RCB ಸೋಲಿನ ಬೆನ್ನಲ್ಲೇ ಸಿಕ್ಕಾಪಟ್ಟೆ ಟ್ರೋಲ್..! ಇದು RCB ಹಳೆ ಅಧ್ಯಾಯವೆಂದ ಫ್ಯಾನ್ಸ್

By Naveen Kodase  |  First Published Apr 3, 2024, 4:15 PM IST

ಆರ್‌ಸಿಬಿ ಅನ್‌ಬಾಕ್ಸ್ ಕಾರ್ಯಕ್ರಮದಲ್ಲಿ ಮಾಜಿ ನಾಯಕ ವಿರಾಟ್ ಕೊಹ್ಲಿ, ಇದು ಆರ್‌ಸಿಬಿಯ ಹೊಸ ಅಧ್ಯಾಯ ಎಂದು ಘೋಷಿಸಿದ್ದರು. ಹೀಗಾಗಿ ಆರ್‌ಸಿಬಿ ತಂಡವು ಕಳೆದ 16 ವರ್ಷಗಳ ಸೋಲನ್ನು ಮರೆತು ಹೊಸ ಹುರುಪಿನೊಂದಿಗೆ ಕಣಕ್ಕಿಳಿಯಲಿದೆ ಎಂದೇ ಅಭಿಮಾನಿಗಳು ಕಾಯುತ್ತಿದ್ದರು. ಆದರೆ 17ನೇ ಆವೃತ್ತಿಯಲ್ಲೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಹಳೆ ಚಾಳಿಯನ್ನೇ ಮುಂದುವರೆಸಿರುವುದು ನೆಟ್ಟಿಗರ ಆಕ್ರೋಶಕ್ಕೆ ಕಾರಣವಾಗಿದೆ.


ಬೆಂಗಳೂರು(ಏ.03): 17ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಫಾಫ್ ಡು ಪ್ಲೆಸಿಸ್ ನೇತೃತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಸತತ ಎರಡನೇ ಸೋಲು ಕಂಡಿದೆ. ಟೂರ್ನಿಯಲ್ಲಿ ಆಡಿದ 4  ಪಂದ್ಯಗಳ ಪೈಕಿ ಮೂರು ಪಂದ್ಯಗಳಲ್ಲಿ ಮುಗ್ಗರಿಸಿರುವ ಆರ್‌ಸಿಬಿ, ಅಂಕಪಟ್ಟಿಯಲ್ಲಿ 9ನೇ ಸ್ಥಾನದಲ್ಲೇ ಉಳಿದುಕೊಂಡಿದೆ. ಆರ್‌ಸಿಬಿ ಸೋಲಿನ ಬೆನ್ನಲ್ಲೇ ನೆಟ್ಟಿಗರು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಇನ್ನಿಲ್ಲದಂತೆ ಟ್ರೋಲ್ ಮಾಡುತ್ತಿದ್ದಾರೆ.

ಹೌದು, ಆರ್‌ಸಿಬಿ ಅನ್‌ಬಾಕ್ಸ್ ಕಾರ್ಯಕ್ರಮದಲ್ಲಿ ಮಾಜಿ ನಾಯಕ ವಿರಾಟ್ ಕೊಹ್ಲಿ, ಇದು ಆರ್‌ಸಿಬಿಯ ಹೊಸ ಅಧ್ಯಾಯ ಎಂದು ಘೋಷಿಸಿದ್ದರು. ಹೀಗಾಗಿ ಆರ್‌ಸಿಬಿ ತಂಡವು ಕಳೆದ 16 ವರ್ಷಗಳ ಸೋಲನ್ನು ಮರೆತು ಹೊಸ ಹುರುಪಿನೊಂದಿಗೆ ಕಣಕ್ಕಿಳಿಯಲಿದೆ ಎಂದೇ ಅಭಿಮಾನಿಗಳು ಕಾಯುತ್ತಿದ್ದರು. ಆದರೆ 17ನೇ ಆವೃತ್ತಿಯಲ್ಲೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಹಳೆ ಚಾಳಿಯನ್ನೇ ಮುಂದುವರೆಸಿರುವುದು ನೆಟ್ಟಿಗರ ಆಕ್ರೋಶಕ್ಕೆ ಕಾರಣವಾಗಿದೆ. ಇದು ಆರ್‌ಸಿಬಿಯ ಹೊಸ ಅಧ್ಯಾಯವಲ್ಲ ಹಳೆ ಅಧ್ಯಾಯ ಎಂದು ಟ್ರೋಲ್ ಮಾಡಲಾರಂಭಿಸಿದ್ದಾರೆ.

