ಆರೆಂಜ್ ಆರ್ಮಿಯನ್ನು ಅವರದ್ದೇ ಮೈದಾನದಲ್ಲಿ ಬಗ್ಗುಬಡಿದ RCB..! ಸೋಲಿನ ಲೆಕ್ಕಚುಕ್ತಾ

By Naveen Kodase  |  First Published Apr 25, 2024, 11:18 PM IST

ಇಲ್ಲಿನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಮೈದಾನದಲ್ಲಿ ಕಠಿಣ ಗುರಿ ಬೆನ್ನತ್ತಿದ ಸನ್‌ರೈಸರ್ಸ್ ಹೈದರಾಬಾದ್ ತಂಡವು ಉತ್ತಮ ಆರಂಭ ಪಡೆಯುವ ವಿಶ್ವಾಸದಲ್ಲಿತ್ತು. ಆದರೆ ಇಂಪ್ಯಾಕ್ಟ್ ಆಟಗಾರನಾಗಿ ಕಣಕ್ಕಿಳಿದ ಅಪಾಯಕಾರಿ ಆರಂಭಿಕ ಬ್ಯಾಟರ್ ಟ್ರ್ಯಾವಿಸ್ ಹೆಡ್ ಅವರನ್ನು ವಿಲ್ ಜ್ಯಾಕ್ಸ್‌ ಮೊದಲ ಓವರ್‌ನಲ್ಲೇ ಪೆವಿಲಿಯನ್ನಿಗಟ್ಟುವ ಮೂಲಕ ಆರಂಭಿಕ ಶಾಕ್ ನೀಡಿದರು.


ಹೈದರಾಬಾದ್‌(ಏ.25): ತವರಿನಲ್ಲಿ ಸನ್‌ರೈಸರ್ಸ್ ಹೈದರಾಬಾದ್ ಎದುರು ಆಘಾತಕಾರಿ ಸೋಲು ಕಂಡಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಇದೀಗ, ಪ್ಯಾಟ್ ಕಮಿನ್ಸ್ ಪಡೆಯನ್ನು ಅವರದ್ದೇ ಮೈದಾನದಲ್ಲಿ ಬಗ್ಗುಬಡಿಯುವ ಮೂಲಕ ಕಳೆದ ಸೋಲಿನ ಲೆಕ್ಕಾಚಾರ ಚುಕ್ತಾ ಮಾಡಿದೆ. ಗೆಲ್ಲಲು 206 ರನ್ ಗುರಿ ಬೆನ್ನತ್ತಿದ ಸನ್‌ರೈಸರ್ಸ್ ಹೈದರಾಬಾದ್ ತಂಡವು ಆರ್‌ಸಿಬಿ ಶಿಸ್ತುಬದ್ದ ದಾಳಿಗೆ ತತ್ತರಿಸಿ 8 ವಿಕೆಟ್ ಕಳೆದುಕೊಂಡು ಕೇವಲ 171 ರನ್‌ಗಳಿಸಲಷ್ಟೇ ಶಕ್ತವಾಯಿತು. ಈ ಮೂಲಕ 35 ರನ್ ಅಂತರದ ಹೀನಾಯ ಸೋಲು ಅನುಭವಿಸಿದೆ. ಇದೇ ಮೊದಲ ಬಾರಿಗೆ ಈ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ ಸನ್‌ರೈಸರ್ಸ್ ಹೈದರಾಬಾದ್ ತಂಡವು ತವರಿನಲ್ಲಿ ಸೋಲಿನ ಮುಖಭಂಗ ಅನುಭವಿಸಿದೆ. ಇನ್ನು ಸತತ 6 ಸೋಲು ಕಂಡಿದ್ದ ಆರ್‌ಸಿಬಿ ತಂಡವು ಕೊನೆಗೂ ಬಲಿಷ್ಠ ತಂಡವನ್ನು ಮಣಿಸಿ ಗೆಲುವಿನ ಹಳಿಗೆ ಮರಳುವಲ್ಲಿ ಯಶಸ್ವಿಯಾಗಿದೆ.

ಇಲ್ಲಿನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಮೈದಾನದಲ್ಲಿ ಕಠಿಣ ಗುರಿ ಬೆನ್ನತ್ತಿದ ಸನ್‌ರೈಸರ್ಸ್ ಹೈದರಾಬಾದ್ ತಂಡವು ಉತ್ತಮ ಆರಂಭ ಪಡೆಯುವ ವಿಶ್ವಾಸದಲ್ಲಿತ್ತು. ಆದರೆ ಇಂಪ್ಯಾಕ್ಟ್ ಆಟಗಾರನಾಗಿ ಕಣಕ್ಕಿಳಿದ ಅಪಾಯಕಾರಿ ಆರಂಭಿಕ ಬ್ಯಾಟರ್ ಟ್ರ್ಯಾವಿಸ್ ಹೆಡ್ ಅವರನ್ನು ವಿಲ್ ಜ್ಯಾಕ್ಸ್‌ ಮೊದಲ ಓವರ್‌ನಲ್ಲೇ ಪೆವಿಲಿಯನ್ನಿಗಟ್ಟುವ ಮೂಲಕ ಆರಂಭಿಕ ಶಾಕ್ ನೀಡಿದರು. ಹೆಡ್ ಕೇವಲ ಒಂದು ರನ್ ಗಳಿಸಿ ವಿಕೆಟ್ ಒಪ್ಪಿಸಿದರು. ಇನ್ನು ಆರ್‌ಸಿಬಿ ಇಂಪ್ಯಾಕ್ಟ್ ಆಟಗಾರ ಸ್ವಪ್ನಿಲ್ ಸಿಂಗ್ ಮೊದಲ ಓವರ್‌ನಲ್ಲೇ 19 ರನ್ ನೀಡಿ ದುಬಾರಿಯಾದರು, ಡೇಂಜರಸ್ ಬ್ಯಾಟರ್‌ಗಳಾದ ಏಯ್ಡನ್ ಮಾರ್ಕ್‌ರಮ್ ಹಾಗೂ ಹೆನ್ರಿಚ್ ಕ್ಲಾಸೇನ್ ಅವರನ್ನು ಬಲಿ ಪಡೆಯುವಲ್ಲಿ ಯಶಸ್ವಿಯಾದರು. ಈ ಇಬ್ಬರು ತಲಾ 7 ರನ್ ಗಳಿಸಿ ಪೆವಿಲಿಯನ್ ಹಾದಿ ಹಿಡಿದರು.

