ಜಡೇಜಾ ಇಂಜುರಿ; ಶ್ರೇಯಸ್ ಅಯ್ಯರ್‌ಗೆ ಒಲಿದ ಟೀಂ ಇಂಡಿಯಾ ಉಪನಾಯಕ ಪಟ್ಟ..!

Published : Jul 23, 2022, 11:36 AM IST
ಜಡೇಜಾ ಇಂಜುರಿ; ಶ್ರೇಯಸ್ ಅಯ್ಯರ್‌ಗೆ ಒಲಿದ ಟೀಂ ಇಂಡಿಯಾ ಉಪನಾಯಕ ಪಟ್ಟ..!

ಸಾರಾಂಶ

* ಗಾಯದ ಸಮಸ್ಯೆಯಿಂದ ವಿಂಡೀಸ್ ಎದುರಿನ ಮೊದಲೆರಡು ಏಕದಿನ ಪಂದ್ಯದಿಂದ ಜಡೇಜಾ ಔಟ್ * ಜಡೇಜಾ ಅನುಪಸ್ಥಿತಿಯಲ್ಲಿ ಶ್ರೇಯಸ್ ಅಯ್ಯರ್‌ಗೆ ಒಲಿದ ಉಪನಾಯಕ ಪಟ್ಟ * ಮಂಡಿ ಗಾಯದ ಸಮಸ್ಯೆ ಎದುರಿಸುತ್ತಿರುವ ಆಲ್ರೌಂಡರ್ ರವೀಂದ್ರ ಜಡೇಜಾ

ಟ್ರಿನಿಡ್ಯಾಡ್‌(ಜು.23): ವೆಸ್ಟ್‌ ಇಂಡೀಸ್ ಎದುರಿನ ಮೂರು ಪಂದ್ಯಗಳ ಏಕದಿನ ಸರಣಿಯಿಂದ ಈಗಾಗಲೇ ಹಿರಿಯ ಆಟಗಾರರು ವಿಶ್ರಾಂತಿ ಪಡೆದು ತಂಡದಿಂದ ಹೊರಗುಳಿದಿದ್ದಾರೆ. ಹೀಗಾಗಿ ಶಿಖರ್ ಧವನ್ ನೇತೃತ್ವದ ಟೀಂ ಇಂಡಿಯಾ, ವಿಂಡೀಸ್ ಎದುರು ಕಣಕ್ಕಿಳಿದು ಮೊದಲ ಪಂದ್ಯದಲ್ಲಿ ರೋಚಕ ಜಯ ಸಾಧಿಸಿದೆ. ಇನ್ನು ಮಂಡಿ ಗಾಯದ ಸಮಸ್ಯೆಯಿಂದ ಬಳಲುತ್ತಿರುವ ಟೀಂ ಇಂಡಿಯಾ ಸ್ಟಾರ್ ಆಲ್ರೌಂಡರ್‌ ರವೀಂದ್ರ ಜಡೇಜಾ ವಿಂಡೀಸ್ ಎದುರಿನ ಮೊದಲೆರಡು ಪಂದ್ಯಗಳಿಂದ ಹೊರಗುಳಿದಿದ್ದು, ಜಡೇಜಾ ಅನುಪಸ್ಥಿತಿಯಲ್ಲಿ ಶ್ರೇಯಸ್ ಅಯ್ಯರ್ ಟೀಂ ಇಂಡಿಯಾ ಉಪನಾಯಕರಾಗಿ ನೇಮಕವಾಗಿದ್ದಾರೆ.

