
ರಾಂಚಿ[ಅ.19]: ಭಾರತ-ದಕ್ಷಿಣ ಆಫ್ರಿಕಾ ನಡುವಿನ ಮೂರನೇ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ಬ್ಯಾಟಿಂಗ್ ಆಯ್ದುಕೊಂಡಿದ್ದು, ಆರಂಭಿಕ ಆಘಾತ ಅನುಭವಿಸಿದೆ. ತಂಡದ ಮೊತ್ತ 12 ರನ್’ಗಳಾಗುವಷ್ಟರಲ್ಲಿ ಭಾರತದ ಮೊದಲ ವಿಕೆಟ್ ಪತನವಾಗಿದೆ.
ರಾಂಚಿ ಟೆಸ್ಟ್’ನಲ್ಲಿ ಇನಿಂಗ್ಸ್ ಆರಂಭಿಸಿದ ಭಾರತಕ್ಕೆ ಆರಂಭಿಕ ಆಘಾತ ಎದುರಾಗಿದೆ. ಕಳೆದ ಪಂದ್ಯದಲ್ಲಿ ದ್ವಿಶತಕ ಬಾರಿಸಿದ್ದ ಮಯಾಂಕ್ ಅಗರ್’ವಾಲ್ ಕೇವಲ 10 ರನ್ ಗಳಿಸಿ ವಿಕೆಟ್ ಒಪ್ಪಿಸಿದ್ದಾರೆ. ಕಗಿಸೋ ರಬಾಡ ಎಸೆತದಲ್ಲಿ ಡೀನ್ ಎಲ್ಗಾರ್’ಗೆ ಕ್ಯಾಚಿತ್ತು ಪೆವಿಲಿಯನ್ ಸೇರಿದರು. 7 ಓವರ್ ಮುಕ್ತಾಯದ ವೇಳೆಗೆ ಭಾರತ ಒಂದು ವಿಕೆಟ್ ಕಳೆದುಕೊಂಡು 12 ರನ್ ಬಾರಿಸಿದ್ದು, ರೋಹಿತ್ ಶರ್ಮಾ 2 ಹಾಗೂ ಪೂಜಾರ ಇನ್ನು ಖಾತೆ ತೆರೆದಿಲ್ಲ.
ರಾಂಚಿ ಟೆಸ್ಟ್: ಸರಣಿ ಕ್ಲೀನ್ ಸ್ವೀಪ್ ನಿರೀಕ್ಷೆಯಲ್ಲಿ ಟೀಂ ಇಂಡಿಯಾ
ಟಾಸ್ ಗೆದ್ದ ಭಾರತ ಒಂದು ಬದಲಾವಣೆಯೊಂದಿಗೆ ಕಣಕ್ಕಿಳಿದಿದೆ. ಇಶಾಂತ್ ಶರ್ಮಾಗೆ ವಿಶ್ರಾಂತಿ ನೀಡಿ ಶಾದಾಬ್ ನದೀಮ್’ಗೆ ತಂಡದಲ್ಲಿ ಅವಕಾಶ ನೀಡಲಾಗಿದೆ. ಹೀಗಾಗಿ ನದೀಮ್ ಟೆಸ್ಟ್ ಕ್ರಿಕೆಟ್’ಗೆ ಪದಾರ್ಪಣೆ ಮಾಡಿದ್ದಾರೆ.
ಇನ್ನು ದಕ್ಷಿಣ ಆಫ್ರಿಕಾ ಕಳೆದೆರಡು ಪಂದ್ಯಗಳಲ್ಲಿ ಮುಗ್ಗರಿಸಿದ್ದು, ಕೊನೆಯ ಪಂದ್ಯವನ್ನಾದರೂ ಗೆದ್ದು ಧನಾತ್ಮಕವಾಗಿ ಭಾರತ ಪ್ರವಾಸ ಮುಗಿಸಲು ಎದುರು ನೋಡುತ್ತಿದೆ. ಹೀಗಾಗಿ ಕೆಲ ರಣತಂತ್ರಗಳೊಂದಿಗೆ ಹರಿಣಗಳ ಪಡೆ ಕಣಕ್ಕಿಳಿದೆ. ಇದೀಗ ಕ್ವಿಂಟನ್ ಡಿಕಾಕ್ ಇನಿಂಗ್ಸ್ ಆರಂಭಿಸಲಿದ್ದಾರೆ. ಇನ್ನು ಕೇಶವ್ ಮಹರಾಜ್ ಬದಲಿಗೆ ಜಾರ್ಜ್ ಲಿಂಡೆಗೆ ತಂಡದಲ್ಲಿ ಸ್ಥಾನ ಕಲ್ಪಿಸಲಾಗಿದೆ. ಲಿಂಡೆ ಟೆಸ್ಟ್ ಕ್ರಿಕೆಟ್’ಗೆ ಪದಾರ್ಪಣೆ ಮಾಡಿದ್ದಾರೆ. ಇನ್ನು ಹೆನ್ರಿಚ್ ಕ್ಲಸೇನ್ ವಿಕೆಟ್ ಕೀಪಿಂಗ್ ಪಾತ್ರ ನಿಭಾಯಿಸಲಿದ್ಧಾರೆ.
ತಂಡಗಳು ಹೀಗಿವೆ:
ಭಾರತ
ದಕ್ಷಿಣ ಆಫ್ರಿಕಾ:
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.