ಐಪಿಎಲ್‌ನಲ್ಲಿ ಮಿಂಚುತ್ತಿದ್ದಾರೆ ಅನ್‌ಕ್ಯಾಪ್ಡ್ ಪ್ಲೇಯರ್ಸ್..!

ಇಲ್ಲಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಲಖನೌ ಸೂಪರ್ ಜೈಂಟ್ಸ್ ಎದುರಿನ ಪಂದ್ಯದಲ್ಲಿ ಎಲ್ಲಾ ವಿಭಾಗಳಲ್ಲೂ ವೈಫಲ್ಯ ಅನುಭವಿಸಿದ ಆರ್‌ಸಿಬಿ 28 ರನ್ ಅಂತರದ ಹೀನಾಯ ಸೋಲು ಅನುಭವಿಸಿದೆ. ಟಾಸ್ ಗೆದ್ದು ಪಂದ್ಯದ ಆರಂಭದವರೆಗೂ ಆರ್‌ಸಿಬಿ ತಂಡವು ಹಿಡಿತ ಸಾಧಿಸಿತ್ತು. ಆದರೆ ಕ್ವಿಂಟನ್ ಡಿ ಕಾಕ್ 82 ಹಾಗೂ ಕೊನೆಯಲ್ಲಿ ನಿಕೋಲಸ್ ಪೂರನ್ ಸ್ಪೋಟಕ 42 ರನ್ ನೆರವಿನಿಂದ ಲಖನೌ ತಂಡವು ನಿಗದಿತ 20 ಓವರ್‌ಗಳಲ್ಲಿ 5 ವಿಕೆಟ್ ಕಳೆದುಕೊಂಡು 181 ರನ್ ಬಾರಿಸಿತ್ತು. 

ಇನ್ನು ಸ್ಪರ್ಧಾತ್ಮಕ ಗುರಿ ಬೆನ್ನತ್ತಿದ ಆರ್‌ಸಿಬಿ ಮತ್ತೊಮ್ಮೆ ಬ್ಯಾಟಿಂಗ್ ವೈಫಲ್ಯ ಅನುಭವಿಸಿತು. ವಿರಾಟ್ ಕೊಹ್ಲಿ, ಫಾಫ್ ಡು ಪ್ಲೆಸಿಸ್, ರಜತ್ ಪಾಟೀದಾರ್, ಗ್ಲೆನ್ ಮ್ಯಾಕ್ಸ್‌ವೆಲ್ ಹಾಗೂ ಕ್ಯಾಮರೋನ್ ಗ್ರೀನ್ ಅಲ್ಪಮೊತ್ತಕ್ಕೆ ವಿಕೆಟ್ ಒಪ್ಪಿಸಿದರು. ಇನ್ನು ಕೊನೆಯಲ್ಲಿ ಮಹಿಪಾಲ್ ಲೋಮ್ರಾರ್ ಸ್ಪೋಟಕ 33 ರನ್ ಸಿಡಿಸಿದರಾದರೂ ತಂಡವನ್ನು ಸೋಲಿನಿಂದ ಪಾರು ಮಾಡಲು ಸಾಧ್ಯವಾಗಲಿಲ್ಲ.

IPL 2024 : ಮಯಾಂಕ್‌ ಯಾದವ್‌ ವೇಗಕ್ಕೆ ತತ್ತರಿಸಿದ ಆರ್‌ಸಿಬಿಗೆ 28 ರನ್‌ ಸೋಲು

ಇನ್ನು ಆರ್‌ಸಿಬಿ ಸೋಲಿನ ಬೆನ್ನಲ್ಲೇ ನೆಟ್ಟಿಗರು ಹೇಗೆಲ್ಲಾ ಟ್ರೋಲ್ ಮಾಡಿದ್ದಾರೆ ಎನ್ನುವುದನ್ನು ನೀವೇ ನೋಡಿ
 

click me!