Ranchi Test: ಟಾಸ್ ಗೆದ್ದ ಇಂಗ್ಲೆಂಡ್ ಬ್ಯಾಟಿಂಗ್ ಆಯ್ಕೆ; ಟೀಂ ಇಂಡಿಯಾ ಪರ ಆರ್‌ಸಿಬಿ ವೇಗಿ ಪಾದಾರ್ಪಣೆ..!

By Naveen Kodase  |  First Published Feb 23, 2024, 9:12 AM IST

ಭಾರತ ತಂಡದಲ್ಲಿ ಅನುಭವಿ ವೇಗಿ ಜಸ್ಪ್ರೀತ್ ಬುಮ್ರಾಗೆ ವಿಶ್ರಾಂತಿ ನೀಡಲಾಗಿದ್ದು, ಆಕಾಶ್ ದೀಪ್ ಟೆಸ್ಟ್ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿದ್ದಾರೆ. ಆರ್‌ಸಿಬಿ ಕ್ರಿಕೆಟಿಗ ಆಕಾಶ್‌ ದೀಪ್ 313ನೇ ಆಟಗಾರನಾಗಿ ಟೆಸ್ಟ್ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿದರು. ಟೀಂ ಇಂಡಿಯಾ ಹೆಡ್‌ ಕೋಚ್ ರಾಹುಲ್ ದ್ರಾವಿಡ್ ಟೆಸ್ಟ್ ಕ್ಯಾಪ್ ನೀಡುವ ಮೂಲಕ ಸ್ವಾಗತಿಸಿದರು.

ರಾಂಚಿ(ಫೆ.23): ಭಾರತ ಹಾಗೂ ಇಂಗ್ಲೆಂಡ್ ನಡುವಿನ ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದ ಇಂಗ್ಲೆಂಡ್ ತಂಡದ ನಾಯಕ ಬೆನ್ ಸ್ಟೋಕ್ಸ್ ಮೊದಲು ಬ್ಯಾಟಿಂಗ್ ಮಾಡುವ ತೀರ್ಮಾನ ತೆಗೆದುಕೊಂಡಿದ್ದಾರೆ. ಇಂಗ್ಲೆಂಡ್ ತಂಡದಲ್ಲಿ ಎರಡು ಬದಲಾವಣೆ ಮಾಡಲಾಗಿದ್ದು, ಭಾರತ ತಂಡದ ಪರ ಆರ್‌ಸಿಬಿ ವೇಗಿ ಆಕಾಶ್ ದೀಪ್ ಟೆಸ್ಟ್ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿದ್ದಾರೆ.

5 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ರೋಹಿತ್ ಶರ್ಮಾ ನೇತೃತ್ವದ ಟೀಂ ಇಂಡಿಯಾ ಈಗಾಗಲೇ 2-1ರ ಮುನ್ನಡೆ ಸಾಧಿಸಿದ್ದು, ಇನ್ನೊಂದು ಟೆಸ್ಟ್ ಪಂದ್ಯ ಬಾಕಿ ಇರುವಂತೆಯೇ ಟೆಸ್ಟ್ ಸರಣಿ ಕೈವಶ ಮಾಡಿಕೊಳ್ಳಲು ಎದುರು ನೋಡುತ್ತಿದೆ. ಇಂಗ್ಲೆಂಡ್ ತಂಡದಲ್ಲಿ ಎರಡು ಬದಲಾವಣೆ ಮಾಡಲಾಗಿದ್ದು, ಮಾರ್ಕ್‌ ವುಡ್ ಬದಲಿಗೆ ಓಲಿ ರಾಬಿನ್‌ಸನ್ ಹಾಗೂ ರೆಹಾನ್ ಅಹಮ್ಮದ್ ಬದಲಿಗೆ ಶೋಯೆಬ್ ಬಷೀರ್ ತಂಡ ಕೂಡಿಕೊಂಡಿದ್ದಾರೆ.

Latest Videos

undefined

ಭಾರತ ತಂಡದಲ್ಲಿ ಅನುಭವಿ ವೇಗಿ ಜಸ್ಪ್ರೀತ್ ಬುಮ್ರಾಗೆ ವಿಶ್ರಾಂತಿ ನೀಡಲಾಗಿದ್ದು, ಆಕಾಶ್ ದೀಪ್ ಟೆಸ್ಟ್ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿದ್ದಾರೆ. ಆರ್‌ಸಿಬಿ ಕ್ರಿಕೆಟಿಗ ಆಕಾಶ್‌ ದೀಪ್ 313ನೇ ಆಟಗಾರನಾಗಿ ಟೆಸ್ಟ್ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿದರು. ಟೀಂ ಇಂಡಿಯಾ ಹೆಡ್‌ ಕೋಚ್ ರಾಹುಲ್ ದ್ರಾವಿಡ್ ಟೆಸ್ಟ್ ಕ್ಯಾಪ್ ನೀಡುವ ಮೂಲಕ ಸ್ವಾಗತಿಸಿದರು.

ರಾಂಚಿ ಟೆಸ್ಟ್‌ಗೆ ಉಭಯ ತಂಡಗಳ ಆಟಗಾರರ ಪಟ್ಟಿ ಹೀಗಿದೆ

ಭಾರತ: ರೋಹಿತ್‌ ಶರ್ಮಾ (ನಾಯಕ), ಯಶಸ್ವಿ ಜೈಸ್ವಾಲ್‌, ಶುಭ್‌ಮನ್‌ ಗಿಲ್‌, ರಜತ್ ಪಾಟೀದಾರ್‌, ಸರ್ಫರಾಜ್‌ ಖಾನ್, ಧೃವ್ ಜುರೆಲ್‌, ರವೀಂದ್ರ ಜಡೇಜಾ, ರವಿಚಂದ್ರನ್ ಅಶ್ವಿನ್‌, ಕುಲ್ದೀಪ್‌ ಯಾದವ್, ಮೊಹಮ್ಮದ್ ಸಿರಾಜ್‌, ಆಕಾಶ್‌ ದೀಪ್.

ಇಂಗ್ಲೆಂಡ್‌ (ಆಡುವ XI): ಕ್ರಾಲಿ, ಡಕೆಟ್‌, ಓಲಿ ಪೋಪ್‌, ಜೋ ರೂಟ್‌, ಬೇರ್‌ಸ್ಟೋವ್‌, ಸ್ಟೋಕ್ಸ್‌(ನಾಯಕ), ಫೋಕ್ಸ್‌, ಹಾರ್ಟ್ಲಿ, ಬಶೀರ್‌, ರಾಬಿನ್ಸನ್‌, ಆ್ಯಂಡರ್‌ಸನ್‌.

ಪಂದ್ಯ ಆರಂಭ: ಬೆಳಗ್ಗೆ 9.30ಕ್ಕೆ
ನೇರ ಪ್ರಸಾರ: ಸ್ಪೋರ್ಟ್ಸ್‌ 18, ಜಿಯೋ ಸಿನಿಮಾ

click me!