
ರಾಂಚಿ[ಅ.20]: ರೋಹಿತ್ ಶರ್ಮಾ ಮಿಂಚಿನ ದ್ವಿಶತಕ[212], ಅಜಿಂಕ್ಯ ರಹಾನೆ ಆಕರ್ಷಕ ಶತಕ[115], ರವೀಂದ್ರ ಜಡೇಜಾ[51] ಸಮಯೋಚಿತ ಅರ್ಧಶತಕ ಹಾಗೂ ಉಮೇಶ್ ಯಾದವ್[31] ಸಿಡಿಲಬ್ಬರದ ಬ್ಯಾಟಿಂಗ್ ನೆರವಿನಿಂದ ಭಾರತ ಮೊದಲ ಇನಿಂಗ್ಸ್’ನಲ್ಲಿ 9 ವಿಕೆಟ್ ಕಳೆದುಕೊಂಡು 497 ರನ್ ಬಾರಿಸಿ ಡಿಕ್ಲೇರ್ ಮಾಡಿಕೊಂಡಿದೆ.
ರಾಂಚಿ ಟೆಸ್ಟ್: ರೋಹಿತ್ ಶರ್ಮಾ ಭರ್ಜರಿ ಡಬಲ್ ಸೆಂಚುರಿ
ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ದುಕೊಂಡಿದ್ದ ಭಾರತ ಉತ್ತಮ ಆರಂಭ ಪಡೆಯಲು ವಿಫಲವಾಗಿತ್ತು. ತಂಡದ ಮೊತ್ತ 39 ರನ್’ಗಳಾಗುವಷ್ಟರಲ್ಲಿ ಮೂವರು ಬ್ಯಾಟ್ಸ್’ಮನ್’ಗಳು ಪೆವಿಲಿಯನ್ ಸೇರಿದ್ದರು. ಈ ವೇಳೆ ಜತೆಯಾದ ರೋಹಿತ್ ಶರ್ಮಾ-ಅಜಿಂಕ್ಯ ರಹಾನೆ ದ್ವಿಶತಕದ[267] ಜತೆಯಾಟವಾಡುವ ಮೂಲಕ ತಂಡದ ಮೊತ್ತವನ್ನು ಮುನ್ನೂರರ ಗಡಿ ದಾಟಿಸಿದರು. ರಹಾನೆ 192 ಎಸೆತಗಳಲ್ಲಿ 17 ಬೌಂಡರಿ ಹಾಗೂ ಒಂದು ಸಿಕ್ಸರ್ ನೆರವಿನಿಂದ 115 ರನ್ ಬಾರಿಸಿ ವಿಕೆಟ್ ಒಪ್ಪಿಸಿದರು. ಆ ಬಳಿಕ ರೋಹಿತ್-ಜಡೇಜಾ ಜತೆ 64 ರನ್’ಗಳ ಜತೆಯಾಟ ನಿಭಾಯಿಸಿದರು.
ರಾಂಚಿ ಟೆಸ್ಟ್: ಶತಕ ಸಿಡಿಸಿ ವಿಕೆಟ್ ಒಪ್ಪಿಸಿದ ರಹಾನೆ
ರೋಹಿತ್ ಶರ್ಮಾ ಸಿಕ್ಸರ್ ಮೂಲಕ ಚೊಚ್ಚಲ ದ್ವಿಶತಕ ಪೂರೈಸಿದರು. 255 ಎಸೆತಗಳನ್ನು ಎದುರಿಸಿದ ರೋಹಿತ್ 28 ಬೌಂಡರಿ ಹಾಗೂ 6 ಸಿಕ್ಸರ್ ನೆರವಿನಿಂದ 212 ರನ್ ಬಾರಿಸಿ ರಬಾಡಗೆ ವಿಕೆಟ್ ಒಪ್ಪಿಸಿದರು. ಜಡೇಜಾ-ಸಾಹಾ 47 ರನ್’ಗಳ ಜತೆಯಾಟವಾಡಿ ತಂಡವನ್ನು ನಾನೂರ ಗಡಿ ದಾಟಿಸಿದರು. ಎಚ್ಚರಿಕೆಯ ಬ್ಯಾಟಿಂಗ್ ನಡೆಸಿದ ರವೀಂದ್ರ ಜಡೇಜಾ 119 ಎಸೆತಗಳಲ್ಲಿ 4 ಬೌಂಡರಿ ನೆರವಿನಿಂದ 51 ರನ್ ಬಾರಿಸಿ ಲಿಂಡೆಗೆ ಮೂರನೇ ಬಲಿಯಾದರು. ಕೊನೆಯಲ್ಲಿ ಸ್ಫೋಟಕ ಬ್ಯಾಟಿಂಗ್ ನಡೆಸಿದ ಉಮೇಶ್ ಯಾದವ್ 10 ಎಸೆತಗಳಲ್ಲಿ 5 ಸಿಕ್ಸರ್ ನೆರವಿನಿಂದ 31 ರನ್ ಬಾರಿಸಿ ವಿಕೆಟ್ ಒಪ್ಪಿಸಿದರು. ಶಮಿ 10 ರನ್ ಬಾರಿಸಿ ಅಜೇಯರಾಗುಳಿದರು.
ದಕ್ಷಿಣ ಆಫ್ರಿಕಾ ಪರ ಪದಾರ್ಪಣೆ ಮಾಡಿದ ಜಾರ್ಜ್ ಲಿಂಡೆ 113 ರನ್ ನೀಡಿ 4 ವಿಕೆಟ್ ಪಡೆದರು. ಇನ್ನು ರಬಾಡ 3 ಹಾಗೂ ಡೇನ್ ಪೀಟ್ ಹಾಗೂ ಆ್ಯನ್ರಿಚ್ ನೋರ್ಜೆ ತಲಾ ಒಂದೊಂದು ವಿಕೆಟ್ ಪಡೆದರು.
ಸಂಕ್ಷಿಪ್ತ ಸ್ಕೋರ್:
ಭಾರತ: 497/9
ರೋಹಿತ್ ಶರ್ಮಾ: 212
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.