ರೀಟೈನ್‌ಗೆ ಕ್ಷಣಗಣನೆ ಬೆನ್ನಲ್ಲೇ ಸ್ಪೋಟಕ ಶತಕ ಸಿಡಿಸಿದ ಆರ್‌ಸಿಬಿ ಆಟಗಾರ! ಬೆಂಗಳೂರು ಫ್ರಾಂಚೈಸಿ ಮೇಲೆ ಎಲ್ಲರ ಕಣ್ಣು

By Naveen Kodase  |  First Published Oct 29, 2024, 4:15 PM IST

ಐಪಿಎಲ್ ರೀಟೈನ್ ಘೋಷಣೆಗೆ ಕೆಲವೇ ಗಂಟೆಗಳು ಬಾಕಿ ಇರುವಾಗ ಆರ್‌ಸಿಬಿ ಆಟಗಾರ ಸ್ಪೋಟಕ ಶತಕ ಸಿಡಿಸಿ ಬೆಂಗಳೂರು ಫ್ರಾಂಚೈಸಿಗೆ ದೊಡ್ಡ ಸಂದೇಶ ರವಾನಿಸಿದ್ದಾರೆ.


ಬೆಂಗಳೂರು: ಬಹುನಿರೀಕ್ಷಿತ 18ನೇ ಆವೃತ್ತಿಯ ಐಪಿಎಲ್ ಮೆಗಾ ಹರಾಜಿಗೂ ಮುನ್ನ ಎಲ್ಲಾ ಫ್ರಾಂಚೈಸಿಗಳಿಗೂ ತಮಗೆ ಬೇಕಾದ ಗರಿಷ್ಠ ಆರು ಆಟಗಾರರನ್ನು ರೀಟೈನ್ ಮಾಡಿಕೊಳ್ಳಲು ಬಿಸಿಸಿಐ ಅಕ್ಟೋಬರ್ 31ರವರೆಗೆ ಗಡುವು ನೀಡಿದೆ. ಹೀಗಾಗಿ ಯಾವ ಆಟಗಾರರನ್ನು ಉಳಿಸಿಕೊಳ್ಳಬೇಕು, ಮತ್ತೆ ಯಾವ ಆಟಗಾರರನ್ನು ಮೆಗಾ ಹರಾಜಿನಲ್ಲಿ ಖರೀದಿಸಬೇಕು ಎನ್ನುವ ಬಗ್ಗೆ ಎಲ್ಲಾ ಫ್ರಾಂಚೈಸಿಗಳು ರಣತಂತ್ರ ಹೆಣೆಯುತ್ತಿವೆ. ಇನ್ನು ಚೊಚ್ಚಲ ಐಪಿಎಲ್ ಟ್ರೋಫಿ ಜಯಿಸುವ ಕನಸು ಕಾಣುತ್ತಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿಯು ವಿರಾಟ್ ಕೊಹ್ಲಿ ಜತೆಗೆ ಮತ್ತೆ ಯಾವೆಲ್ಲಾ ಆಟಗಾರರನ್ನು ತನ್ನಲ್ಲೇ ಉಳಿಸಿಕೊಳ್ಳಲಿದೆ ಎನ್ನುವ ಕುತೂಹಲ ಅಭಿಮಾನಿಗಳಲ್ಲಿ ಮನೆ ಮಾಡಿದೆ.

