
ಟೀಮ್ ಇಂಡಿಯಾದ ಸ್ಟಾರ್ ಆಲ್ ರೌಂಡರ್ ರವೀಂದ್ರ ಜಡೇಜಾ ಅತಿ ವೇಗವಾಗಿ ಓವರ್‌ಗಳನ್ನು ಮುಗಿಸುವ ಬೌಲರ್ ಎಂದು ಪ್ರಸಿದ್ಧರು. ಬ್ಯಾಟರ್‌ಗಳಿಗೆ ಕಿಂಚಿತ್ತೂ ಸಮಯ ನೀಡದೆ ಚಟಾಫಟ್ ಓವರ್‌ಗಳನ್ನು ಮುಗಿಸುವ ಜಡೇಜಾ ಹೆಸರಿನಲ್ಲಿ ಈಗ ಒಂದು ಬೇಡದ ದಾಖಲೆ ಸೇರಿಕೊಂಡಿದೆ. ಟೆಸ್ಟ್ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು 'ನೋ-ಬಾಲ್' ಎಸೆದ ಸ್ಪಿನ್ನರ್ ಎಂಬ ಹಣೆಪಟ್ಟಿ ಜಡೇಜಾ ಪಾಲಾಗಿದೆ.
2021 ರಿಂದ ಈವರೆಗಿನ ಅಂಕಿ-ಅಂಶಗಳನ್ನು ಗಮನಿಸಿದರೆ ಟೆಸ್ಟ್ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ನೋ-ಬಾಲ್ ಎಸೆದ ಸ್ಪಿನ್ನರ್‌ಗಳ ಪಟ್ಟಿಯಲ್ಲಿ ಜಡೇಜಾ ಮೊದಲ ಸ್ಥಾನದಲ್ಲಿದ್ದಾರೆ. ಜಡೇಜಾ ಬರೋಬ್ಬರಿ 84 ನೋ-ಬಾಲ್‌ಗಳನ್ನು ಎಸೆದಿದ್ದಾರೆ. ಎರಡನೇ ಸ್ಥಾನದಲ್ಲಿರುವ ಪಾಕಿಸ್ತಾನದ ನೋಮನ್ ಅಲಿ (40 ನೋ-ಬಾಲ್) ಅವರಿಗಿಂತ ಜಡೇಜಾ ಎರಡು ಪಟ್ಟು ಹೆಚ್ಚು ನೋ-ಬಾಲ್‌ಗಳನ್ನು ಎಸೆದಿರುವುದು ಅಚ್ಚರಿ ಮೂಡಿಸಿದೆ.
ಒಂದೆಡೆ ನೋ-ಬಾಲ್‌ಗಳ ಕಾಟವಿದ್ದರೂ, ಜಡೇಜಾ ವಿಕೆಟ್ ಪಡೆಯುವಲ್ಲಿ ಹಿಂದೆ ಬಿದ್ದಿಲ್ಲ. ಶ್ರೀಲಂಕಾ ವಿರುದ್ಧದ ಮೊದಲ ಟೆಸ್ಟ್‌ನ ಮೊದಲ ಇನ್ನಿಂಗ್ಸ್‌ನಲ್ಲಿ 3 ವಿಕೆಟ್ ಕಬಳಿಸಿದ ಜಡೇಜಾ, ಟೆಸ್ಟ್ ಕ್ರಿಕೆಟ್‌ನಲ್ಲಿ 350 ವಿಕೆಟ್‌ಗಳ ಮೈಲಿಗಲ್ಲನ್ನು ದಾಟಿದ್ದಾರೆ. ಈ ಮೂಲಕ ಭಾರತದ ಪರ ಅತಿ ಹೆಚ್ಚು ಟೆಸ್ಟ್ ವಿಕೆಟ್ ಪಡೆದ 5ನೇ ಬೌಲರ್ ಎಂಬ ಕೀರ್ತಿಗೆ ಪಾತ್ರರಾಗಿದ್ದಾರೆ. 2012ರಲ್ಲಿ ಟೆಸ್ಟ್ ಪದಾರ್ಪಣೆ ಮಾಡಿದ್ದ ಜಡೇಜಾ, ಈಗಾಗಲೇ ಟಿ20 ಅಂತರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದು, ಸದ್ಯ ಟೆಸ್ಟ್ ಮತ್ತು ಏಕದಿನ ಮಾದರಿಯಲ್ಲಿ ತಂಡದ ಪ್ರಮುಖ ಆಸ್ತಿಯಾಗಿದ್ದಾರೆ. ಈ ನೋ-ಬಾಲ್‌ಗಳ ಸಮಸ್ಯೆಯನ್ನು ಅವರು ಸರಿಪಡಿಸಿಕೊಳ್ಳಬೇಕಿದೆ ಎಂದು ಕ್ರಿಕೆಟ್ ಪಂಡಿತರು ಅಭಿಪ್ರಾಯಪಟ್ಟಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.