IPL 2026: ಆರ್‌ಸಿಬಿಗಿಂದು ಸನ್‌ರೈಸರ್ಸ್ ಚಾಲೆಂಜ್! ನಂ.1 ಸ್ಥಾನಕ್ಕಾಗಿ ಬಿಗ್ ಫೈಟ್

Kannadaprabha News   | Kannada Prabha
Published : May 22, 2026, 08:34 AM IST
IPL RCB vs SRH 2026

ಸಾರಾಂಶ

ಈಗಾಗಲೇ ಪ್ಲೇ-ಆಫ್‌ ಪ್ರವೇಶಿಸಿರುವ ಆರ್‌ಸಿಬಿ ಮತ್ತು ಸನ್‌ರೈಸರ್ಸ್‌ ಹೈದರಾಬಾದ್‌ ತಂಡಗಳು, ಲೀಗ್ ಹಂತದ ಕೊನೆಯ ಪಂದ್ಯದಲ್ಲಿ ಅಗ್ರ-2 ಸ್ಥಾನಕ್ಕಾಗಿ ಸೆಣಸಲಿವೆ. ಈ ಪಂದ್ಯದಲ್ಲಿ ಗೆದ್ದರೆ ಆರ್‌ಸಿಬಿ ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಲಿದ್ದು, ಸೋತರೆ ಸನ್‌ರೈಸರ್ಸ್‌ ಎಲಿಮಿನೇಟರ್‌ನಲ್ಲಿ ಆಡಬೇಕಾಗುತ್ತದೆ.

ಹೈದರಾಬಾದ್‌: ಈ ಬಾರಿ ಐಪಿಎಲ್‌ನಲ್ಲಿ ಅಗ್ರ-2 ಸ್ಥಾನ ಪಡೆದು ಕ್ವಾಲಿಫೈಯರ್‌-1ರಲ್ಲಿ ಆಡುವ ಅವಕಾಶಕ್ಕಾಗಿ ಕಾಯುತ್ತಿರುವ ಹಾಲಿ ಚಾಂಪಿಯನ್‌ ಆರ್‌ಸಿಬಿ ತಂಡ ಶುಕ್ರವಾರ ಲೀಗ್‌ ಹಂತದ ತನ್ನ ಕೊನೆ ಪಂದ್ಯದಲ್ಲಿ ಸನ್‌ರೈಸರ್ಸ್‌ ಹೈದರಾಬಾದ್‌ ವಿರುದ್ಧ ಸೆಣಸಾಡಲಿದೆ.

ಆರ್‌ಸಿಬಿ ಆಡಿರುವ 13 ಪಂದ್ಯಗಳ ಪೈಕಿ 9ರಲ್ಲಿ ಗೆದ್ದಿದ್ದು, 18 ಅಂಕಗಳೊಂದಿಗೆ ಈಗಾಗಲೇ ಪ್ಲೇ-ಆಫ್‌ ಸ್ಥಾನ ಖಚಿತಪಡಿಸಿಕೊಂಡಿದೆ. ಆದರೆ ಅಂಕಪಟ್ಟಿಯಲ್ಲಿ ಅಗ್ರ-2 ಸ್ಥಾನದಲ್ಲಿ ಉಳಿದು ಕ್ವಾಲಿಫೈಯರ್‌-1 ಪ್ರವೇಶಿಸುವುದು ಆರ್‌ಸಿಬಿಯ ಪ್ರಮುಖ ಗುರಿ. ಕ್ವಾಲಿಫೈಯರ್‌-1ರಲ್ಲಿ ಗೆದ್ದರೆ ನೇರವಾಗಿ ಫೈನಲ್‌ಗೇರಲಿದ್ದು, ಸೋತರೆ ಮತ್ತೊಂದು ಅವಕಾಶ ಸಿಗಲಿದೆ. ಹೀಗಾಗಿಯೇ ತಂಡ ಅಗ್ರ-2 ಸ್ಥಾನದಲ್ಲೇ ಉಳಿಯಲು ಹೋರಾಡಲಿದೆ.

ಇಂದು ಆರ್‌ಸಿಬಿ ತಂಡವು ಗೆದ್ದರೇ?

ಸನ್‌ರೈಸರ್ಸ್‌ ವಿರುದ್ಧ ಗೆದ್ದರೆ ಆರ್‌ಸಿಬಿ 20 ಅಂಕದೊಂದಿಗೆ ನಂ.1 ಸ್ಥಾನ ಪಡೆದುಕೊಳ್ಳಲಿದೆ. ಒಂದು ವೇಳೆ ಸೋತರೂ ತಂಡದ ನೆಟ್‌ ರನ್‌ರೇಟ್‌(+1.065) ಉತ್ತಮವಾಗಿರುವುದರಿಂದ ಅಗ್ರಸ್ಥಾನ ಅಥವಾ 2ನೇ ಸ್ಥಾನದಲ್ಲೇ ಇದ್ದು ಪ್ಲೇ-ಆಫ್‌ ಪ್ರವೇಶಿಸುವ ಸಾಧ್ಯತೆಯಿದೆ. ವಿರಾಟ್ ಕೊಹ್ಲಿ, ದೇವದತ್ ಪಡಿಕ್ಕಲ್, ಭುವನೇಶ್ವರ್ ಕುಮಾರ್, ಜೋಶ್ ಹೇಜಲ್‌ವುಡ್ ಉತ್ತಮ ಫಾರ್ಮ್‌ನಲ್ಲಿರುವುದು ತಂಡದ ಆತ್ಮವಿಶ್ವಾಸ ಹೆಚ್ಚುವಂತೆ ಮಾಡಿದೆ.

