
ಕಟಕ್: ಭಾರತದ ಆಲ್ರೌಂಡರ್ ರವೀಂದ್ರ ಜಡೇಜಾ ಇಂಗ್ಲೆಂಡ್ ವಿರುದ್ಧ 2ನೇ ಏಕದಿನದಲ್ಲಿ ವಿಶೇಷ ಸಾಧನೆ ಮಾಡಿದರು. ಅವರು ಎಸೆದ ಇನ್ನಿಂಗ್ಸ್‌ನ 24ನೇ ಓವರ್ ಕೇವಲ 73 ಸೆಕೆಂಡ್‌ಗಳಲ್ಲೇ ಮುಗಿಯಿತು.
ಕ್ರೀಸ್‌ನಲ್ಲಿದ್ದ ಹ್ಯಾರಿ ಬ್ರೂಕ್ ಎಲ್ಲಾ 6 ಎಸೆತಗಳನ್ನು ಡಾಟ್ ಮಾಡಿದರು. ಜಡೇಜಾ ಸಾಧನೆ ಅಂತಾರಾಷ್ಟ್ರೀಯ ಕ್ರಿಕೆಟ್‌ನ 2ನೇ ಅತಿ ವೇಗದ ಓವರ್ ಎನಿಸಿಕೊಂಡಿದೆ. 2021ರಲ್ಲಿ ಇಂಗ್ಲೆಂಡ್ ವಿರುದ್ಧ 4ನೇ ಟೆಸ್ಟ್‌ನಲ್ಲಿ ಜಡೇಜಾ 64 ಸೆಕೆಂಡ್‌ಗಳಲ್ಲೇ ಓವರ್ ಮುಕ್ತಾಯಗೊಳಿಸಿದ್ದರು. ಇನ್ನು, 3ನೇ ಅತಿ ವೇಗದ ಓವರ್ ದಾಖಲೆ ಕೂಡಾ ಜಡೇಜಾ ಹೆಸರಲ್ಲಿದೆ. 2023ರ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ನಲ್ಲಿ ಆಸ್ಟ್ರೇಲಿಯಾ ವಿರುದ್ಧ 93 ಸೆಕಂಡ್‌ಗಳಲ್ಲಿ ಜಡೇಜಾ ಓವರ್ ಪೂರ್ಣಗೊಳಿಸಿದ್ದರು.
ರೋಹಿತ್ ಶರ್ಮಾಗೆ ಅಮೂಲ್ಯ ಕಿವಿ ಮಾತು ಹೇಳಿದ ರವಿಚಂದ್ರನ್ ಅಶ್ವಿನ್!
ಭಾರತ ಹಾಗೂ ಇಂಗ್ಲೆಂಡ್ ನಡುವಿನ ಎರಡನೇ ಏಕದಿನ ಪಂದ್ಯದಲ್ಲೂ ರವೀಂದ್ರ ಜಡೇಜಾ ಅದ್ಭುತ ಬೌಲಿಂಗ್ ದಾಳಿ ನಡೆಸುವ ಮೂಲಕ ಗಮನ ಸೆಳೆಯುವಲ್ಲಿ ಯಶಸ್ವಿಯಾಗಿದ್ದಾರೆ. ಈಗಾಗಲೇ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ಗೆ ವಿದಾಯ ಘೋಷಿಸಿರುವ ರವೀಂದ್ರ ಜಡೇಜಾ ಭಾರತ ಪರ ಟೆಸ್ಟ್ ಹಾಗೂ ಏಕದಿನ ಪಂದ್ಯಗಳನ್ನಷ್ಟೇ ಆಡುತ್ತಿದ್ದಾರೆ. ಇಂಗ್ಲೆಂಡ್ ಎದುರಿನ ಮೊದಲ ಏಕದಿನ ಪಂದ್ಯದಲ್ಲಿ ಜಡೇಜಾ 9 ಓವರ್ ಬೌಲಿಂಗ್ ಮಾಡಿ ಒಂದು ಮೇಡನ್ ಸಹಿತ ಕೇವಲ 26 ರನ್ ನೀಡಿ 3 ವಿಕೆಟ್ ತಮ್ಮ ಬುಟ್ಟಿಗೆ ಹಾಕಿಕೊಂಡಿದ್ದರು. ಇದೀಗ ಎರಡನೇ ಏಕದಿನ ಪಂದ್ಯದಲ್ಲೂ ಜಡೇಜಾ 10 ಓವರ್ ಬೌಲಿಂಗ್ ಮಾಡಿ ಒಂದು ಮೇಡನ್ ಓವರ್ ಸಹಿತ 35 ರನ್ ನೀಡಿ ಪ್ರಮುಖ 3 ವಿಕೆಟ್ ಕಬಳಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಸಿಕ್ಸರ್‌ನಲ್ಲಿ ಕ್ರಿಸ್ ಗೇಲ್ ದಾಖಲೆ ಮುರಿದ ರೋಹಿತ್ ಶರ್ಮಾ
ಕಟಕ್: ಇಂಗ್ಲೆಂಡ್ ವಿರುದ್ಧ ಪಂದ್ಯದ ಮೂಲಕ ರೋಹಿತ್ ಏಕದಿನ ಕ್ರಿಕೆಟ್‌ನಲ್ಲಿ ಗರಿಷ್ಠ ಸಿಕ್ಸರ್ ಬಾರಿಸಿದವರ ಪಟ್ಟಿಯಲ್ಲಿ 2ನೇ ಸ್ಥಾನಕ್ಕೇರಿದರು. ಪಂದ್ಯದಲ್ಲಿ ಅವರು 7 ಸಿಕ್ಸರ್ ಬಾರಿಸಿದರು. ಈ ಮೂಲಕ ಏಕದಿನದ ಸಿಕ್ಸರ್ ಗಳಿಕೆಯನ್ನು 338ಕ್ಕೆ ಹೆಚ್ಚಿಸಿದರು. ಅವರು 267 ಪಂದ್ಯಗಳನ್ನಾಡಿದ್ದಾರೆ. ಕ್ರಿಸ್ ಗೇಲ್ 301 ಪಂದ್ಯಗಳಲ್ಲಿ 331 ಸಿಕ್ಸರ್ ಬಾರಿಸಿದ್ದರು.
