ರಣಜಿ ಟ್ರೋಫಿ: ಕರ್ನಾಟಕ ತಂಡಕ್ಕೆ ಮಯಾಂಕ್‌ ಬಲ

Naveen Kodase   | Asianet News
Published : Dec 22, 2019, 06:52 PM IST
ರಣಜಿ ಟ್ರೋಫಿ: ಕರ್ನಾಟಕ ತಂಡಕ್ಕೆ ಮಯಾಂಕ್‌ ಬಲ

ಸಾರಾಂಶ

ಮೈಸೂರಿನಲ್ಲಿ ನಡೆಯಲಿರುವ ಹಿಮಾಚಲ ಪ್ರದೇಶ ವಿರುದ್ಧದ ರಣಜಿ ಪಂದ್ಯಕ್ಕೆ ಕನ್ನಡಿಗ ಮಯಾಂಕ್ ಅಗರ್‌ವಾಲ್ ರಾಜ್ಯ ತಂಡ ಕೂಡಿಕೊಂಡಿದ್ದಾರೆ. ಆದರೆ ರಾಹುಲ್ ಹಾಗೂ ಮನೀಶ್ ಪಾಂಡೆ ಲಭ್ಯತೆ ಬಗ್ಗೆ ಇನ್ನೂ ಖಚಿತತೆ ಸಿಕ್ಕಿಲ್ಲ. ಈ ಕುರಿತಾದ ವರದಿ ಇಲ್ಲಿದೆ ನೋಡಿ..

ಬೆಂಗಳೂರು(ಡಿ.22): ಹಿಮಾಚಲ ಪ್ರದೇಶ ವಿರುದ್ಧ ಡಿ.25ರಿಂದ ಮೈಸೂರಿನಲ್ಲಿ ನಡೆಯಲಿರುವ ‘ಬಿ’ ಗುಂಪಿನ ರಣಜಿ ಪಂದ್ಯಕ್ಕೆ ಶನಿವಾರ ಕರ್ನಾಟಕ ತಂಡ ಪ್ರಕಟಗೊಂಡಿದ್ದು, ಮಯಾಂಕ್‌ ಅಗರ್‌ವಾಲ್‌ ತಂಡಕ್ಕೆ ವಾಪಸಾಗಿದ್ದಾರೆ. ಆದರೆ ಕೆ.ಎಲ್‌.ರಾಹುಲ್‌ ಹಾಗೂ ಮನೀಶ್‌ ಪಾಂಡೆ ಪಂದ್ಯಕ್ಕೆ ಅಲಭ್ಯರಾಗಲಿದ್ದಾರೆ. 

ರಣಜಿ ಟ್ರೋಫಿ: ದಾಖಲೆಯ 200ನೇ ಜಯಕ್ಕೆ ಕಾಯಬೇಕು ಕರ್ನಾಟಕ!

ಆಲ್ರೌಂಡರ್‌ಗಳಾದ ಕೆ.ಗೌತಮ್‌ ಹಾಗೂ ಪವನ್‌ ದೇಶಪಾಂಡೆ ಇನ್ನು ಗುಣಮುಖರಾಗದ ಕಾರಣ, ಇಬ್ಬರನ್ನು ಆಯ್ಕೆಗೆ ಪರಿಗಣಿಸಿಲ್ಲ. ಹುಬ್ಬಳ್ಳಿಯಲ್ಲಿ ಉತ್ತರ ಪ್ರದೇಶ ವಿರುದ್ಧ ನಡೆದ ಪಂದ್ಯದಲ್ಲಿ ಆಡಿದ ಬ್ಯಾಟ್ಸ್‌ಮನ್‌ ಅಭಿಷೇಕ್‌ ರೆಡ್ಡಿಯನ್ನು ಕೈಬಿಡಲಾಗಿದೆ. ರಣಜಿ ಟ್ರೋಫಿಯ ಮೊದಲ ಪಂದ್ಯದಲ್ಲಿ ತಮಿಳುನಾಡು ತಂಡವನ್ನು ರೋಚಕವಾಗಿ ಮಣಿಸುವ ಮೂಲಕ ಶುಭಾರಂಭ ಮಾಡಿತ್ತು. ಇನ್ನು ಉತ್ತರ ಪ್ರದೇಶ ವಿರುದ್ಧ ಮೊದಲ ಇನಿಂಗ್ಸ್ ಮುನ್ನಡೆ ಆಧಾರದಲ್ಲಿ ಕರ್ನಾಟಕ 3 ಅಂಕ ಗಳಿಸಿತ್ತು. 

ತಂಡ: ಕರುಣ್‌ ನಾಯರ್‌ (ನಾಯಕ), ದೇವದತ್‌ ಪಡಿಕ್ಕಲ್‌, ಮಯಾಂಕ್‌ ಅಗರ್‌ವಾಲ್‌, ರೋಹನ್‌ ಕದಂ, ಡಿ.ನಿಶ್ಚಲ್‌, ಆರ್‌.ಸಮರ್ಥ್, ಶ್ರೇಯಸ್‌ ಗೋಪಾಲ್‌, ಜೆ.ಸುಚಿತ್‌, ಪ್ರವೀಣ್‌ ದುಬೆ, ಶರತ್‌ ಬಿ.ಆರ್‌, ಶರತ್‌ ಶ್ರೀನಿವಾಸ್‌, ರೋನಿತ್‌ ಮೋರೆ, ವಿ.ಕೌಶಿಕ್‌, ಅಭಿಮನ್ಯು ಮಿಥುನ್‌, ಕೆ.ಎಸ್‌.ದೇವಯ್ಯ.
 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಸಂಜು ಸ್ಯಾಮ್ಸನ್ ನನ್ನ ಅಣ್ಣನಿದ್ದಂತೆ; ಇಬ್ಬರ ಪೈಪೋಟಿ ಬಗ್ಗೆ ಮನಬಿಚ್ಚಿ ಮಾತಾಡಿದ ಜಿತೇಶ್ ಶರ್ಮಾ
ದಕ್ಷಿಣ ಆಫ್ರಿಕಾ ಎದುರು ಗೆದ್ದರೂ ನಿಂತಿಲ್ಲ ಚಿಂತೆ: 2ನೇ ಟಿ20ಗೆ ಭಾರತ ತಂಡದಲ್ಲಿ ಬದಲಾವಣೆ?