
ಬೆಂಗಳೂರು(ಮಾ.18): 2024ನೇ ಸಾಲಿನ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿ ಆರಂಭಕ್ಕೆ ಇದೀಗ ಕ್ಷಣಗಣನೆ ಶುರುವಾಗಿದೆ. ಹೀಗಿರುವಾಗಲೇ ಮಾರ್ಚ್ 19ರಂದು ಬೆಂಗಳೂರಿನಲ್ಲಿ ಆರ್‌ಸಿಬಿ ಫ್ರಾಂಚೈಸಿಯು RCB Unbox ಕಾರ್ಯಕ್ರಮ ಹಮ್ಮಿಕೊಂಡಿದೆ. ಇಲ್ಲಿಯವರೆಗೆ ಆರ್‌ಸಿಬಿ ಕೆಲವು ಪ್ರೋಮೋಗಳನ್ನು ನೋಡಿದ ಬಳಿಕ ಅರ್‌ಸಿಬಿ ಫ್ರಾಂಚೈಸಿಯು ತನ್ನ ಹೆಸರನ್ನು ಬದಲಿಸುವ ಸುಳಿವನ್ನು ಬಿಟ್ಟುಕೊಟ್ಟಿದೆ. ಇದೀಗ ಅಂತಹ ಪ್ರೋಮೋದಲ್ಲಿ ನಟಿ ರಶ್ಮಿಕಾ ಮಂದಣ್ಣ ಕಾಣಿಸಿಕೊಂಡಿದ್ದು, ನೆಟ್ಟಿಗರು ಅಸಮಾಧಾನ ಹೊರಹಾಕಿದ್ದಾರೆ.
ಈ ಪ್ರೋಮೋದಲ್ಲಿ ರಶ್ಮಿಕಾ ಮಂದಣ್ಣ, ಮೇಕ್ ಅಪ್ ವ್ಯಾನ್‌ನೊಳಗೆ ಬರುತ್ತಾರೆ. ಆಗ ವ್ಯಾನ್‌ನೊಳಗಿನ ಕನ್ನಡಿಯ ಮೇಲೆ ರಾಯಲ್ ಚಾಲೆಂಜರ್ಸ್ ಬ್ಯಾಂಗಳೂರು(Royal Challengers Bangalore) ಎಂದು ಬರೆದಿರುತ್ತದೆ. ಅದನ್ನು ನೋಡಿದ ರಶ್ಮಿಕಾ ರಾಯಲ್ ಚಾಲೆಂಜರ್ಸ್ ಅನ್ನು ಉಳಿಸಿ ಬ್ಯಾಂಗಳೂರು ಎನ್ನುವುದನ್ನು ಅಳಿಸಿಹಾಕುತ್ತಾರೆ. ಈ ಮೂಲಕ ಹೆಸರು ಬದಲಾವಣೆಯ ಸುಳಿವನ್ನು ರಶ್ಮಿಕಾ ಮಂದಣ್ಣ ಖಚಿತಪಡಿಸಿದ್ದಾರೆ.
WPL ಕಪ್ ಮಾತ್ರವಲ್ಲ, ಬಹುತೇಕ ಎಲ್ಲಾ ಪ್ರಶಸ್ತಿ ಗೆದ್ದ ನಮ್ಮ ಆರ್‌ಸಿಬಿ..! ಅದರಲ್ಲೂ ರೆಕಾರ್ಡ್
ಹೀಗಿದೆ ನೋಡಿ ಆ ಕ್ಲಿಪ್:
ಇನ್ನು ಆರ್‌ಸಿಬಿ ಫ್ರಾಂಚೈಸಿಯು ರಶ್ಮಿಕಾ ಮಂದಣ್ಣ ಅವರನ್ನು ಈ ಪ್ರೋಮೋಗೆ ಬಳಸಿಕೊಂಡಿದ್ದಕ್ಕೆ ಸೋಷಿಯಲ್ ಮೀಡಿಯಾದಲ್ಲಿ ಆಕ್ರೋಶ ಹೊರಹಾಕಿದ್ದಾರೆ.
ರಾಯಲ್ ಚಾಲೆಂಜರ್ಸ್ ಬ್ಯಾಂಗಳೂರು(Royal Challengers Bangalore) ತಂಡದ ಹೆಸರನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು(Royal Challengers Bengaluru) ಎಂದು ಬದಲಿಸಬೇಕು ಎಂದು ಕಳೆದ 16 ವರ್ಷಗಳಿಂದಲೂ ಕನ್ನಡದ ಆರ್‌ಸಿಬಿ ಅಭಿಮಾನಿಗಳು ಆಗ್ರಹಿಸುತ್ತಲೇ ಬಂದಿದ್ದರು. ಆದರೆ ಸಾಕಷ್ಟು ವರ್ಷಗಳ ಬಳಿಕ ಕೊನೆಗೂ ಆ ನಿರ್ಧಾರ ಕೈಗೊಳ್ಳುವ ಸುಳಿವನ್ನು ಫ್ರಾಂಚೈಸಿ ಬಿಟ್ಟುಕೊಟ್ಟಿದೆ.
IPL 2024 ಕಿಚ್ಚ ಸುದೀಪ್ ಯಾಕೆ ಆ ಇಡ್ಲಿ ಬೇಡ ಅಂದ್ರು ಅರ್ಥ ಆಯ್ತಾ?
ಕಳೆದ 16 ವರ್ಷಗಳಿಂದಲೂ ಐಪಿಎಲ್ ಟೂರ್ನಿಯಲ್ಲಿ ಪಾಲ್ಗೊಳ್ಳುತ್ತಾ ಬಂದಿದ್ದರೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಇದುವರೆಗೂ ಕಪ್ ಗೆಲ್ಲಲು ಸಾಧ್ಯವಾಗಿಲ್ಲ. ಮೂರು ಬಾರಿ ಫೈನಲ್ ಪ್ರವೇಶಿಸಿದ್ದೇ ಆರ್‌ಸಿಬಿಯ ಶ್ರೇಷ್ಠ ಪ್ರದರ್ಶನ ಎನಿಸಿದೆ. 2016ರಲ್ಲಿ ಆರ್‌ಸಿಬಿ ತಂಡವು ಕೊನೆಯ ಬಾರಿಗೆ ಫೈನಲ್ ಪ್ರವೇಶಿಸಿತ್ತು.
ಕೊನೆಗೂ ಪ್ರಶಸ್ತಿ ಬರ ನೀಗಿಸಿದ ಸ್ಮೃತಿ ಮಂಧನಾ ಪಡೆ:
ಇನ್ನೊಂದೆಡೆ ಎರಡನೇ ಆವೃತ್ತಿಯ ವುಮೆನ್ಸ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಸ್ಮೃತಿ ಮಂಧನಾ ನೇತೃತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಚಾಂಪಿಯನ್ ಆಗಿ ಹೊರಹೊಮ್ಮಿದೆ. ನವದೆಹಲಿಯ ಅರುಣ್ ಜೇಟ್ಲಿ ಮೈದಾನದಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು 8 ವಿಕೆಟ್‌ಗಳಿಂದ ಮಣಿಸಿ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಈ ಮೂಲಕ ದಶಕಗಳ ಟ್ರೋಫಿ ಬರವನ್ನು ನೀಗಿಸಿಕೊಂಡಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.