
ಜೈಪುರ(ಏ.23): ರಾಜಸ್ಥಾನ ರಾಯಲ್ಸ್ ಹಾಗೂ ಮುಂಬೈ ಇಂಡಿಯನ್ಸ್ ನಡುವೆ ಸೋಮವಾರ ಇಲ್ಲಿನ ಸವಾಯಿ ಮಾನ್‌ಸಿಂಗ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಆತಿಥೇಯ ರಾಜಸ್ಥಾನ ರಾಯಲ್ಸ್ ತಂಡವು 9 ವಿಕೆಟ್ ಭರ್ಜರಿ ಗೆಲುವು ಸಾಧಿಸುವ ಮೂಲಕ 17ನೇ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ ಪ್ಲೇ ಆಫ್‌ಗೆ ಒಂದು ಹೆಜ್ಜೆಯಿಟ್ಟಾಗಿದೆ. ಈ ಸಂದೀಪ್ ಶರ್ಮಾ ಮಿಂಚಿನ ಬೌಲಿಂಗ್ ಹಾಗೂ ಯಶಸ್ವಿ ಜೈಸ್ವಾಲ್ ಅಜೇಯ ಶತಕದ ನೆರವಿನಿಂದು ಸಂಜು ಸ್ಯಾಮ್ಸನ್ ಪಡೆ ಭರ್ಜರಿ ಗೆಲುವು ಸಾಧಿಸುವಲ್ಲಿ ಯಶಸ್ವಿಯಾಗಿದೆ.
ಇನ್ನು ಕಳೆದ ಬಾರಿಯ ಐಪಿಎಲ್ ಆಟಗಾರರ ಹರಾಜಿನಲ್ಲಿ ಅನುಭವಿ ವೇಗಿ ಸಂದೀಪ್ ಶರ್ಮಾ ಅನ್‌ಸೋಲ್ಡ್ ಆಗಿದ್ದರು. ಆದರೆ ಟೂರ್ನಿ ಆರಂಭಕ್ಕೂ ಮುನ್ನ ಗಾಯದ ಸಮಸ್ಯೆಯಿಂದಾಗಿ ಪ್ರಸಿದ್ಧ್ ಕೃಷ್ಣ ಐಪಿಎಲ್‌ನಿಂದ ಹೊರಬಿದ್ದ ಹಿನ್ನಲೆಯಲ್ಲಿ ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯು ಪ್ರಸಿದ್ಧ್‌ಗೆ ಬದಲಿ ಆಟಗಾರನಾಗಿ ಸಂದೀಪ್ ಶರ್ಮಾ ಅವರನ್ನು ತಂಡಕ್ಕೆ ಸೇರಿಸಿಕೊಂಡಿತ್ತು. ಇದೀಗ ಮುಂಬೈ ಇಂಡಿಯನ್ಸ್ ಎದುರು ಶಿಸ್ತುಬದ್ಧ ದಾಳಿ ನಡೆಸಿ 5 ವಿಕೆಟ್ ಕಬಳಿಸುವ ಮೂಲಕ ಪಂದ್ಯಶ್ರೇಷ್ಠ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡ ಸಂದೀಪ್ ಶರ್ಮಾ ಬಗ್ಗೆ ನಾಯಕ ಸಂಜು ಸ್ಯಾಮ್ಸನ್ ಮೆಚ್ಚುಗೆಯ ಮಾತುಗಳನ್ನಾಡಿದ್ದಾರೆ. ಇನ್ನು ಮುಂದೆ ಸಂದೀಪ್ ಶರ್ಮಾ ಅವರ ಆಡುವ ಪ್ರತಿ ಮ್ಯಾಚ್ ಕೂಡಾ ನಮಗೆ ಬೋನಸ್ ಇದ್ದ ಹಾಗೆ ಎಂದಿದ್ದಾರೆ.
ICC T20 World Cup 2024: ಭಾರತ ಸಂಭಾವ್ಯ ತಂಡದಲ್ಲಿ ಯಾರಿಗೆಲ್ಲಾ ಸ್ಥಾನ? ಇಲ್ಲಿದೆ ಕಂಪ್ಲೀಟ್ ಡೀಟೈಲ್ಸ್
ಸಂದೀಪ್ ಶರ್ಮಾ ಮುಂಬೈ ಇಂಡಿಯನ್ಸ್ ಎದುರು ಕೇವಲ 18 ರನ್ ನೀಡಿ 5 ವಿಕೆಟ್ ಕಬಳಿಸುವ ಮೂಲಕ, ಐಪಿಎಲ್ ಇತಿಹಾಸದಲ್ಲೇ ರಾಜಸ್ಥಾನ ರಾಯಲ್ಸ್ ಪರ ಮೂರನೇ ಅತ್ಯುತ್ತಮ ಬೌಲಿಂಗ್ ಪ್ರದರ್ಶನ ಮಾಡಿ ಗಮನ ಸೆಳೆದಿದ್ದಾರೆ. ಈ ಮೊದಲು ಸೋಹೆಲ್ ತನ್ವೀರ್ ಹಾಗೂ ಜೇಮ್ಸ್ ಫಾಕ್ನರ್ ರಾಜಸ್ಥಾನ ರಾಯಲ್ಸ್ ಪರ 5+ ವಿಕೆಟ್ ಕಬಳಿಸಿದ ಸಾಧನೆ ಮಾಡಿದ್ದಾರೆ.
ಸಂದೀಪ್ ಶರ್ಮಾ ಮುಂಬೈ ಇಂಡಿಯನ್ಸ್ ತಂಡದ ಅಪಾಯಕಾರಿ ಬ್ಯಾಟರ್‌ಗಳಾದ ಇಶಾನ್ ಕಿಶನ್, ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ, ಟಿಮ್ ಡೇವಿಡ್ ಹಾಗೂ ಗೆರಾಲ್ಡ್ ಕೋಟ್ಜೀ ಅವರನ್ನು ಬಲಿ ಪಡೆಯುವಲ್ಲಿ ಯಶಸ್ವಿಯಾದರು. ಪರಿಣಾಮ ರಾಜಸ್ಥಾನ ರಾಯಲ್ಸ್ ತಂಡವು ಮುಂಬೈ ಇಂಡಿಯನ್ಸ್ ಪಡೆಯನ್ನು ಕೇವಲ 179 ರನ್‌ಗಳಿಗೆ ಕಟ್ಟಿಹಾಕುವಲ್ಲಿ ಯಶಸ್ವಿಯಾಯಿತು. ಇನ್ನು ಸ್ಪರ್ಧಾತ್ಮಕ ಗುರಿ ಬೆನ್ನತ್ತಿದ ರಾಜಸ್ಥಾನ ರಾಯಲ್ಸ್ ತಂಡವು ಕೇವಲ ಒಂದು ವಿಕೆಟ್ ಕಳೆದುಕೊಂಡು, ಇನ್ನೂ 8 ಎಸೆತ ಬಾಕಿ ಇರುವಂತೆಯೇ ಗೆಲುವಿನ ನಗೆ ಬೀರಿತು.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.