Ranji Trophy 2025–26: ಇಂದಿನಿಂದ ರಣಜಿ ಟ್ರೋಫಿ ಆರಂಭ; ಕರ್ನಾಟಕಕ್ಕೆ ಬಲಿಷ್ಠ ಸೌರಾಷ್ಟ್ರ ಚಾಲೆಂಜ್!

Published : Oct 15, 2025, 09:47 AM IST
Ranji Trophy

ಸಾರಾಂಶ

2025-26ನೇ ಸಾಲಿನ 91ನೇ ಆವೃತ್ತಿಯ ರಣಜಿ ಟ್ರೋಫಿ ಆರಂಭವಾಗಿದ್ದು, ಎರಡು ಹಂತಗಳಲ್ಲಿ ಟೂರ್ನಿ ನಡೆಯಲಿದೆ. ತನ್ನ ಮೊದಲ ಪಂದ್ಯದಲ್ಲಿ ಮಯಾಂಕ್ ಅಗರ್‌ವಾಲ್ ನಾಯಕತ್ವದ ಕರ್ನಾಟಕ ತಂಡವು ರಾಜ್‌ಕೋಟ್‌ನಲ್ಲಿ ಬಲಿಷ್ಠ ಸೌರಾಷ್ಟ್ರವನ್ನು ಎದುರಿಸಲಿದೆ.

ಬೆಂಗಳೂರು: 2025-26ನೇ ಸಾಲಿನ, 91ನೇ ಆವೃತ್ತಿಯ ರಣಜಿ ಟ್ರೋಫಿಗೆ ಬುಧವಾರ ಚಾಲನೆ ದೊರೆಯಲಿದೆ. ಎಲೈಟ್ ವಿಭಾಗದಲ್ಲಿ 32 ತಂಡಗಳು ಪ್ರಶಸ್ತಿಗಾಗಿ ಸೆಣಸಲಿದ್ದು, ಪ್ಲೇಟ್ ಚಾಂಪಿಯನ್‌ಶಿಪ್‌ 6 ತಂಡಗಳು ಹೋರಾಟ ನಡೆಸಲಿವೆ. ಒಟ್ಟಾರೆ 138 ಪಂದ್ಯಗಳು ನಡೆಯಲಿದೆ. ಭಾರತ ತಂಡದ ವೇಳಾಪಟ್ಟಿ ಟಿ20 ಪಂದ್ಯಗಳಿಂದ ತುಂಬಿರುವ ಕಾರಣ, ರಣಜಿ ಟ್ರೋಫಿಯಲ್ಲಿನ ಪ್ರದರ್ಶನ ಆಟಗಾರರಿಗೆ ಭಾರತ ಟೆಸ್ಟ್ ತಂಡದ ಬಾಗಿಲನ್ನು ತೆರೆಯುವ ಸಾಧ್ಯತೆ ಇಲ್ಲ. ಈ ವರ್ಷ

ಉಳಿದಿರುವುದು ದಕ್ಷಿಣ ಆಫ್ರಿಕಾ ವಿರುದ್ಧ 2 ಪಂದ್ಯಗಳ ಟೆಸ್ಟ್ ಸರಣಿಯಷ್ಟೇ. ವಿಂಡೀಸ್ ವಿರುದ್ಧ ಆಡಿದ ತಂಡವನ್ನೇ ಬಹುತೇಕ ಆಯ್ಕೆ ಮಾಡಲಾಗುತ್ತದೆ. ಇನ್ನು 2026ರ ದ್ವಿತೀಯಾರ್ಧದ ವರೆಗೂ ಭಾರತಕ್ಕೆ ಟೆಸ್ಟ್ ಸರಣಿಗಳಿಲ್ಲ.

