ರಾಂಚಿ ಟೆಸ್ಟ್ ಪಂದ್ಯದಲ್ಲೂ ಭಾರತ ತಂಡ ಪ್ರವಾಸಿ ದಕ್ಷಿಣ ಆಫ್ರಿಕಾ ವಿರುದ್ಧ ಬಿಗಿ ಹಿಡಿತ ಸಾಧಿಸಿದೆ. ಎರಡನೇ ದಿನದಂತ್ಯಕ್ಕೆ ದಕ್ಷಿಣ ಆಫ್ರಿಕಾ ಕೇವಲ 9 ರನ್’ಗಳಿಗೆ 2 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದ್ದು, ಇನ್ನೂ 488 ರನ್’ಗಳ ಹಿನ್ನಡೆಯಲ್ಲಿದೆ. ಈ ಕುರಿತಾದ ವರದಿ ಇಲ್ಲಿದೆ ನೋಡಿ...
ರಾಂಚಿ[ಅ.20]: ಭಾರತ-ದಕ್ಷಿಣ ಆಫ್ರಿಕಾ ನಡುವಿನ ಮೂರನೇ ಟೆಸ್ಟ್ ಪಂದ್ಯದಲ್ಲಿ ಭಾರತ ಭರ್ಜರಿ ಪ್ರದರ್ಶನ ತೋರಿದ್ದು, ಎರಡನೇ ದಿನದಾಟದ ಅಂತ್ಯಕ್ಕೆ ದಕ್ಷಿಣ ಆಫ್ರಿಕಾ ತಂಡ 9 ರನ್’ಗಳಿಗೆ 2 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದೆ.
ಸೆಹ್ವಾಗ್’ಗಿಂದು 41ನೇ ಹುಟ್ಟುಹಬ್ಬದ ಸಂಭ್ರಮ
ವಿರಾಟ್ ಕೊಹ್ಲಿ ನೇತೃತ್ವದ ಟೀಂ ಇಂಡಿಯಾ 497 ರನ್’ಗಳಿಗೆ ಮೊದಲ ಇನಿಂಗ್ಸ್ ಡಿಕ್ಲೇರ್ ಮಾಡಿಕೊಂಡಿತು. ಇನ್ನು ಮೊದಲ ಇನಿಂಗ್ಸ್ ಆರಂಭಿಸಿದ ಹರಿಣಗಳ ಪಡೆಗೆ ಶಮಿ ಹಾಗೂ ಉಮೇಶ್ ಆಘಾತ ನೀಡಿದರು. ಶಮಿ ಮೊದಲ ಓವರ್’ನಲ್ಲೇ ಡೀನ್ ಎಲ್ಗಾರ್ ಅವರನ್ನು ಪೆವಿಲಿಯನ್ನಿಗಟ್ಟಿದರೆ, ಆರಂಭಿನಾಗಿ ಬಡ್ತಿ ಪಡೆದ ಕ್ವಿಂಟನ್ ಡಿಕಾಕ್’ಗೆ ಉಮೇಶ್ ಯಾದವ್ ತಾವೆಸೆದ ಮೊದಲ ಓವರ್’ನಲ್ಲೇ ಪೆವಿಲಿಯನ್ ಹಾದಿ ತೋರಿಸಿದರು. ಈ ಇಬ್ಬರು ಬ್ಯಾಟ್ಸ್’ಮನ್’ಗಳು ವೇದ್ದಿಮಾನ್ ಸಾಹಗೆ ಕ್ಯಾಚ್ ನೀಡಿ ಪೆವಿಲಿಯನ್ ಹಾದಿ ಹಿಡಿದರು.
undefined
ರಾಂಚಿ ಟೆಸ್ಟ್: ಟೀಂ ಇಂಡಿಯಾ ಡಿಕ್ಲೇರ್ @497/9
ಭಾರತೀಯ ಬ್ಯಾಟ್ಸ್’ಮನ್’ಗಳ ಅಬ್ಬರ: ಭಾರತ ತಂಡವು 224/3 ರನ್’ಗಳೊಂದಿಗೆ ಎರಡನೇ ದಿನದಾಟ ಆರಂಭಿಸಿದ ಭಾರತ ಭರ್ಜರಿ ಆರಂಭವನ್ನೇ ಪಡೆಯಿತು. ರೋಹಿತ್-ರಹಾನೆ ತಂಡದ ಮೊತ್ತವನ್ನು 300ರ ಗಡಿ ದಾಟಿಸಿದರು. ರಹಾನೆ 115 ರನ್ ಬಾರಿಸಿ ವಿಕೆಟ್ ಒಪ್ಪಿಸಿದರೆ, ಆರಂಭಿಕ ಬ್ಯಾಟ್ಸ್’ಮನ್ ರೋಹಿತ್ ಶರ್ಮಾ [212] ಚೊಚ್ಚಲ ದ್ವಿಶತಕ ಬಾರಿಸಿ ಪೆವಿಲಿಯನ್ ಹಾದಿ ಹಿಡಿದರು. ರವೀಂದ್ರ ಜಡೇಜಾ 51 ಹಾಗೂ ಉಮೇಶ್ ಯಾದವ್ ಸ್ಫೋಟಕ[5 ಸಿಕ್ಸರ್] 31 ರನ್ ಬಾರಿಸಿ ತಂಡ ಬೃಹತ್ ಮೊತ್ತ ಕಲೆಹಾಕಲು ನೆರವಾದರು.
ಸಂಕ್ಷಿಪ್ತ ಸ್ಕೋರ್:
ಭಾರತ: 497/9
ರೋಹಿತ್ ಶರ್ಮಾ: 212
ಜಾರ್ಜ್ ಲಿಂಡೆ: 133/4
ದಕ್ಷಿಣ ಆಫ್ರಿಕಾ: 9/2
ಡಿಕಾಕ್: 4
ಶಮಿ: 0/1
[* ಎರಡನೇ ದಿನದಾಟ ಮುಕ್ತಾಯದ ವೇಳೆಗೆ]