ವೆಸ್ಟ್ ಇಂಡೀಸ್ ಎದುರಿನ ಏಕದಿನ ಸರಣಿಯಿಂದ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ವಿಶ್ರಾಂತಿ ಪಡೆದಿದ್ದರೇ, ಉಪನಾಯಕರಾಗಿದ್ದ ಕೆ ಎಲ್ ರಾಹುಲ್ ಕೂಡಾ ಫಿಟ್ನೆಸ್ ಸಮಸ್ಯೆಯಿಂದಾಗಿ ವಿಂಡೀಸ್ ಪ್ರವಾಸಕ್ಕೆ ಆಯ್ಕೆಯಾಗಿರಲಿಲ್ಲ. ಹೀಗಾಗಿ ಶಿಖರ್ ಧವನ್‌ಗೆ ನಾಯಕ ಪಟ್ಟ ಹಾಗೂ ಆಲ್ರೌಂಡರ್ ರವೀಂದ್ರ ಜಡೇಜಾಗೆ ಉಪನಾಯಕ ಪಟ್ಟ ಕಟ್ಟಲಾಗಿತ್ತು. ಇದೀಗ ಜಡೇಜಾ ಮೊದಲೆರಡು ಪಂದ್ಯಗಳಿಂದ ಹೊರಬಿದ್ದಿದ್ದರಿಂದಾಗಿ ಶ್ರೇಯಸ್ ಅಯ್ಯರ್‌ಗೆ ಉಪನಾಯಕರನ್ನಾಗಿ ನೇಮಕ ಮಾಡಲಾಗಿದೆ. 

ಈ ವರ್ಷ ಭಾರತಕ್ಕೆ ಧವನ್‌ 7ನೇ ನಾಯಕ!

ಪೋರ್ಚ್‌ ಆಫ್‌ ಸ್ಪೇನ್‌: 2022ರಲ್ಲಿ ಭಾರತ ತಂಡ 7ನೇ ನಾಯಕನನ್ನು ಕಂಡಿದೆ. ಶುಕ್ರವಾರ ನಡೆದ ವೆಸ್ಟ್‌ಇಂಡೀಸ್‌ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭಾರತವನ್ನು ಶಿಖರ್‌ ಧವನ್‌ ಮುನ್ನಡೆಸಿದರು. ಭಾರತ ತಂಡ ಒಂದು ವರ್ಷದಲ್ಲಿ ಅತಿಹೆಚ್ಚು ನಾಯಕರನ್ನು ಕಂಡ ದಾಖಲೆ ಇದಾಗಿದೆ. ಧವನ್‌ಗೂ ಮೊದಲು ಈ ವರ್ಷ ವಿರಾಟ್‌ ಕೊಹ್ಲಿ, ರೋಹಿತ್‌ ಶರ್ಮಾ, ಕೆ.ಎಲ್‌.ರಾಹುಲ್‌, ರಿಷಭ್‌ ಪಂತ್‌, ಹಾರ್ದಿಕ್‌ ಪಾಂಡ್ಯ ಮತ್ತು ಜಸ್‌ಪ್ರೀತ್‌ ಬೂಮ್ರಾ ಭಾರತ ತಂಡವನ್ನು ಮುನ್ನಡೆಸಿದ್ದರು.

WI vs IND: ಕೆರಿಬಿಯನ್ನರ ವಿರುದ್ಧ ಗೆದ್ದುಬೀಗಿದ ಟೀಂ ಇಂಡಿಯಾ, ಸರಣಿಯಲ್ಲಿ 1-0 ಮುನ್ನಡೆ

ಕಳೆದ ವರ್ಷ ಶ್ರೀಲಂಕಾ ಪ್ರವಾಸದ ವೇಳೆ ಧವನ್‌ ಭಾರತ ತಂಡವನ್ನು ಮುನ್ನಡೆಸಿದ್ದರು. ಇಂಗ್ಲೆಂಡ್‌ ವಿರುದ್ಧದ ಸರಣಿ ಬಳಿಕ ರೋಹಿತ್‌, ಪಂತ್‌, ಹಾರ್ದಿಕ್‌ಗೆ ವಿಶ್ರಾಂತಿ ನೀಡಿದ ಕಾರಣ ಬಿಸಿಸಿಐ ಧವನ್‌ರನ್ನು ನಾಯಕನನ್ನಾಗಿ ನೇಮಿಸಿತ್ತು.

ಅರ್ಧಶತಕ: ಧವನ್‌ ದಾಖಲೆ!

