
ಬೆಂಗಳೂರು (ಅ.06) ಏಕದಿನ ವಿಶ್ವಕಪ್ 2027 ಟೂರ್ನಿಗೆ ಟೀಂ ಇಂಡಿಯಾ ತಯಾರಿಗಳು ಆರಂಭಗೊಂಡಿದೆ. ತಂಡದ ಆಯ್ಕೆ ಪ್ರಕ್ರಿಯೆಗಳು ನಡೆಯುತ್ತಿದೆ. ಇದರ ನಡುವೆ ಟೀಂ ಇಂಡಿಯಾ ಬೌಲಿಂಗ್ ಬಲಪಡಿಸಲು ಅನುಭವಿ ವೇಗಿ ಮೊಹಮ್ಮದ್ ಶಮಿಗೆ ಅವಕಾಶ ನೀಡಬೇಕು ಅನ್ನೋ ಕೂಗು ಕೇಳಿಬರುತ್ತಿದೆ. ಹಲವು ಶಮಿ ಹಾಗೂ ಭುವನೇಶ್ವರ್ ಕುಮಾರ್ ವಿಶ್ವಕಪ್ ತಂಡದಲ್ಲಿರಬೇಕು ಎಂದು ಆಗ್ರಹಿಸಿದ್ದಾರೆ. ಈ ಬೆಳವಣಿಗೆ ನಡುವೆ ಆರ್‌ಸಿಬಿ ಬ್ಯಾಟಿಂಗ್ ಕೋಚ್ ದಿನೇಶ್ ಕಾರ್ತಿಕ್, ಮಹತ್ವದ ಹೇಳಿಕೆ ನೀಡಿದ್ದಾರೆ. ಮೊಹಮ್ಮದ್ ಶಮಿಯನ್ನು ಮತ್ತೆ ಟೀಂ ಇಂಡಿಯಾ ಕರೆತೆರವು ಪ್ರಯತ್ನ ಬೇಕಿಲ್ಲ. ಈಗಾಗಲೇ ಟೀಂ ಇಂಡಿಯಾ ಶಮಿಯನ್ನು ದಾಟಿ ಮುಂದೆ ಸಾಗಿದೆ ಎಂದಿದ್ದಾರೆ.
ಮೊಹಮ್ಮದ್ ಶಮಿ ಮತ್ತೆ ಟೀಂ ಇಂಡಿಯಾದಲ್ಲಿ ಕಾಣಿಸಿಕೊಳ್ಳುವ ಸಣ್ಣ ಆಸೆಯೊಂದು ಚಿಗುರೊಡೆದಿತ್ತು. ಆದರೆ ಆಯ್ಕೆ ಪ್ರಕ್ರಿಯೆ, ಆಯ್ಕೆ ಸಮಿತಿ ನಡೆ, ಇದೀಗ ದಿನೇಶ್ ಕಾರ್ತಿಕ್ ಹೇಳಿಕೆ ನೋಡಿದರೆ ಶಮಿ ತಂಡಕ್ಕೆ ಕಮ್‌ಬ್ಯಾಕ್ ದೂರದ ಮಾತಾಗಿದೆ. 2027ರ ವಿಶ್ವಕಪ್ ಟೂರ್ನಿಗೆ ಟೀಂ ಇಂಡಿಯಾ ಉತ್ತಮ ವೇಗಿಗಳನ್ನು ಹೊಂದಿದೆ. ಭಾರತದ ಬೌಲಿಂಗ್ ದಾಳಿ ಸಮತೋಲನದಿಂದ ಕೂಡಿದೆ. ಹೀಗಾಗಿ ಅನುಭವಿ ಕಾರಣಕ್ಕೆ ಶಮಿಯನ್ನು ಮರಳಿ ತರಬೇಕಿಲ್ಲ ಎಂದು ದಿನೇಶ್ ಕಾರ್ತಿಕ್ ಹೇಳಿದ್ದಾರೆ.
