ಗುಡ್‌ ನ್ಯೂಸ್ ಕೊಟ್ಟ ಬಿಸಿಸಿಐ: ರಾಹುಲ್ ದ್ರಾವಿಡ್ ಟೀಂ ಇಂಡಿಯಾ ಹೆಡ್‌ ಕೋಚ್ ಆಗಿ ಮುಂದುವರಿಕೆ..!

Published : Nov 29, 2023, 03:47 PM IST
ಗುಡ್‌ ನ್ಯೂಸ್ ಕೊಟ್ಟ ಬಿಸಿಸಿಐ: ರಾಹುಲ್ ದ್ರಾವಿಡ್ ಟೀಂ ಇಂಡಿಯಾ ಹೆಡ್‌ ಕೋಚ್ ಆಗಿ ಮುಂದುವರಿಕೆ..!

ಸಾರಾಂಶ

ರಾಹುಲ್ ದ್ರಾವಿಡ್ 2021ರ ನವೆಂಬರ್‌ನಲ್ಲಿ ಎರಡು ವರ್ಷಗಳ ಅವಧಿಗೆ ಟೀಂ ಇಂಡಿಯಾ ಹೆಡ್ ಕೋಚ್ ಆಗಿ ನೇಮಕವಾಗಿದ್ದರು. ಈ ಒಪ್ಪಂದಾವಧಿ 2023ರ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯವರೆಗೆ ನಿಗದಿಯಾಗಿತ್ತು. ರಾಹುಲ್ ದ್ರಾವಿಡ್ ಮಾರ್ಗದರ್ಶನದಲ್ಲಿ ಟೀಂ ಇಂಡಿಯಾ ಮೂರು ಮಾದರಿಯ ಕ್ರಿಕೆಟ್‌ನಲ್ಲೂ ನಂ.1 ಸ್ಥಾನದಲ್ಲಿ ಭದ್ರವಾಗಿದೆ.

ಮುಂಬೈ(ನ.29): ಐಸಿಸಿ ಏಕದಿನ ವಿಶ್ವಕಪ್ ಫೈನಲ್ ಸೋತು ನಿರಾಸೆಯಲ್ಲಿರುವ ಟೀಂ ಇಂಡಿಯಾ ಅಭಿಮಾನಿಗಳಿಗೆ ಬಿಸಿಸಿಐ ಇದೀಗ ಗುಡ್‌ ನ್ಯೂಸ್ ನೀಡಿದೆ. ಮುಂಬರುವ ಟಿ20 ವಿಶ್ವಕಪ್ ಟೂರ್ನಿಯನ್ನು ಗಮನದಲ್ಲಿಟ್ಟುಕೊಂಡು ರಾಹುಲ್ ದ್ರಾವಿಡ್ ಅವರನ್ನೇ ಟೀಂ ಇಂಡಿಯಾ ಹೆಡ್ ಕೋಚ್ ಆಗಿ ಮುಂದುವರೆಸುವ ತೀರ್ಮಾನವನ್ನು ತೆಗೆದುಕೊಂಡಿದೆ. ಬಿಸಿಸಿಐ ಎಲ್ಲಿಯವರೆಗೆ ರಾಹುಲ್ ದ್ರಾವಿಡ್ ಟೀಂ ಇಂಡಿಯಾ ಹೆಡ್ ಕೋಚ್ ಆಗಿರಲಿದ್ದಾರೆ ಎನ್ನುವ ಕುರಿತಂತೆ ಸ್ಪಷ್ಟನೆ ನೀಡಿಲ್ಲವಾದರೂ, ಕನಿಷ್ಠ 2024ರ ಜೂನ್‌ನಲ್ಲಿ ನಡೆಯಲಿರುವ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯವರೆಗೆ ರಾಹುಲ್ ದ್ರಾವಿಡ್ ಹೆಡ್‌ ಕೋಚ್ ಆಗಿರಲಿದ್ದಾರೆ ಎನ್ನಲಾಗುತ್ತಿದೆ.

ರಾಹುಲ್ ದ್ರಾವಿಡ್ 2021ರ ನವೆಂಬರ್‌ನಲ್ಲಿ ಎರಡು ವರ್ಷಗಳ ಅವಧಿಗೆ ಟೀಂ ಇಂಡಿಯಾ ಹೆಡ್ ಕೋಚ್ ಆಗಿ ನೇಮಕವಾಗಿದ್ದರು. ಈ ಒಪ್ಪಂದಾವಧಿ 2023ರ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯವರೆಗೆ ನಿಗದಿಯಾಗಿತ್ತು. ರಾಹುಲ್ ದ್ರಾವಿಡ್ ಮಾರ್ಗದರ್ಶನದಲ್ಲಿ ಟೀಂ ಇಂಡಿಯಾ ಮೂರು ಮಾದರಿಯ ಕ್ರಿಕೆಟ್‌ನಲ್ಲೂ ನಂ.1 ಸ್ಥಾನದಲ್ಲಿ ಭದ್ರವಾಗಿದೆ. ಕಳೆದ ಟಿ20 ವಿಶ್ವಕಪ್‌ನಲ್ಲಿ ದ್ರಾವಿಡ್ ಮಾರ್ಗದರ್ಶನದ ಟೀಂ ಇಂಡಿಯಾ ಸೆಮೀಸ್‌ನಲ್ಲಿ ಮುಗ್ಗರಿಸಿದರೆ, ಇತ್ತೀಚೆಗಷ್ಟೇ ತವರಿನಲ್ಲಿ ನಡೆದ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಟೀಂ ಇಂಡಿಯಾ ಅಜೇಯವಾಗಿ ಫೈನಲ್ ಪ್ರವೇಶಿಸಿತ್ತು. ಆದರೆ ಫೈನಲ್‌ನಲ್ಲಿ ಆಸ್ಟ್ರೇಲಿಯಾ ಎದುರು ಸೋಲು ಕಾಣುವ ಮೂಲಕ ರನ್ನರ್ ಅಪ್ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿತ್ತು, 