ಹೀಗಿರುವಾಗಲೇ ಆರ್‌ಸಿಬಿ ತಂಡದ ಪ್ರತಿಭಾನ್ವಿತ ಬ್ಯಾಟರ್ ರಜತ್ ಪಾಟೀದಾರ್, ರಣಜಿ ಟ್ರೋಫಿ ಟೂರ್ನಿಯಲ್ಲಿ ಸ್ಪೋಟಕ ಶತಕ ಸಿಡಿಸುವ ಮೂಲಕ ಮತ್ತೊಮ್ಮೆ ಆರ್‌ಸಿಬಿ ಫ್ರಾಂಚೈಸಿ ಗಮನ ಸೆಳೆಯುವಲ್ಲಿ ಯಶಸ್ವಿಯಾಗಿದ್ದಾರೆ. ಹೌದು, ಮಧ್ಯಪ್ರದೇಶ ತಂಡದ ನಾಯಕರಾಗಿರುವ  ರಜತ್ ಪಾಟೀದಾರ್, ಹರ್ಯಾಣ ಎದುರಿನ ರಣಜಿ ಟ್ರೋಫಿ ಪಂದ್ಯದ ನಾಲ್ಕನೇ ದಿನದಾಟದಲ್ಲಿ ಅಜೇಯ ಶತಕ ಸಿಡಿಸುವ ಮೂಲಕ ಹರ್ಯಾಣಗೆ ತಿರುಗೇಟು ನೀಡುವಂತೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ಮಧ್ಯಪ್ರದೇಶ ಎದುರು ಹರ್ಯಾಣ ತಂಡವು ಮೊದಲ ಇನ್ನಿಂಗ್ಸ್‌ನಲ್ಲಿ 132 ರನ್‌ಗಳ ಮುನ್ನಡೆ ಸಾಧಿಸಿತ್ತು. ಆದರೆ ರಜತ್ ಪಾಟೀದಾರ್ ಕೇವಲ 68 ಎಸೆತಗಳಲ್ಲಿ ವಿಸ್ಫೋಟಕ ಶತಕ ಸಿಡಿಸುವ ಮೂಲಕ, ಐಪಿಎಲ್‌ ಆಟಗಾರರ ರೀಟೈನ್‌ ಘೋಷಣೆಗೆ ಕೆಲವೇ ಗಂಟೆಗಳು ಬಾಕಿ ಇರುವಾಗಲೇ ಆರ್‌ಸಿಬಿ ಫ್ರಾಂಚೈಸಿಗೆ ತಾನೆಷ್ಟು ಉಪಯುಕ್ತ ಬ್ಯಾಟರ್ ಎನ್ನುವ ಸ್ಪಷ್ಟ ಸಂದೇಶವನ್ನು ರವಾನಿಸಿದ್ದಾರೆ.

Latest Videos

undefined

ಪಾಕ್ ತಂಡದ ಕ್ಯಾಪ್ಟನ್ ಆಗಿದ್ದು ನನಗೆ ಸಿಕ್ಕ ಅತಿದೊಡ್ಡ ಗೌರವ: ಮೊಹಮ್ಮದ್ ರಿಜ್ವಾನ್

ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿಯು ವಿರಾಟ್ ಕೊಹ್ಲಿ ಹೊರತುಪಡಿಸಿ ಉಳಿದ್ಯಾವ ಬ್ಯಾಟರ್‌ಗಳನ್ನು ರೀಟೈನ್ ಮಾಡಿಕೊಳ್ಳಲಿದೆ ಎನ್ನುವುದು ಇನ್ನೂ ನಿಗೂಢವಾಗಿಯೇ ಉಳಿದಿದೆ. ಹೀಗಾಗಿ ನಾಯಕರಾಗಿದ್ದ ಫಾಫ್ ಡು ಪ್ಲೆಸಿಸ್ ಅವರನ್ನು ಆರ್‌ಸಿಬಿ ಫ್ರಾಂಚೈಸಿಯು ತನ್ನಲ್ಲೇ ಉಳಿಸಿಕೊಳ್ಳಲಿದೆಯೇ ಎನ್ನುವ ಪ್ರಶ್ನೆಗೂ ಇನ್ನೂ ಉತ್ತರ ಸಿಕ್ಕಿಲ್ಲ.

ಕೊಹ್ಲಿ, ಸಿರಾಜ್‌ ರಿಟೇನ್‌, ಕೆಎಲ್‌ ರಾಹುಲ್‌ ಆರ್‌ಸಿಬಿ ಕ್ಯಾಪ್ಟನ್‌?

ಬಿಸಿಸಿಐ ಈಗಾಗಲೇ ಎಲ್ಲಾ ಫ್ರಾಂಚೈಸಿಗಳಿಗೂ ರೀಟೈನ್ ರೂಲ್ಸ್ ಪ್ರಕಟಿಸಿದೆ. ಇದರಂತೆ ಓರ್ವ ಅನ್‌ಕ್ಯಾಪ್ಡ್ ಭಾರತೀಯ ಆಟಗಾರ ಸೇರಿದಂತೆ ಗರಿಷ್ಠ 6 ಆಟಗಾರರನ್ನು ರೀಟೈನ್ ಮಾಡಲು ಅವಕಾಶ ಮಾಡಿಕೊಟ್ಟಿದೆ. ಇದಷ್ಟೇ ಅಲ್ಲದೇ ಯಾವುದೇ ಆಟಗಾರರನ್ನು ರೀಟೈನ್ ಮಾಡಿಕೊಳ್ಳದೇ ಹೋದಲ್ಲಿ ಗರಿಷ್ಠ ಆರು ಆಟಗಾರರನ್ನು ಹರಾಜಿನಲ್ಲಿ ಆರ್‌ಟಿಎಂ(ರೈಟ್ ಟು ಮ್ಯಾಚ್) ಕಾರ್ಡ್ ಬಳಸಲು ಅವಕಾಶ ಮಾಡಿಕೊಟ್ಟಿದೆ.
 

click me!