
ಚೆನ್ನೈ(ಏ.13): 14ನೇ ಆವೃತ್ತಿಯ ಐಪಿಎಲ್ ಟೂರ್ನಿಯ ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ವಿರುದ್ದ ಕೊನೆಯ ಎಸೆತದಲ್ಲಿ ರೋಚಕ ಜಯ ಸಾಧಿಸಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಇದೀಗ ಮತ್ತೊಂದು ಗುಡ್ ನ್ಯೂಸ್ ಸಿಕ್ಕಿದೆ
ಕೋವಿಡ್‌ನಿಂದ ಗುಣಮುಖರಾಗಿ ಟೂರ್ನಿ ಆರಂಭಕ್ಕೆ ಮೊದಲೇ ತಂಡ ಕೂಡಿಕೊಂಡಿದ್ದ ಆರ್‌ಸಿಬಿಯ ಆರಂಭಿಕ ಬ್ಯಾಟ್ಸ್‌ಮನ್ ದೇವದತ್ ಪಡಿಕ್ಕಲ್, ಮೊದಲ ಪಂದ್ಯಕ್ಕೆ ಗೈರಾಗಿದ್ದರು. ಇನ್ನಷ್ಟು ಚೇತರಿಸಿಕೊಳ್ಳಲಿ ಎನ್ನುವ ಕಾರಣಕ್ಕೆ ಎಡಗೈ ಬ್ಯಾಟ್ಸ್‌ಮನ್ ಪಡಿಕ್ಕಲ್ ಅವರನ್ನು ಮೊದಲ ಪಂದ್ಯದಿಂದ ಹೊರಗಿಡಲಾಗಿತ್ತು.
ಇದೀಗ ದೇವದತ್ ಪಡಿಕ್ಕಲ್ ಸಂಪೂರ್ಣ ಗುಣಮುಖರಾಗಿದ್ದು, ಬುಧವಾರ(ಏ.14) ನಡೆಯಲಿರುವ ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ ಆಡಲು ಸಿದ್ಧರಿರುವುದಾಗಿ ತಿಳಿಸಿದ್ದಾರೆ. ಆರ್‌ಸಿಬಿಯ ಟ್ವೀಟರ್ ಖಾತೆಯಲ್ಲಿ ಹಾಕಿರುವ ವಿಡಿಯೋದಲ್ಲಿ ಮಾತನಾಡಿರುವ ಅವರು, ‘ಕೋವಿಡ್‌ನಿಂದ ಹಿನ್ನಡೆಯಾಗಿದ್ದು ನಿಜ. ಈಗ ಸಂಪೂರ್ಣವಾಗಿ ಗುಣಮುಖನಾಗಿದ್ದೇನೆ. ಆಡಲು ಸಿದ್ಧನಿದ್ದೇನೆ’ ಎಂದಿದ್ದಾರೆ.
IPL 2021 ಆರ್‌ಸಿಬಿ ಮ್ಯೂಸಿಕ್ ಬ್ಯಾಂಡ್ ಫೋಟೋ ವೈರಲ್
13ನೇ ಆವೃತ್ತಿಯ ಐಪಿಎಲ್ ಟೂರ್ನಿಯ ಎಲಿಮಿನೇಟರ್ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ವಿರುದ್ದ ಮುಗ್ಗರಿಸಿ ಆರ್‌ಸಿಬಿ ಟೂರ್ನಿಯಿಂದ ಹೊರಬಿದ್ದಿತ್ತು. ಇದೀಗ ಉಭಯ ತಂಡಗಳು ಮತ್ತೊಮ್ಮೆ ಮುಖಾಮುಖಿಯಾಗುತ್ತಿದ್ದು, ಎಲಿಮಿನೇಟರ್ ಪಂದ್ಯದ ಸೋಲಿಗೆ ಸೇಡು ತೀರಿಸಿಕೊಳ್ಳಲು ವಿರಾಟ್ ಕೊಹ್ಲಿ ಪಡೆ ತುದಿಗಾಲಿನಲ್ಲಿ ನಿಂತಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.