ಟೀಂ ಇಂಡಿಯಾ ಬೌಲಿಂಗ್ ದಾಳಿಯಲ್ಲಿ ಸಾಕಷ್ಟು ಮುಂದೆ ಸಾಗಿದೆ. ಇದೀಗ ಹಿಂದಿರುಗಿ ಶಮಿಯನ್ನು ಕರೆತಂದು ಬ್ಯಾಲೆನ್ಸ್ ಮಾಟಬೇಕಿಲ್ಲ. ಮೊಹಮ್ಮದ್ ಶಮಿ ದೇಸಿ ಟೂರ್ನಿ, ಐಪಿಎಲ್ ಟೂರ್ನಿಯಲ್ಲಿ ಉತ್ತಮ ಪ್ರದರ್ಶನ ನೀಡಿದರೂ ಮತ್ತೆ ಶಮಿ ಆಯ್ಕೆ ಸಮಂಜಸವಲ್ಲ ಎಂದು ದಿನೇಶ್ ಕಾರ್ತಿಕ್ ಹೇಳಿದ್ದಾರೆ. ಮೊಹಮ್ಮದ್ ಶಮಿ ಅನುಪಸ್ಥಿತಿಯಲ್ಲಿ ಹರ್ಷಿತ್ ರಾಣಾ ಉತ್ತಮ ನಿರ್ವಹಣೆ ತೋರಿದ್ದಾರೆ. ಜಸ್ಪ್ರೀತ್ ಬುಮ್ರಾಗೆ ಉತ್ತಮ ಸಾಥ್ ನೀಡುತ್ತಿದ್ದಾರೆ ಎಂದು ದಿನೇಶ್ ಕಾರ್ತಿಕ್ ಹೇಳಿದ್ದಾರೆ.
ಜಸ್ಪ್ರೀತ್ ಬುಮ್ರಾ ಜೊತೆ ಎರಡನೇ ವೇಗಿ ಸ್ಥಾನಕ್ಕೆ ಅರ್ಶದೀಪ್ ಸಿಂಗ್ ಹಾಗೂ ಮೊಹಮ್ಮದ್ ಸಿರಾಜ್ ನಡುವೆ ಪೈಪೋಟಿ ಇದೆ. ಪ್ರಸಿದ್ಧ್ ಕೃಷ್ಣ ಹಾಗೂ ಗುರ್ನೂರ್ ಬ್ರಾರ್ ಕೂಡ ಹೋರಾಟ ನಡೆಸುತ್ತಿದ್ದಾರೆ. ಸದ್ಯ ಭಾರತದಲ್ಲಿ ಉತ್ತಮ ಬೌಲಿಂಗ್ ಯೂನಿಟ್ ಇದೆ. ಹೀಗಾಗಿ ಆತಂಕ, ಹಿಂದಿರುಗಿ ಹೋಗುವ ಪ್ರಶ್ನೆ ಇಲ್ಲ ಎಂದು ದಿನೇಶ್ ಕಾರ್ತಿಕ್ ಹೇಳಿದ್ದಾರೆ. ದಿನೇಶ್ ಕಾರ್ತಿಕ್ ನೇರವಾಗಿ ಭುವನೇಶ್ವರ್ ಕುಮಾರ್ ಕುರಿತು ಯಾವುದೇ ಹೇಳಿಕೆ ನೀಡಿಲ್ಲ. ಆದರೆ ಟೀಂ ಇಂಡಿಯಾ ಈಗಾಗಲೇ ಮುಂದೆ ಸಾಗಿದೆ ಅನ್ನೋ ಹೇಳಿಕೆ ಮೂಲಕ ಅನುಭವಿ ಬೌಲರ್‌ಗಿಂತ ಯುವ ಪಡೆ ಬಲಿಷ್ಠವಾಗಿದೆ ಅನ್ನೋ ಹೇಳಿಕೆ ನೀಡಿದ್ದಾರೆ. ಇದು ಭುವನೇಶ್ವರ್ ಕುಮಾರ್‌ಗೂ ಅನ್ವಯವಾಗುತ್ತಾ ಅನ್ನೋ ಪ್ರಶ್ನೆಗಳು ಎದುರಾಗಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.