ರಣಜಿ ಟ್ರೋಫಿ: ಬ್ಯಾಟಿಂಗ್’ನಿಂದಲೇ ಉತ್ತರ ಕೊಟ್ಟ ಶಿಖರ್ ಧವನ್

Suvarna News   | Asianet News
Published : Dec 26, 2019, 11:09 AM IST
ರಣಜಿ ಟ್ರೋಫಿ: ಬ್ಯಾಟಿಂಗ್’ನಿಂದಲೇ ಉತ್ತರ ಕೊಟ್ಟ ಶಿಖರ್ ಧವನ್

ಸಾರಾಂಶ

ಹೈದರಾಬಾದ್ ವಿರುದ್ಧದ ರಣಜಿ ಪಂದ್ಯದಲ್ಲಿ ಡೆಲ್ಲಿ ಆರಂಭಿಕ ಬ್ಯಾಟ್ಸ್‌ಮನ್ ಶಿಖರ್ ಧವನ್ ಭರ್ಜರಿ ಶತಕ ಸಿಡಿಸಿ ಮಿಂಚಿದ್ದಾರೆ. ಈ ಮೂಲಕ ಡೆಲ್ಲಿ ತಂಡಕ್ಕೆ ಆಸರೆಯಾಗಿದ್ದಾರೆ. ಈ ಕುರಿತಾದ ವರದಿ ಇಲ್ಲಿದೆ ನೋಡಿ...

ನವದೆಹಲಿ[ಡಿ.26]: ಗಾಯಗೊಂಡು ವೆಸ್ಟ್‌ಇಂಡೀಸ್‌ ವಿರುದ್ಧದ ಟಿ20 ಮತ್ತು ಏಕದಿನ ಸರಣಿಗೆ ಅಲಭ್ಯರಾಗಿದ್ದ ಭಾರತ ತಂಡದ ಆರಂಭಿಕ ಬ್ಯಾಟ್ಸ್‌ಮನ್‌ ಶಿಖರ್‌ ಧವನ್‌, ಹೈದರಾಬಾದ್‌ ವಿರುದ್ಧ ಶತಕ ಸಿಡಿಸುವ ಮೂಲಕ ಲಯಕ್ಕೆ ಮರಳಿದ್ದಾರೆ. ಈ ಮೂಲಕ ಟೀಕಾಕಾರರಿಗೆ ಗಬ್ಬರ್ ಸಿಂಗ್ ತಮ್ಮ ಬ್ಯಾಟಿಂಗ್ ಮೂಲಕವೇ ಉತ್ತರ ನೀಡಿದ್ದಾರೆ.

ರಣಜಿ ಟ್ರೋಫಿ: ಕರ್ನಾಟಕಕ್ಕೆ ಕರುಣ್‌ ಆಸರೆ

ಅರುಣ್‌ ಜೇಟ್ಲಿ ಸ್ಟೇಡಿಯಂನಲ್ಲಿ ಬುಧವಾರ ಆರಂಭವಾದ ರಣಜಿ ಟ್ರೋಫಿ ಟೂರ್ನಿಯ ಹೈದರಾಬಾದ್‌ ವಿರುದ್ಧದ ಪಂದ್ಯದಲ್ಲಿ ಧವನ್‌ ಮೊದಲ ದಿನಾಂತ್ಯಕ್ಕೆ ಅಜೇಯರಾಗುಳಿದು 198 ಎಸೆತಗಳಲ್ಲಿ 137 ರನ್‌ಗಳನ್ನು ಗಳಿಸಿದ್ದಾರೆ. ಧವನ್‌ ಮುಂಬರುವ ಶ್ರೀಲಂಕಾ ವಿರುದ್ಧದ ಟಿ20 ಮತ್ತು ಆಸ್ಪ್ರೇಲಿಯಾ ವಿರುದ್ಧದ ಏಕದಿನ ಸರಣಿಯನ್ನು ಅಡುವ ಅವಕಾಶ ಪಡೆದುಕೊಂಡಿದ್ದು, ಈ ಶತಕದ ಮೂಲಕ ತಮ್ಮ ಫಿಟ್‌ನೆಸ್‌ ಸಾಬೀತು ಪಡಿಸಿದ್ದಾರೆ. ಜೊತೆಗೆ ತಮ್ಮ ಆತ್ಮವಿಶ್ವಾಸವನ್ನೂ ಹೆಚ್ಚಿಸಿಕೊಂಡಿದ್ದಾರೆ. ಐಸಿಸಿ ಏಕದಿನ ವಿಶ್ವಕಪ್ ಬಳಿಕ ಧವನ್ ದೊಡ್ಡ ಇನಿಂಗ್ಸ್ ಕಟ್ಟಲು ಪದೇ ಪದೇ ವಿಫಲರಾಗಿದ್ದರು. ಇದರ ಬೆನ್ನಲ್ಲೇ ಗಾಯದ ಸಮಸ್ಯೆಯಿಂದಾಗಿ ವಿಂಡೀಸ್ ವಿರುದ್ಧದ ಸರಣಿಯನ್ನು ಮಿಸ್ ಮಾಡಿಕೊಂಡಿದ್ದರು. 

ಶ್ರೀಲಂಕಾ ಸರಣಿಗೆ ಭಾರತ ತಂಡ ಪ್ರಕಟ; ಬುಮ್ರಾ ವಾಪಾಸ್, ರೋಹಿತ್‌ಗೆ ರೆಸ್ಟ್!

ಶಿಖರ್ ಧವನ್ ಹೊರತುಪಡಿಸಿ ಡೆಲ್ಲಿಯ ಉಳಿದ್ಯಾವ ಬ್ಯಾಟ್ಸ್’ಮನ್’ಗಳು ಅರ್ಧಶತಕ ಬಾರಿಸಲು ಸಹ ಆಗಲಿಲ್ಲ. ಮೊದಲ ದಿನದಾಟದ ಅಂತ್ಯಕ್ಕೆ ಡೆಲ್ಲಿ ತಂಡವು 6 ವಿಕೆಟ್ ಕಳೆದುಕೊಂಡು 269 ರನ್ ಬಾರಿಸಿದೆ. ಹೈದರಾಬಾದ್ ಪರ ಮೆಹದಿ ಹಸನ್ 3 ವಿಕೆಟ್ ಪಡೆದರೆ, ಮೊಹಮ್ಮದ್ ಸಿರಾಜ್ 2 ಹಾಗೂ ಸಿ. ಮಿಲಿಂದ್ ಒಂದು ವಿಕೆಟ್ ಪಡೆದರು. 
 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ದಕ್ಷಿಣ ಆಫ್ರಿಕಾ ಎದುರು ಗೆದ್ದರೂ ನಿಂತಿಲ್ಲ ಚಿಂತೆ: 2ನೇ ಟಿ20ಗೆ ಭಾರತ ತಂಡದಲ್ಲಿ ಬದಲಾವಣೆ?
ದಕ್ಷಿಣ ಆಫ್ರಿಕಾ ಎದುರಿನ ಏಕದಿನ ಸರಣಿ ಗೆಲುವಿನ ಬೆನ್ನಲ್ಲೇ ಐಸಿಸಿ ರ್‍ಯಾಂಕಿಂಗ್‌ ಪ್ರಕಟ; ಕೊಹ್ಲಿಗೆ ಜಾಕ್‌ಪಾಟ್!