2 ಹಂತ: ಕಳೆದ ಆವೃತ್ತಿಯಂತೆಯೇ ಈ ಸಲವೂ ಎರಡು ಹಂತಗಳಲ್ಲಿ ಟೂರ್ನಿ ನಡೆಯಲಿದೆ. ಮೊದಲ 5 ಸುತ್ತು ಅ.15ರಿಂದ ನ.19ರ ವರೆಗೂ ನಡೆಯಲಿದೆ. ಬಳಿಕ ಸಯ್ಯದ್ ಮುಸ್ತಾಕ್ ಅಲಿ ಟಿ20 (ನ.26-ಡಿ.18), ವಿಜಯ್ ಹಜಾರೆ ಏಕದಿನ (ಡಿ.26-23.18) ಟೂರ್ನಿಗಳು ನಡೆಯಲಿವೆ. ಇದಾದ ಬಳಿಕ ಜನವರಿ 22ರಿಂದ ರಣಜಿ

ಟ್ರೋಫಿ ಪುನಾರಂಭಗೊಳ್ಳಲಿದ್ದು, 2ನೇ ಹಂತದಲ್ಲಿ ಗುಂಪು ಹಂತದ ಇನ್ನೆರಡು ಪಂದ್ಯ, ನಾಕೌಟ್ ಪಂದ್ಯಗಳು ನಡೆಯಲಿವೆ. ಫೆ.24ರಿಂದ ಫೆ.28ರ ವರೆಗೂ ಫೈನಲ್ ನಿಗದಿಯಾಗಿದೆ.

ಟೂರ್ನಿ ಮಾದರಿ ಹೇಗೆ?

ಕಳೆದ ಆವೃತ್ತಿಯಂತೆಯೇ ಈ ಸಲವೂ ಎಲೈಟ್ ವಿಭಾಗದಲ್ಲಿ 32 ತಂಡಗಳನ್ನು ತಲಾ 8 ತಂಡಗಳಂತೆ 4 ಗುಂಪುಗಳಾಗಿ ವಿಂಗಡಿಸಲಾಗಿದೆ. ಗುಂಪಿನಲ್ಲಿ ಅಗ್ರ-2 ಸ್ಥಾನ ಪಡೆಯುವ ತಂಡಗಳು ಕ್ವಾರ್ಟರ್ ಫೈನಲ್ ಪ್ರವೇಶಿಸಲಿವೆ. ಪ್ಲೇಟ್ ವಿಭಾಗದಲ್ಲಿ 6 ತಂಡಗಳು ರೌಂಡ್ ರಾಬಿನ್ ಮಾದರಿಯಲ್ಲಿ ಸೆಣಸಲಿದ್ದು, ಅಗ್ರ-2 ತಂಡಗಳು ಫೈನಲ್‌ನಲ್ಲಿ ಆಡಲಿವೆ.

ಕರ್ನಾಟಕಕ್ಕೆ ಇಂದಿನಿಂದ ಸೌರಾಷ್ಟ್ರ ವಿರುದ್ಧ ಪಂದ್ಯ

ರಾಜ್‌ಕೋಟ್: ಕರ್ನಾಟಕ ತಂಡ ಎಲೈಟ್ 'ಬಿ' ಗುಂಪಿನಲ್ಲಿ ಸ್ಥಾನ ಪಡೆದಿದ್ದು, ಮೊದಲ ಸುತ್ತಿನಲ್ಲಿ ಬಲಿಷ್ಠ ಸೌರಾಷ್ಟ್ರ ವಿರುದ್ಧ ಸೆಣಸಲಿದ್ದು, ಬುಧವಾರದಿಂದ ಆರಂಭಗೊಳ್ಳಲಿರುವ ಪಂದ್ಯಕ್ಕೆ ರಾಜ್‌ಕೋಟ್ ಆತಿಥ್ಯ ವಹಿಸಲಿದೆ. ಕರ್ನಾಟಕ ತಂಡವನ್ನು ಹಿರಿಯ ಬ್ಯಾಟರ್ ಮಯಾಂಕ್ ಅಗರ್‌ವಾಲ್ ಮುನ್ನಡೆಸಲಿದ್ದು, ಕರುಣ್ ನಾಯ‌ರ್ ರಾಜ್ಯಕ್ಕೆ ಮರಳಿರುವುದು ತಂಡದ ಬ್ಯಾಟಿಂಗ್ ಬಲ ಹೆಚ್ಚಿಸಿದೆ.