ಏಕದಿನ ಕ್ರಿಕೆಟ್‌ನಲ್ಲಿ ಅರ್ಧಶತಕ ಬಾರಿಸಿದ ಭಾರತದ ಅತಿಹಿರಿಯ ನಾಯಕ ಎನ್ನುವ ದಾಖಲೆಯನ್ನು ಶಿಖರ್‌ ಧವನ್‌ ಬರೆದಿದ್ದಾರೆ. ಶುಕ್ರವಾರಕ್ಕೆ ಧವನ್‌ರ ವಯಸ್ಸು 36 ವರ್ಷ 229 ದಿನ. ಇದಕ್ಕೂ ಮುನ್ನ ಈ ದಾಖಲೆ ಮೊಹಮದ್‌ ಅಜರುದ್ದೀನ್‌ರ ಹೆಸರಿನಲ್ಲಿತ್ತು. 1999ರಲ್ಲಿ ಅಜರ್‌ ತಮಗೆ 36 ವರ್ಷ 120 ದಿನ ವಯಸ್ಸಾಗಿದ್ದಾಗ ನಾಯಕನಾಗಿ ಅರ್ಧಶತಕ ಗಳಿಸಿದ್ದರು.

ಭಾರತೀಯ ಕ್ರಿಕೆಟಿಗರ ವಿಂಡೀಸ್‌ ಪ್ರಯಾಣಕ್ಕೆ 3.5 ಕೋಟಿ ರು. ಖರ್ಚು!

ನವದೆಹಲಿ: ವೆಸ್ಟ್‌ಇಂಡೀಸ್‌ ವಿರುದ್ಧ ಏಕದಿನ, ಟಿ20 ಸರಣಿಗಳನ್ನು ಆಡಲು ಭಾರತ ಕ್ರಿಕೆಟ್‌ ತಂಡವನ್ನು ಟ್ರಿನಿಡಾಡ್‌ನ ಪೋರ್ಚ್‌ ಆಫ್‌ ಸ್ಪೇನ್‌ಗೆ ವಿಶೇಷ ವಿಮಾನದಲ್ಲಿ ಕಳುಹಿಸಲು ಬಿಸಿಸಿಐ ಬರೋಬ್ಬರಿ 3.5 ಕೋಟಿ ರು. ಖರ್ಚು ಮಾಡಿದೆ ಎಂದು ಮಾಧ್ಯಮವೊಂದು ವರದಿ ಮಾಡಿದೆ. ಇಂಗ್ಲೆಂಡ್‌ನ ಮ್ಯಾಂಚೆಸ್ಟರ್‌ನಿಂದ ತೆರಳಿದ ವಿಶೇಷ ವಿಮಾನದಲ್ಲಿ ಆಟಗಾರರ ಕುಟುಂಬ ಸದಸ್ಯರು ಸಹ ಪ್ರಯಾಣಿಸಿದರು ಎಂದು ತಿಳಿದುಬಂದಿದೆ. ವಾಣಿಜ್ಯ ವಿಮಾನಗಳಲ್ಲಿ ಅಗತ್ಯ ಟಿಕೆಟ್‌ಗಳು ಸಿಗದ ಕಾರಣ ಬಿಸಿಸಿಐ ವಿಶೇಷ ವಿಮಾನದ ವ್ಯವಸ್ಥೆ ಮಾಡಬೇಕಾಯಿತು ಎಂದು ಮೂಲಗಳು ತಿಳಿಸಿವೆ.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಜೈಸ್ವಾಲ್‌ ಸಖತ್‌ ಸೆಂಚುರಿ, ಟೆಸ್ಟ್‌ ಸರಣಿ ಸೋಲಿಗೆ ಏಕದಿನದಲ್ಲಿ ಸೇಡು ತೀರಿಸಿಕೊಂಡ ಭಾರತ!
ಫೋಟೋ ಹಂಚಿಕೊಂಡು 'ಡಾರ್ಲಿಂಗ್‌..' ಎಂದು ಬರೆದ ಸಾರಾ ತೆಂಡುಲ್ಕರ್‌