ಮುಂಬೈನಲ್ಲಿ ಪಾಂಡ್ಯ ಆಗಮನದಿಂದ ಅಂತರ್ಯುದ್ಧ..! ಕ್ಯಾಪ್ಟನ್ ಆಗೋ ಬುಮ್ರಾ ಕನಸು ನುಚ್ಚುನೂರಾಯ್ತಾ..?

ಮುಂದಿನ ತಿಂಗಳು 10ರಿಂದ ದಕ್ಷಿಣ ಆಫ್ರಿಕಾ ಪ್ರವಾಸದೊಂದಿಗೆ ಟೀಂ ಇಂಡಿಯಾ ಜತೆಗಿನ ಎರಡನೇ ಹಂತದ ದ್ರಾವಿಡ್ ಕೋಚ್ ಪಯಣ ಆರಂಭವಾಗಲಿದೆ. ದಕ್ಷಿಣ ಆಫ್ರಿಕಾ ಪ್ರವಾಸದಲ್ಲಿ ಟೀಂ ಇಂಡಿಯಾ ಮೂರು ಟಿ20, ಮೂರು ಏಕದಿನ ಹಾಗೂ ಎರಡು ಪಂದ್ಯಗಳ ಟಿ20 ಸರಣಿಯನ್ನಾಡಲಿದೆ. ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಹಾಗೂ ಬಿಸಿಸಿಐ ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್‌ ಅಗರ್‌ಕರ್, ರಾಹುಲ್ ದ್ರಾವಿಡ್ 2024ರವರೆಗೆ ಟೀಂ ಇಂಡಿಯಾ ಹೆಡ್‌ಕೋಚ್ ಆಗಿರಲಿ ಎಂದು ಬಯಸಿದ್ದರಿಂದಾಗಿ ಬಿಸಿಸಿಐ ಈ ನಿರ್ಧಾರ ಕೈಗೊಂಡಿದೆ.

ಮ್ಯಾಕ್‌ವೆಲ್‌ ಅಬ್ಬರದ ಎದುರು 223 ರನ್‌ ಬಾರಿಸಿಯೂ ಸೋಲು ಕಂಡ ಭಾರತ

ಈ ಕುರಿತಂತೆ ಪ್ರತಿಕ್ರಿಯಿಸಿರುವ ರಾಹುಲ್ ದ್ರಾವಿಡ್, "ಈ ಅವಧಿಯಲ್ಲಿ ನನ್ನ ಮೇಲೆ ನಂಬಿಕೆಯಿಟ್ಟಿದ್ದಕ್ಕೆ ಹಾಗೂ ನನ್ನ ದೃಷ್ಟಿಕೋನಕ್ಕೆ ಸಮ್ಮತಿ ಸೂಚಿಸಿದ್ದಕ್ಕೆ ಬಿಸಿಸಿಐ ಹಾಗೂ ಪದಾಧಿಕಾರಿಗಳಿಗೆ ಧನ್ಯವಾದಗಳನ್ನು ಅರ್ಪಿಸುತ್ತೇನೆ. ಈ ಹುದ್ದೆಯೂ ಸಾಕಷ್ಟು ಮನೆಯಿಂದ ಹೊರಗೆ ಇರುವಂತೆ ಮಾಡುತ್ತದೆ, ನನಗಾಗಿ ಈ ತ್ಯಾಗವನ್ನು ಮಾಡಿದ ನನ್ನ ಕುಟುಂಬಕ್ಕೆ ಧನ್ಯವಾದಗಳನ್ನು ಅರ್ಪಿಸುತ್ತೇನೆ. ತೆರೆಮರೆಯಲ್ಲಿ ಅವರು ನೀಡುತ್ತಿರುವ ಸಹಕಾರವು ಅನನ್ಯವಾದದ್ದು. ವಿಶ್ವಕಪ್ ನಂತರ ನಾವು ಹೊಸ ಸವಾಲಿಗೆ ಸಜ್ಜಾಗಿದ್ದೇವೆ ಎಂದು ರಾಹುಲ್ ದ್ರಾವಿಡ್ ಹೇಳಿದ್ದಾರೆ.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಸಂಜು ಸ್ಯಾಮ್ಸನ್ ನನ್ನ ಅಣ್ಣನಿದ್ದಂತೆ; ಇಬ್ಬರ ಪೈಪೋಟಿ ಬಗ್ಗೆ ಮನಬಿಚ್ಚಿ ಮಾತಾಡಿದ ಜಿತೇಶ್ ಶರ್ಮಾ
ದಕ್ಷಿಣ ಆಫ್ರಿಕಾ ಎದುರು ಗೆದ್ದರೂ ನಿಂತಿಲ್ಲ ಚಿಂತೆ: 2ನೇ ಟಿ20ಗೆ ಭಾರತ ತಂಡದಲ್ಲಿ ಬದಲಾವಣೆ?