ಇನ್ನು ಪಾಕಿಸ್ತಾನದ ಶಾಹಿದ್ ಅಫ್ರಿದಿ 398 ಪಂದ್ಯಗಳಲ್ಲಿ 351 ಸಿಕ್ಸರ್‌ಗಳೊಂದಿಗೆ ಅಗ್ರಸ್ಥಾನದಲ್ಲಿದ್ದಾರೆ. ಇನ್ನು, ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಗರಿಷ್ಠ ಸಿಕ್ಸರ್ ಬಾರಿಸಿದ ಆಟಗಾರರ ಪಟ್ಟಿಯಲ್ಲಿ ರೋಹಿತ್ ಈಗಾಗಲೇ ಅಗ್ರಸ್ಥಾನದಲ್ಲಿದ್ದಾರೆ. ಅವರು 493 ಪಂದ್ಯಗಳಲ್ಲಿ ಒಟ್ಟಾರೆ 631 ಸಿಕ್ಸರ್ ಸಿಡಿಸಿದ್ದಾರೆ.
ಚಾಂಪಿಯನ್ಸ್ ಟ್ರೋಫಿ ಗೆಲ್ಲೋದಲ್ಲ ಭಾರತ ಸೋಲೋದನ್ನು ಎದುರು ನೋಡುತ್ತಿರುವ ಪಾಕ್! ಪ್ರಧಾನಿ ಮಾತು ವೈರಲ್
ಏಕದಿನ ಸರಣಿ ಗೆದ್ದ ಭಾರತ
ಭಾರತ ಹಾಗೂ ಇಂಗ್ಲೆಂಡ್ ನಡುವಿನ ಎರಡನೇ ಏಕದಿನ ಪಂದ್ಯದಲ್ಲಿ ರೋಹಿತ್ ಶರ್ಮಾ ನೇತೃತ್ವದ ಟೀಂ ಇಂಡಿಯಾ 4 ವಿಕೆಟ್ ಅಂತರದ ಭರ್ಜರಿ ಗೆಲುವು ಸಾಧಿಸುವ ಮೂಲಕ ಇನ್ನೂ ಒಂದು ಪಂದ್ಯ ಬಾಕಿ ಇರುವಂತೆಯೇ ಸರಣಿ ಕೈವಶ ಮಾಡಿಕೊಳ್ಳುವಲ್ಲಿ ಯಶಸ್ವಿಯಾಗಿದೆ. ಈ ಮೂಲಕ ಚಾಂಪಿಯನ್ಸ್ ಟ್ರೋಫಿ ಟೂರ್ನಿಗೂ ಮುನ್ನ ಟೀಂ ಇಂಡಿಯಾ ಒಳ್ಳೆಯ ಲಯವನ್ನು ಕಂಡುಕೊಳ್ಳುವಲ್ಲಿ ಯಶಸ್ವಿಯಾಗಿದೆ.
ಗೆಲ್ಲಲು 305 ರನ್‌ಗಳ ಸ್ಪರ್ಧಾತ್ಮಕ ಗುರಿ ಬೆನ್ನತ್ತಿದ ಟೀಂ ಇಂಡಿಯಾ, ನಾಯಕ ರೋಹಿತ್ ಶರ್ಮಾ ಬಾರಿಸಿದ ಆಕರ್ಷಕ ಶತಕ ಹಾಗೂ ಶುಭ್‌ಮನ್ ಗಿಲ್ ಭರ್ಜರಿ ಅರ್ಧಶತಕದ ನೆರವಿನಿಂದ ಇನ್ನೂ 33 ಎಸೆತಗಳು ಬಾಕಿ ಇರುವಂತೆಯೇ 4 ವಿಕೆಟ್ ಭರ್ಜರಿ ಜಯ ಸಾಧಿಸಿತು. ಕೇವಲ 90 ಎಸೆತಗಳಲ್ಲಿ 12 ಬೌಂಡರಿ ಹಾಗೂ 7 ಮುಗಿಲೆತ್ತರದ ಸಿಕ್ಸರ್‌ಗಳ ನೆರವಿನಿಂದ ಸ್ಪೋಟಕ 119 ರನ್ ಸಿಡಿಸಿದ ರೋಹಿತ್ ಶರ್ಮಾ ಪಂದ್ಯಶ್ರೇಷ್ಠ ಪ್ರಶಸ್ತಿ ತಮ್ಮದಾಗಿಸಿಕೊಂಡರು.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.