ಪಿಂಕ್ ಬಾಲ್ ಟೆಸ್ಟ್‌ನಲ್ಲಿ ಟೀಂ ಇಂಡಿಯಾಗೆ ಅನ್ಯಾಯ! ಕಾಂಗರೂ ನೆಲದಲ್ಲಿ ಮಹಾ ಮೋಸ!

Published : Dec 07, 2024, 01:08 PM IST
ಪಿಂಕ್ ಬಾಲ್ ಟೆಸ್ಟ್‌ನಲ್ಲಿ ಟೀಂ ಇಂಡಿಯಾಗೆ ಅನ್ಯಾಯ! ಕಾಂಗರೂ ನೆಲದಲ್ಲಿ ಮಹಾ ಮೋಸ!

ಸಾರಾಂಶ

ಅಡಿಲೇಡ್‌ನಲ್ಲಿ ನಡೆಯುತ್ತಿರುವ ಬಾರ್ಡರ್-ಗವಾಸ್ಕರ್ ಟೆಸ್ಟ್‌ನ ಎರಡನೇ ಪಂದ್ಯದಲ್ಲಿ ಥರ್ಡ್ ಅಂಪೈರ್ ನೀಡಿದ ವಿವಾದಾತ್ಮಕ ತೀರ್ಪು ಟೀಂ ಇಂಡಿಯಾ ಅಭಿಮಾನಿಗಳ ಆಕ್ರೋಶಕ್ಕೆ ಕಾರಣವಾಗಿದೆ. ಮಿಚೆಲ್ ಮಾರ್ಷ್ ವಿಕೆಟ್‌ಗೆ ಸಂಬಂಧಿಸಿದಂತೆ ಥರ್ಡ್ ಅಂಪೈರ್ ನೀಡಿದ ತೀರ್ಪು ಚರ್ಚೆಗೆ ಗ್ರಾಸವಾಗಿದೆ.

ಅಡಿಲೇಡ್: ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ಎರಡನೇ ಪಂದ್ಯವು ಅಡಿಲೇಡ್‌ನ ಓವಲ್ ಮೈದಾನದಲ್ಲಿ ನಡೆಯುತ್ತಿದೆ. ಪಿಂಕ್ ಬಾಲ್ ಟೆಸ್ಟ್‌ ಪಂದ್ಯದ ಎರಡನೇ ದಿನದಾಟದ ವೇಳೆಯಲ್ಲಿ ಟೀಂ ಇಂಡಿಯಾಗೆ ಅನ್ಯಾಯವಾಗುವಂತ ಪ್ರಕರಣ ನಡೆದಿದೆ. ಥರ್ಡ್‌ ಅಂಪೈರ್ ನೀಡಿದ ಒಂದು ತೀರ್ಪು ಟೀಂ ಇಂಡಿಯಾ ಅಭಿಮಾನಿಗಳ ಆಕ್ರೋಶಕ್ಕೆ ಕಾರಣವಾಗಿದೆ. 

ಟೀಂ ಇಂಡಿಯಾವನ್ನು 180 ರನ್‌ಗಳಿಗೆ ಕಟ್ಟಿಹಾಕಿರುವ ಆಸ್ಟ್ರೇಲಿಯಾ ತಂಡವು ಇದೀಗ ದೊಡ್ಡ ಮುನ್ನಡೆಯತ್ತ ದಾಪುಗಾಲಿಡುತ್ತಿದೆ. ಹೀಗಿರುವಾಗಲೇ ಕಾಂಗರೂ ನೆಲದಲ್ಲಿ ಥರ್ಡ್‌ ಅಂಪೈರ್‌, ಭಾರತೀಯರಿಗೆ ಅನ್ಯಾಯವಾಗುವಂತಹ ತೀರ್ಪು ನೀಡಿರುವುದು ನೆಟ್ಟಿಗರ ಆಕ್ರೋಶಕ್ಕೆ ಕಾರಣವಾಗಿದೆ.

