
ಬೆಂಗಳೂರು: ಬಹುನಿರೀಕ್ಷಿತ 2025ರ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಗೆ ಕ್ಷಣಗಣನೆ ಆರಂಭವಾಗಿದೆ. ಮಾರ್ಚ್ 22ರಿಂದ 18ನೇ ಆವೃತ್ತಿಯ ಐಪಿಎಲ್ ಟೂರ್ನಿಗೆ ಅಧಿಕೃತ ಚಾಲನೆ ಸಿಗಲಿದ್ದು, ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಕೋಲ್ಕತಾ ನೈಟ್ ರೈಡರ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಖಾಮುಖಿಯಾಗಲಿವೆ. ಈ ಹೈವೋಲ್ಟೇಜ್ ಪಂದ್ಯಕ್ಕೆ ಕೋಲ್ಕತಾದ ಈಡನ್ ಗಾರ್ಡನ್ಸ್ ಮೈದಾನ ಆತಿಥ್ಯ ವಹಿಸಲಿದೆ.
ಇನ್ನು ಮಿಲಿಯನ್ ಡಾಲರ್ ಟೂರ್ನಿಗೂ ಮುನ್ನ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿಯು ತನ್ನ ತವರಿನ ಅಭಿಮಾನಿಗಳಿಗೆ ವಿಶೇಷ ಅನುಭವ ನೀಡಲು ಆರ್‌ಸಿಬಿ ಅನ್‌ಬಾಕ್ಸ್ ಕಾರ್ಯಕ್ರಮವನ್ನು ಇಂದು ಆಯೋಜಿಸಿದೆ. ಇಂದು ಮಧ್ಯಾಹ್ನ 3.30ರಿಂದ ಈ ಅನ್‌ಬಾಕ್ಸ್ ಕಾರ್ಯಕ್ರಮಕ್ಕೆ ಚಾಲನೆ ಸಿಗಲಿದೆ. ಈ ಅನ್‌ಬಾಕ್ಸ್ ಕಾರ್ಯಕ್ರಮದಲ್ಲಿ ಆರ್‌ಸಿಬಿ ಅಭಿಮಾನಿಗಳಿಗೆ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಹಲವು ಸ್ಪೆಷಲ್ ಪ್ರೋಗ್ರಾಂ ಆರ್ಗನೈಸ್ ಮಾಡಿದೆ. ಈ ಅನ್‌ಬಾಕ್ಸ್ ಇವೆಂಟ್‌ನಲ್ಲಿ ಕನ್ನಡದ ಪ್ರಖ್ಯಾತ ಯುವ ಸಂಗೀತಗಾರ ಸಂಜಿತ್ ಹೆಗ್ಡೆ ಹಾಗೂ ಐಶ್ವರ್ಯ ರಂಗರಾಜನ್ ಮತ್ತು ರ್ಯಾಪರ್ ಆಲ್ ಓಕೆ ಸೇರಿದಂತೆ ಹಲವರು ಆರ್‌ಸಿಬಿ ಫ್ಯಾನ್ಸ ರಂಜಿಸಲು ಸಜ್ಜಾಗಿದ್ದಾರೆ.
ಇದನ್ನೂ ಓದಿ: ವಿರಾಟ್ ಕೊಹ್ಲಿಯ ಐಪಿಎಲ್ 973 ರನ್ ದಾಖಲೆ ಈ ಐವರಲ್ಲಿ ಯಾರು ಮುರಿಯಬಹುದು?
ಸಂಜಿತ್ ಹೆಗ್ಡೆಗೆ ಫ್ಯಾನ್ಸ್ ವಿಶೇಷ ಮನವಿ:
ಇತ್ತೀಚೆಗಷ್ಟೇ ಸಂಜಿತ್ ಹೆಗ್ಡೆ ಹಾಗೂ ಸೋನು ನಿಗಮ್ ಹಾಡಿದ ಮಾಯಾವಿ ಸಾಂಗ್ ಎಲ್ಲರ ಬಾಯಲ್ಲೂ ಗುನುಗುತ್ತಿದೆ. ಯಾರ ಸ್ಟೇಟಸ್ ನೋಡಿದ್ರೂ ಅವರ ಹಾಡೇ ಕಣ್ಣಿಗೆ ಬೀಳುತ್ತಿದೆ. ಇದೀಗ ಆರ್‌ಸಿಬಿ ಅನ್‌ಬಾಕ್ಸ್ ಕಾರ್ಯಕ್ರಮದಲ್ಲೂ ಸಂಜಿತ್ ಹೆಗ್ಡೆ ಈ ಹಾಡನ್ನು ಹಾಡುವ ಸಾಧ್ಯತೆಯಿದೆ. ಹೀಗಾಗಿ ಈ ಹಾಡು ಹಾಡದಂತೆ ಅಭಿಮಾನಿಗಳು ವಿಶೇಷ ಮನವಿ ಮಾಡಿಕೊಂಡಿದ್ದಾರೆ.
ಒಂದು ಕಡೆ ಆರ್‌ಸಿಬಿ ತಂಡವು ಕಪ್ ಗೆಲ್ಲುವ ವಿಚಾರದಲ್ಲಿ ಪದೇ ಪದೇ ಸೋಲುತ್ತಿದೆ. ಅದರ ಬೆನ್ನಲ್ಲೇ ಸಂಜಿತ್ ಹೆಗ್ಡೆ ಸೋತೆ ಹೋದೆ ಸೋತೆ ಹೋದೆ ಹಾಡನ್ನು ಹಾಡೋದು ಬೇಡ ಎಂದು ವಿಶೇಷ ಮನವಿ ಮಾಡಿಕೊಂಡಿದ್ದಾರೆ.
