
ಅಹಮದಾಬಾದ್: ಕಳೆದ ವರ್ಷ ಸಂಭ್ರಮಾಚರಣೆ ವೇಳೆ ನಡೆದಿದ್ದ ಕಾಲ್ತುಳಿತಕ್ಕೆ 11 ಮಂದಿ ಬಲಿಯಾದ ಹಿನ್ನೆಲೆಯಲ್ಲಿ ಈ ಬಾರಿ ಬೆಂಗಳೂರಿನಲ್ಲಿ ವಿಕ್ಟರಿ ಪರೇಡ್ ನಡೆಸದಿರಲು ಫ್ರಾಂಚೈಸಿ ನಿರ್ಧರಿಸಿದೆ.
ಕಳೆದ ವರ್ಷ ವಿಧಾನಸೌಧದ ಮೆಟ್ಟಿಲುಗಳು ಹಾಗೂ ಚಿನ್ನಸ್ವಾಮಿ ಸ್ಟೇಡಿಯಂ(Chinnaswamy Stadiu)ನಲ್ಲಿ ತರಾತುರಿಯಲ್ಲಿ ಆಯೋಜಿಸಿದ್ದ ವಿಜಯೋತ್ಸವದಿಂದಾಗಿ ಕಾಲ್ತುಳಿತ(stampade) ಸಂಭವಿಸಿತ್ತು. ಇದು ಭಾರೀ ಆಕ್ರೋಶಕ್ಕೆ ಕಾರಣವಾಗಿ ಫ್ರಾಂಚೈಸಿ ಕಾನೂನಿನ ಬಿಸಿ ಎದುರಿಸಬೇಕಾಯಿತು. ಹೀಗಾಗಿ ತಪ್ಪು ಪುನರಾವರ್ತನೆ ಆಗಬಾರದೆಂದು ಆರ್‌ಸಿಬಿ ಈ ನಡೆ ಅನಸರಿಸಿದೆ. ‘ಬೆಂಗಳೂರಿನಲ್ಲಿ ಸಂಭ್ರಮಾಚರಣೆ ನಡೆಯುವ ಸಾಧ್ಯತೆ ಕಡಿಮೆ. ಕೆಲವು ಮಾರ್ಗಸೂಚಿಗಳು ಜಾರಿಯಲ್ಲಿವೆ. ನಾವು ಅವುಗಳಿಗೆ ಬದ್ಧವಾಗಿರಬೇಕು’ ಎಂದು ಆರ್‌ಸಿಬಿ ಮೂಲಗಳು ತಿಳಿಸಿವೆ.
ಬೆಂಗಳೂರಿನಲ್ಲಿ ಬುಧವಾರ ಡಿ.ಕೆ.ಶಿವಕುಮಾರ್(DK Shivakumar) ಸಿಎಂ(CM) ಆಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಕಾರ್ಯಕ್ರಮ ನಡೆಯಲಿರುವ ಲೋಕಭವನವು ಚಿನ್ನಸ್ವಾಮಿ ಕ್ರೀಡಾಂಗಣದ ಸಮೀಪದಲ್ಲೇ ಇದೆ. ಈ ಸಂದರ್ಭದಲ್ಲಿ ಆರ್‌ಸಿಬಿ ವಿಕ್ಟರಿ ಪರೇಡ್(RCB Victory Parade) ನಡೆಸಿದರೆ ಸಂಚಾರ ದಟ್ಟಣೆ, ಜನರನ್ನು ನಿಭಾಯಿಸುವುದು ಪೊಲೀಸರಿಗೆ ಸವಾಲಾಗಲಿದೆ. ಎರಡೆರಡು ಕಾರ್ಯಕ್ರಮ ನಡೆಸುವುದು ಕಷ್ಟ ಎನ್ನುವ ಕಾರಣಕ್ಕೂ ಆರ್‌ಸಿಬಿ ಈ ನಿರ್ಧಾರ ತೆಗೆದುಕೊಂಡಿದೆ ಎನ್ನಲಾಗಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.