ಥರ್ಡ್ ಅಂಪೈರ್ ತೀರ್ಪಿನ ಬಗ್ಗೆ ಅಸಮಾಧಾನ: 

ಹೌದು ಮಾರ್ನಸ್ ಲಬುಶೇನ್ ಅವರ ವಿಕೆಟ್ ಪತನದ ಬಳಿಕ ಕ್ರೀಸ್‌ಗಿಳಿದ ಮಿಚೆಲ್ ಮಾರ್ಷ್‌ ಅವರನ್ನು ಖಾತೆ ತೆರೆಯುವ ಮುನ್ನವೇ ಪೆವಿಲಿಯನ್ನಿಗಟ್ಟುವ ಅವಕಾಶವಿತ್ತು. ಭಾರತ ಪರ ರವಿಚಂದ್ರನ್ ಅಶ್ವಿನ್ ಎಸೆದ 58ನೇ ಓವರ್‌ನಲ್ಲಿ ಥರ್ಡ್‌ ಅಂಪೈರ್ ವಿವಾದಾತ್ಮಕ ತೀರ್ಪು ನೀಡಿರುವುದು ಚರ್ಚೆಗೆ ಗ್ರಾಸವಾಗಿದೆ. ಈ ಓವರ್‌ನ ಮೂರನೇ ಎಸೆತದಲ್ಲಿ ರವಿಚಂದ್ರನ್ ಅಶ್ವಿನ್ ಎಲ್‌ಬಿಡಬ್ಲ್ಯೂಗೆ ಬಲವಾದ ಮನವಿ ಸಲ್ಲಿಸಿದರು. ಆದರೆ ಅಂಪೈರ್ ಔಟ್ ನೀಡಲಿಲ್ಲ. ಆಗ ಅವರು ಡಿಆರ್‌ಎಸ್ ಮೊರೆ ಹೋದರು. ರಿಪ್ಲೇನಲ್ಲಿ ಚೆಂಡು ಮೊದಲು ಮಿಚೆಲ್ ಮಾರ್ಷ್ ಪ್ಯಾಡ್‌ಗೆ ಬಡಿದುಮ ಆ ಬಳಿಕ ಬ್ಯಾಟ್‌ಗೆ ತಗುಲಿರುವುದು ಸ್ಪಷ್ಟವಾಗುತ್ತಿತ್ತು. ಹೀಗಿದ್ದೂ ಥರ್ಡ್‌ ಅಂಪೈರ್ ನಾಟೌಟ್ ನೀಡಿದ್ದು, ಅಭಿಮಾನಿಗಳ ಕೆಂಗಣ್ಣಿಗೆ ಗುರಿಯಾಗುವಂತೆ ಮಾಡಿತು.

ಅಂಡರ್‌-19 ಏಷ್ಯಾಕಪ್‌: ಗುಡುಗಿದ 13 ವರ್ಷದ ವೈಭವ್ ಸೂರ್ಯವನ್ಶಿ, ಲಂಕಾವನ್ನು ಬಗ್ಗುಬಡಿದು ಭಾರತ ಫೈನಲ್‌ಗೆ ಲಗ್ಗೆ

ಕೊನೆಗೂ ಅಶ್ವಿನ್‌ಗೆ ವಿಕೆಟ್ ಒಪ್ಪಿಸಿದ ಮಾರ್ಷ್: ಮೊದಲಿಗೆ ಜೀವದಾನ ಪಡೆದುಕೊಂಡ ಮಿಚೆಲ್ ಮಾರ್ಷ್, ಭಾರತಕ್ಕೆ ಹೆಚ್ಚು ಅಪಾಯ ಮಾಡಲಿಲ್ಲ. ಮಿಚೆಲ್ ಮಾರ್ಷ್ 9 ರನ್‌ ಗಳಿಸಿ ಅಶ್ವಿನ್‌ಗೆ ವಿಕೆಟ್ ಒಪ್ಪಿಸಿದರು.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಕೊನೆಗೂ ಮದುವೆಗೆ ರೆಡಿ ಆದ್ರಾ ಸ್ಮೃತಿ ಮಂಧನಾ-ಪಲಾಶ್‌ ಮುಚ್ಚಾಲ್‌?
ಮೇಲ್ಮನವಿ ಅರ್ಜಿ ವಜಾಗೊಳಿಸಿದ ಹೈಕೋರ್ಟ್, ಡಿ.7ಕ್ಕೆ ಕರ್ನಾಟಕ ಕ್ರಿಕೆಚ್ ಸಂಸ್ಥೆ ಚುನಾವಣೆ