ಮತ್ತೊಂದೆಡೆ ಸನ್‌ರೈಸರ್ಸ್‌ 13 ಪಂದ್ಯಗಳಲ್ಲಿ 8ರಲ್ಲಿ ಗೆದ್ದಿದ್ದು, 16 ಅಂಕದೊಂದಿಗೆ 3ನೇ ಸ್ಥಾನದಲ್ಲಿದೆ. ತಂಡ ಈಗಾಗಲೇ ಪ್ಲೇ-ಆಫ್‌ ಪ್ರವೇಶಿಸಿದ್ದರೂ ಅಗ್ರ-2 ಸ್ಥಾನದ ಮೇಲೆ ಕಣ್ಣಿಟ್ಟಿದೆ. ಇದಕ್ಕಾಗಿ ತಂಡ ಆರ್‌ಸಿಬಿ ವಿರುದ್ಧ ಗೆಲ್ಲಲೇಬೇಕಿದೆ. ಒಂದು ವೇಳೆ ಸೋತರೆ ತಂಡ 3ನೇ ಸ್ಥಾನಿಯಾಗಿ ಪ್ಲೇ-ಆಫ್‌ ಪ್ರವೇಶಿಸಿ, ಎಲಿಮಿನೇಟರ್‌ನಲ್ಲಿ ಆಡಬೇಕಾಗುತ್ತದೆ. ಎಲಿಮಿನೇಟರ್‌ನಲ್ಲಿ ಸೋಲುವ ತಂಡ ಟೂರ್ನಿಯಿಂದಲೇ ಹೊರಬೀಳಲಿದೆ.

ಉಭಯ ತಂಡಗಳ ಸಂಭಾವ್ಯ ಆಟಗಾರರ ಪಟ್ಟಿ

ಆರ್‌ಸಿಬಿ: ಜೇಕಬ್ ಬೆಥೆಲ್, ವಿರಾಟ್ ಕೊಹ್ಲಿ, ದೇವದತ್ ಪಡಿಕ್ಕಲ್, ರಜತ್ ಪಾಟೀದಾರ್(ನಾಯಕ), ವೆಂಕಟೇಶ್ ಅಯ್ಯರ್, ಜಿತೇಶ್ ಶರ್ಮಾ, ಟಿಮ್ ಡೇವಿಡ್, ರೊಮ್ಯಾರಿಯೋ ಶೆಫರ್ಡ್, ಕೃನಾಲ್ ಪಾಂಡ್ಯ, ರಸಿಕ್ ಸಲಂ ಧರ್, ಭುವನೇಶ್ವರ್ ಕುಮಾರ್, ಜೋಶ್ ಹೇಜಲ್‌ವುಡ್.

ಸನ್‌ರೈಸರ್ಸ್ ಹೈದರಾಬಾದ್: ಟ್ರ್ಯಾವಿಸ್ ಹೆಡ್, ಅಭಿಷೇಕ್ ಶರ್ಮಾ, ಇಶಾನ್ ಕಿಶನ್(ವಿಕೆಟ್ ಕೀಪರ್), ಹೆನ್ರಿಚ್ ಕ್ಲಾಸೆನ್, ನಿತೀಶ್ ಕುಮಾರ್ ರೆಡ್ಡಿ, ಸಲಿಲ್ ಅರೋರ, ಸ್ಮರಣ್ ರವಿಚಂದ್ರನ್, ಪ್ಯಾಟ್ ಕಮಿನ್ಸ್(ನಾಯಕ), ಶಿವಾಂಗ್ ಕುಮಾರ್, ಇಶಾನ್ ಮಾಲಿಂಗ, ಸಕೀಬ್ ಹೊಸೈನ್, ಪ್ರಫುಲ್ ಹಿಂಗೆ.

ಪಂದ್ಯ ಆರಂಭ: ಸಂಜೆ 7.30ರಿಂದ

ನೇರ ಪ್ರಸಾರ: ಸ್ಟಾರ್ ಸ್ಪೋರ್ಟ್ಸ್, ಜಿಯೋ ಹಾಟ್‌ಸ್ಟಾರ್.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

IPL 2026: ನಿನ್ನೆ ನಡೆದ ಸಿಎಸ್‌ಕೆ-ಗುಜರಾತ್ ಟೈಟಾನ್ಸ್ ನಡುವಿನ ಮ್ಯಾಚ್ ಗೆದ್ದಿದ್ದು ಯಾರು?
ಐಪಿಎಲ್ 2026 ಟೂರ್ನಿಯಿಂದ ಹೊರಬಿದ್ದ ಸಿಎಸ್‌ಕೆ, ಒಂದು ಪಂದ್ಯ ಆಡದೇ ಧೋನಿ ವಿದಾಯ?