Match 41. Royal Challengers Bengaluru Won by 35 Run(s) https://t.co/2EpEyR3PF2

— IndianPremierLeague (@IPL)

Latest Videos

undefined

ಇನ್ನು ಆರ್‌ಸಿಬಿಯ ಅನುಭವಿ ಲೆಗ್‌ಸ್ಪಿನ್ನರ್ ಕರ್ಣ್ ಶರ್ಮಾ, ನಿತೀಶ್ ರೆಡ್ಡಿ ಹಾಗೂ ಅಬ್ದುಲ್ ಸಮದ್ ಅವರನ್ನು ಪೆವಿಲಿಯನ್ನಿಗಟ್ಟಿದರು. ಇನ್ನು ನಾಯಕ ಪ್ಯಾಟ್ ಕಮಿನ್ಸ್ ಕೇವಲ 15 ಎಸೆತಗಳಲ್ಲಿ ಅಜೇಯ 31 ರನ್ ಬಾರಿಸಿ ಕ್ಯಾಮರೋನ್ ಗ್ರೀನ್‌ಗೆ ವಿಕೆಟ್ ಒಪ್ಪಿಸಿದರು. ಇದರ ಬೆನ್ನಲ್ಲೇ ಭುವನೇಶ್ವರ್ ಕುಮಾರ್ ಕೂಡಾ ಗ್ರೀನ್‌ಗೆ ವಿಕೆಟ್ ಒಪ್ಪಿಸಿ ಪೆವಿಲಿಯನ್ ಹಾದಿ ಹಿಡಿದರು.

ಕೊಹ್ಲಿ-ಪಾಟೀದಾರ್ ಭರ್ಜರಿ ಫಿಫ್ಟಿ: ಆರೆಂಜ್ ಆರ್ಮಿಗೆ RCB ಸವಾಲಿನ ಗುರಿ

ಇನ್ನು ಕೊನೆಯಲ್ಲಿ ಶಹಬಾಜ್ ಅಹಮದ್ 37 ಎಸೆತಗಳನ್ನು ಎದುರಿಸಿ ಅಜೇಯ 40 ರನ್ ಬಾರಿಸಿದರಾದರೂ ತಂಡವನ್ನು ಸೋಲಿನಿಂದ ಪಾರು ಮಾಡಲು ಸಾಧ್ಯವಾಗಲಿಲ್ಲ

ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ಕರ್ಣ ಶರ್ಮಾ, ಸ್ವಪ್ನಿಲ್ ಸಿಂಗ್, ಕ್ಯಾಮರೋನ್ ಗ್ರೀನ್ ತಲಾ ಎರಡು ವಿಕೆಟ್ ಪಡೆದರೆ, ಯಶ್ ದಯಾಳ್ ಹಾಗೂ ವಿಲ್ ಜ್ಯಾಕ್ಸ್ ತಲಾ ಒಂದೊಂದು ವಿಕೆಟ್ ಪಡೆದರು.

Cameron Green continues to be amongst the wickets 👌 are 141/8 with 4️⃣ overs to go

Follow the Match ▶️ https://t.co/2EpEyR3PF2 | pic.twitter.com/NYzoVOulvQ

— IndianPremierLeague (@IPL)

ಇನ್ನು ಇದಕ್ಕೂ ಮೊದಲು ಟಾಸ್ ಗೆದ್ದು ಬ್ಯಾಟಿಂಗ್ ಮಾಡಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ವಿರಾಟ್ ಕೊಹ್ಲಿ ಹಾಗೂ ರಜತ್ ಪಾಟೀದಾರ್ ಸ್ಪೋಟಕ ಅರ್ಧಶತಕ ಸಿಡಿಸುವ ಮೂಲಕ ತಂಡಕ್ಕೆ ಆಸರೆಯಾದರು. ವಿರಾಟ್ ಕೊಹ್ಲಿ 51 ರನ್ ಬಾರಿಸಿದರೆ, ರಜತ್ ಪಾಟೀದಾರ್ 50 ರನ್ ಬಾರಿಸಿದರು.ಪರಿಣಾಮ ಆರ್‌ಸಿಬಿ ತಂಡವು ನಿಗದಿತ 20 ಓವರ್‌ಗಳಲ್ಲಿ 7 ವಿಕೆಟ್ ಕಳೆದುಕೊಂಡು 206 ರನ್ ಬಾರಿಸಿತ್ತು. 

click me!