
ಬೆಂಗಳೂರು(ಫೆ.14): ಅಭಿಮನ್ಯು ರಜಪೂತ್(52) ಹಾಗೂ ಪಾರ್ಥ್ ಕೊಹ್ಲಿ(42) ದಿಟ್ಟ ಹೋರಾಟದ ಹೊರತಾಗಿಯೂ ಬರೋಡ ಎರಡನೇ ಇನಿಂಗ್ಸ್‌ನಲ್ಲಿ 296 ರನ್‌ಗಳಿಗೆ ಸರ್ವಪತನ ಕಂಡಿದೆ. ಈ ಮೂಲಕ ಕರ್ನಾಟಕಕ್ಕೆ ಗೆಲ್ಲಲು 149 ರನ್‌ಗಳ ಗುರಿ ನೀಡಿದೆ.
ಇನ್ನು ಗುರಿ ಬೆನ್ನತ್ತಿದ ಕರ್ನಾಟಕ ತಮಡ ಆರಂಭದಲ್ಲೇ ದೇವದತ್ ಪಡಿಕ್ಕಲ್ ವಿಕೆಟ್ ಕಳೆದುಕೊಂಡಿದೆ. ಲಂಚ್ ಬ್ರೇಕ್ ವೇಳೆಗೆ ಕರ್ನಾಟಕ 1 ವಿಕೆಟ್ ಕಳೆದುಕೊಂಡು 14 ರನ್ ಬಾರಿಸಿದೆ. ಗೆಲುವಿನೊಂದಿಗೆ ಕ್ವಾರ್ಟರ್ ಫೈನಲ್ ಪ್ರವೇಶಿಸಲು ಕರ್ನಾಟಕ ತಂಡಕ್ಕೆ ಇನ್ನು 135 ರನ್‌ಗಳ ಅವಶ್ಯಕತೆಯಿದೆ.
ರಣಜಿ ಟ್ರೋಫಿ: ಕರ್ನಾಟಕಕ್ಕೆ ಸಿಗುತ್ತಾ ಗೆಲುವು?
2ನೇ ದಿನದಂತ್ಯಕ್ಕೆ 5 ವಿಕೆಟ್ ನಷ್ಟಕ್ಕೆ 205 ರನ್ ಗಳಿಸಿದ್ದ ಬರೋಡ ತಂಡಕ್ಕೆ ಅಭಿಮನ್ಯು ಹಾಗೂ ಪಾರ್ಥ್ ಕೊಹ್ಲಿ ಆಸರೆಯಾದರು. ರಜಪೂತ್ 72 ಎಸೆತಗಳಲ್ಲಿ 8 ಬೌಂಡರಿ ಸಹಿತ 52 ರನ್ ಬಾರಿಸಿದರು. ಈ ವೇಳೆ ರೋನಿತ್ ಮೋರೆ ಕ್ಲೀನ್ ಬೌಲ್ಡ್ ಮಾಡುವ ಮೂಲಕ ಕರ್ನಾಟಕಕ್ಕೆ ಉಪಯುಕ್ತ ಬ್ರೇಕ್ ನೀಡಿದರು. ಇನ್ನು ಪಾರ್ಥ್ ಕೊಹ್ಲಿ ಎಚ್ಚರಿಕೆಯ ಬ್ಯಾಟಿಂಗ್ ನಡೆಸುವ ಮೂಲಕ 88 ಎಸೆತಗಳಲ್ಲಿ 3 ಬೌಂಡರಿ ಹಾಗೂ 1 ಸಿಕ್ಸರ್ ಸಹಿತ 42 ರನ್ ಬಾರಿಸಿ ಮಿಥುನ್‌ಗೆ ವಿಕೆಟ್ ಒಪ್ಪಿಸಿದರು. ಕೊನೆಯಲ್ಲಿ ವಿರಾಜದ ಬೋಸ್ಲೆ 16 ರನ್ ಬಾರಿಸುವ ಮೂಲಕ ತಂಡದ ಮೊತ್ತವನ್ನು 290ರ ಗಡಿ ದಾಟಿಸಿದರು.
ಕರ್ನಾಟಕದ ಪರ ಪ್ರಸಿದ್ಧ್ ಕೃಷ್ಣ 4 ವಿಕೆಟ್ ಪಡೆದರೆ, ರೋನಿತ್ ಮೋರೆ 3, ಕೆ. ಗೌತಮ್ 2 ಹಾಗೂ ಅಭಿಮನ್ಯು ಮಿಥುನ್ ಒಂದು ವಿಕೆಟ್ ಪಡೆದರು.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.