ಇದನ್ನೂ ಓದಿ: ಐಪಿಎಲ್ 2025 ಆರ್‌ಸಿಬಿ ನಿಜವಾದ ಮಾಲೀಕರು ಯಾರು? ಫ್ರಾಂಚೈಸಿಗಳ ಕಂಪ್ಲೀಟ್ ಮಾಹಿತಿ
ಚೊಚ್ಚಲ ಐಪಿಎಲ್ ಟ್ರೋಫಿ ಗೆಲ್ಲುವ ಕನವರಿಕೆಯಲ್ಲಿರುವ ಆರ್‌ಸಿಬಿ:
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಕಳೆದ 17 ಸೀಸನ್ ಐಪಿಎಲ್ ಟೂರ್ನಿಯಲ್ಲಿ ಪಾಲ್ಗೊಂಡಿದ್ದರೂ ಇದುವರೆಗೂ ಕಪ್ ಗೆಲ್ಲಲು ಸಾಧ್ಯವಾಗಿಲ್ಲ. ಮೂರು ಬಾರಿ ಫೈನಲ್ ಪ್ರವೇಶಿಸಿದ್ದೇ ಇಲ್ಲಿಯವರೆಗಿನ ಶ್ರೇಷ್ಠ ಸಾಧನೆ ಎನಿಸಿಕೊಂಡಿದೆ. ಆರ್‌ಸಿಬಿ ತಂಡವು ಹಲವಾರು ಸ್ಮರಣೀಯ ಗೆಲುವುಗಳನ್ನು ದಾಖಲಿಸಿದೆಯಾದರೂ ಕಪ್ ಗೆಲ್ಲಲು ಮಾತ್ರ ಇದುವರೆಗೂ ಸಾಧ್ಯವಾಗಿಲ್ಲ. ಆರ್‌ಸಿಬಿ ತಂಡವು ಕಳೆದ ಕೆಲ ವರ್ಷಗಳಲ್ಲಿ ಸ್ಥಿರ ಪ್ರದರ್ಶನ ನೀಡುತ್ತಾ ಬಂದಿದೆಯಾದರೂ ಫೈನಲ್‌ಗೇರಲು ಮಾತ್ರ ಸಾಧ್ಯವಾಗಿಲ್ಲ. ಆರ್‌ಸಿಬಿ ತಂಡವು 2016ರಲ್ಲಿ ಕೊನೆಯ ಬಾರಿಗೆ ಫೈನಲ್‌ಗೇರಿತ್ತು. ಆದರೆ ಫೈನಲ್‌ನಲ್ಲಿ ಸನ್‌ರೈಸರ್ಸ್ ಹೈದರಾಬಾದ್ ಎದುರು ಮುಗ್ಗರಿಸಿತ್ತು. ಇನ್ನು ಕಳೆದ ಆವೃತ್ತಿಯ ಐಪಿಎಲ್ ಟೂರ್ನಿಯ ಮೊದಲಾರ್ಧದಲ್ಲಿ ಸತತ ಸೋಲುಗಳನ್ನು ಅನುಭವಿಸಿತ್ತು. ಆದರೆ ದ್ವಿತಿಯಾರ್ಧದಲ್ಲಿ ಅಮೋಘ ಪ್ರದರ್ಶನ ತೋರುವ ಮೂಲಕ ಪವಾಡ ಸದೃಶ ರೀತಿಯಲ್ಲಿ ಪ್ಲೇ ಆಫ್ ಪ್ರವೇಶಿಸಿತ್ತು. ಆದರೆ ಎಲಿಮಿನೇಟರ್ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ ಎದುರು ಮುಗ್ಗರಿಸುವ ಮೂಲಕ ನಾಲ್ಕನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿತ್ತು.
ಇದನ್ನೂ ಓದಿ: IPL 2025 ಈ ತಂಡದಲ್ಲಿದೆ ಬಲಿಷ್ಠ ಬ್ಯಾಟಿಂಗ್ ಕ್ರಮಾಂಕ; ಕಪ್ ಗೆಲ್ಲುತ್ತಾ ಆರೆಂಜ್ ಆರ್ಮಿ?
ಈ ವರ್ಷ ತಂಡ ಬಹಳ ಅಳೆದು ತೂಗಿ ತಂಡ ಸಿದ್ಧಪಡಿಸಿದೆ. ಇದು 18ನೇ ಆವೃತ್ತಿ. ವಿರಾಟ್ ಕೊಹ್ಲಿಯ ಜೆರ್ಸಿ ಸಂಖ್ಯೆಯೂ 18. ತನ್ನ ನಂ.1 ರಾಯಭಾರಿಗಾಗಿ ಈ ಬಾರಿ ಆರ್‌ಸಿಬಿ ಕಪ್ ಗೆಲ್ಲಲು ಪಣ ತೊಟ್ಟಿದೆ. ಹೊಸ ನಾಯಕ ರಜತ್ ಪಾಟೀದಾರ್ ಹೇಗೆ ತಂಡ ಮುನ್ನಡೆಸಲಿದ್ದಾರೆ ಎನ್ನುವ ಕುತೂಹಲವೂ ಇದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.