಂಡರ್‌-14 ತಂಡಕ್ಕೆ ದ್ರಾವಿಡ್‌ ಪುತ್ರ

ಸಾರಾಂಶ

ಟೀಂ ಇಂಡಿಯಾ ಮಾಜಿ ನಾಯಕ, ಗ್ರೇಟ್ ವಾಲ್ ಖ್ಯಾತಿಯ ರಾಹುಲ್ ದ್ರಾವಿಡ್ ಪುತ್ರ ಇದೀಗ ಕ್ರಿಕೆಟ್‌ನಲ್ಲಿ ಮಹತ್ವದ ಹೆಜ್ಜೆ ಇಟ್ಟಿದ್ದಾನೆ. ದಿಟ್ಟ ಪ್ರದರ್ಶನದ ಮೂಲಕ ಕರ್ನಾಟಕ ಅಂಡರ್ 14 ತಂಡಕ್ಕೆ ಸಮಿತ್ ದ್ರಾವಿಡ್ ಎಂಟ್ರಿ ಕೊಟ್ಟಿದ್ದಾರೆ. 

ಬೆಂಗಳೂರು(ಜ.11): ದಿಗ್ಗಜ ಕ್ರಿಕೆಟಿಗ ರಾಹುಲ್‌ ದ್ರಾವಿಡ್‌ರ ಪುತ್ರ ಸಮಿತ್‌ ಮೊದಲ ಬಾರಿಗೆ ಕರ್ನಾಟಕ ತಂಡವನ್ನು ಪ್ರತಿನಿಧಿಸುವ ಅವಕಾಶ ಪಡೆದಿದ್ದಾರೆ. ಶುಕ್ರವಾರ ದಕ್ಷಿಣ ವಲಯ ಅಂಡರ್‌-14 ಟೂರ್ನಿಗೆ ಕರ್ನಾಟಕ ತಂಡವನ್ನು ಪ್ರಕಟಿಸಲಾಯಿತು. ಸಮಿತ್‌ ಆ ತಂಡದಲ್ಲಿ ಸ್ಥಾನಗಳಿಸಿದ್ದಾರೆ. 

ಇದನ್ನೂ ಓದಿ: ಭರ್ಜರಿ ದ್ವಿಶತಕ ಬಾರಿಸಿದ ದ್ರಾವಿಡ್‌ ಪುತ್ರ ಸಮಿತ್‌

ಬಲಗೈ ಬ್ಯಾಟ್ಸ್‌ಮನ್‌ ಆಗಿರುವ ಸಮಿತ್‌, ಆಯ್ಕೆಗಾಗಿ ನಡೆಸಿದ ಪಂದ್ಯಗಳಲ್ಲಿ ಅತ್ಯುತ್ತಮ ಪ್ರದರ್ಶನ ತೋರಿದ್ದರು. ಕೆಎಸ್‌ಸಿಎ ಅಂತರ ವಲಯ ಅಂಡರ-14 ಟೂರ್ನಿಯ ಪಂದ್ಯವೊಂದರಲ್ಲಿ ಸಮಿತ್‌ 201 ಹಾಗೂ ಅಜೇಯ 94 ರನ್‌ ಗಳಿಸಿದ್ದರು. ಜ.16ರಿಂದ 18ರ ವರೆಗೂ ಬೆಂಗಳೂರಲ್ಲಿ ದಕ್ಷಿಣ ವಲಯ ಟೂರ್ನಿ ನಡೆಯಲಿದೆ. ಮಲ್ಯ ಅದಿತಿ ಅಂತಾರಾಷ್ಟ್ರೀಯ ಶಾಲೆಯ ವಿದ್ಯಾರ್ಥಿಯಾಗಿರುವ ಸಮಿತ್‌ ಮೇಲೆ ಹೆಚ್ಚಿನ ನಿರೀಕ್ಷೆ ಇದೆ.

ಇದನ್ನೂ ಓದಿ: NCA ಸುಧಾರಣೆಗೆ ದ್ರಾವಿಡ್‌-ಗಂಗೂಲಿ ಸೂತ್ರ; ಬೆಂಗಳೂರಿನಲ್ಲೇ ಹೊಸ ಅಕಾಡೆಮಿ

ಸಮಿತ್‌ ದ್ರಾವಿಡ್‌, ಅಂಡರ್‌ 14 ಕೆಎಸ್‌ಸಿಎ ಅಂತರವಲಯ ಕ್ರಿಕೆಟ್‌ ಟೂರ್ನಿಯಲ್ಲಿ ಉಪಾಧ್ಯಕ್ಷರ ಇಲೆವೆನ್‌ ಪರ ದ್ವಿಶತಕ ಸಿಡಿಸಿದ್ದರು. ಧಾರವಾಡ ವಲಯ ವಿರುದ್ಧದ ಪಂದ್ಯದಲ್ಲಿ ಸಮಿತ್‌, ಮೊದಲ ಇನ್ನಿಂಗ್ಸಲ್ಲಿ 201 ಮತ್ತು ದ್ವಿತೀಯ ಇನ್ನಿಂಗ್ಸಲ್ಲಿ ಅಜೇಯ 94 ರನ್‌ಗಳಿಸಿದರು. ಅಲ್ಲದೇ 26 ರನ್‌ಗಳಿಗೆ 3 ವಿಕೆಟ್‌ ಪಡೆಯುವ ಮೂಲಕ ಆಲ್ರೌಂಡರ್‌ ಪ್ರದರ್ಶನ ತೋರಿದರು. ಈ ಪಂದ್ಯ ಡ್ರಾದಲ್ಲಿ ಅಂತ್ಯವಾಯಿತು.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಭಾರತ-ದಕ್ಷಿಣ ಆಫ್ರಿಕಾ 2ನೇ ಟಿ20: ಮತ್ತೊಂದು ಗೆಲುವಿನ ವಿಶ್ವಾಸದಲ್ಲಿ ಟೀಂ ಇಂಡಿಯಾ!
ಚಿನ್ನಸ್ವಾಮಿಯಲ್ಲಿ ಮತ್ತೆ ಐಪಿಎಲ್ : ಇಂದು ನಿರ್ಧಾರ