ವಿಂಡೀಸ್ ವಿರುದ್ಧ 2ನೇ ಟೆಸ್ಟ್ ಮುಗಿಸಿ ಕೊಂಡು ದೇವ್‌ದತ್ ಪಡಿಕ್ಕಲ್ ದೆಹಲಿಯಿಂದ ರಾಜ್‌ಕೋಟ್‌ಗೆ ಪ್ರಯಾಣಿಸಿದ್ದು, ಈ ಪಂದ್ಯದಲ್ಲಿ ಆಡಲಿದ್ದಾರೆ ಎನ್ನಲಾಗಿದೆ. ಕಳೆದ ಆವೃತ್ತಿಯಲ್ಲಿ ರಾಜ್ಯದ ಪರ ಗರಿಷ್ಠ ರನ್ ಕಲೆಹಾಕಿದ್ದ ಎಡಗೈ ಬ್ಯಾಟರ್ ಆರ್.ಸ್ಮರಣ್‌ ಮೇಲೆ ಹೆಚ್ಚಿನ ನಿರೀಕ್ಷೆ ಇಡಲಾಗಿದೆ.

ಬೌಲಿಂಗ್ ವಿಭಾಗದಲ್ಲಿ ಈ ಬಾರಿ ವೇಗಿ ವಾಸುಕಿ ಕೌಶಿಕ್‌ ಅನುಪಸ್ಥಿತಿ ಕರ್ನಾಟಕವನ್ನು ಕಾಡುವ ಸಾಧ್ಯತೆ ಇದೆ. ಕೌಶಿಕ್, ಕರ್ನಾಟಕ ತಂಡ ಬಿಟ್ಟು ಗೋವಾ ಸೇರಿದ್ದಾರೆ. ವೈಶಾಖ್ ವಿಜಯ್‌ಕುಮಾರ್, ವಿದ್ವತ್ ಕಾವೇರಪ್ಪ ವೇಗದ ಬೌಲಿಂಗ್ ಹೊಣೆ ಹೊರಲಿದ್ದು, ಅನುಭವಿ ಶ್ರೇಯಸ್ ಗೋಪಾಲ್ ಸ್ಪಿನ್ ವಿಭಾಗವನ್ನು ಮುನ್ನಡೆಸಲಿದ್ದಾರೆ. ಸೌರಾಷ್ಟ್ರ ತಂಡವನ್ನು ಜಯ್‌ದೇವ್‌ ಉನಾದ್ಕತ್‌ ಮುನ್ನಡೆಸಲಿದ್ದಾರೆ. ಕರ್ನಾಟಕ, ಟೂರ್ನಿಯಲ್ಲಿ ಶುಭಾರಂಭ ಮಾಡಲು ಎದುರು ನೋಡುತ್ತಿದೆ.

ಪಂದ್ಯ ಆರಂಭ: ಬೆ.9.30ಕ್ಕೆ,

ನೇರ ಪ್ರಸಾರ: ಜಿಯೋ ಹಾಟ್‌ಸ್ಟಾರ್‌

 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಫೋಟೋ ಹಂಚಿಕೊಂಡು 'ಡಾರ್ಲಿಂಗ್‌..' ಎಂದು ಬರೆದ ಸಾರಾ ತೆಂಡುಲ್ಕರ್‌
ಕುಲ್ದೀಪ್-ಪ್ರಸಿದ್ದ್ ಮಾರಕ ದಾಳಿ; ಏಕದಿನ ಸರಣಿ ಗೆಲ್ಲಲು ಭಾರತಕ್ಕೆ ಸ್ಪರ್ಧಾತ್ಮಕ ಗುರಿ