
ಬೆಂಗಳೂರು (ಜು.31): ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) 18ನೇ ಸೀಸನ್ ಐಪಿಎಲ್ ಟ್ರೋಪಿ ವಿಜಯೋತ್ಸವ ಕಾರ್ಯಕ್ರಮದ ವೇಳೆ ಚಿನ್ನಸ್ವಾಮಿ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದಿದ್ದ ಕಾಲ್ತುಳಿತ ಪ್ರಕರಣದಲ್ಲಿ 11 ಜನ ಸಾವನ್ನಪ್ಪಿದ್ದರು. ಈ ಪ್ರಕರಣದಲ್ಲಿ ಭದ್ರತಾ ವೈಫಲ್ಯದ ನೆಪದಲ್ಲಿ 5 ಅಧಿಕಾರಿಗಳನ್ನು ಅಮಾನತು ಮಾಡಲಾಗಿತ್ತು. ಇದೀಗ ಅಮಾನತ್ತಾಗಿದ್ದ ಎಲ್ಲ ಐಪಿಎಸ್ ಅಧಿಕಾರಿಗಳ ಅಮಾನತು ರದ್ದುಗೊಳಿಸಿ ಸರ್ಕಾರ ಹೊಸ ಹುದ್ದೆಗೆ ನಿಯೋಜನೆ ಮಾಡಿದೆ. ಈ ಮೂಲಕ ಅಮಾನತ್ತಾಗಿ ಮನೆಯಲ್ಲಿದ್ದವರೆಲ್ಲಾ ಮತ್ತೆ ತಮ್ಮ ಸೇವೆಗೆ ಹಿಂದಿರುಗಿದ್ದಾರೆ.
ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಇತ್ತೀಚೆಗೆ ನಡೆದಿದ್ದ ಆರ್‌ಸಿಬಿ ವಿಜಯೋತ್ಸವ ಕಾರ್ಯಕ್ರಮ ಆಯೋಜನೆ ಸಮಯದಲ್ಲಿ ಸಂಭವಿಸಿದ್ದ ಕಾಲ್ತುಳಿತದಲ್ಲಿ ಮಹಿಳೆಯರು ಮತ್ತು ಮಕ್ಕಳು ಸಹಿತ 11 ಜನರು ಸಾವನ್ನಪ್ಪಿದ್ದು, ಸುಮಾರು 45ಕ್ಕೂ ಅಧಿಕ ಜನರು ಗಾಯಗೊಂಡ ಘಟನೆ ರಾಜ್ಯದಾದ್ಯಂತ ಖಂಡನೆಗೆ ಗುರಿಯಾಗಿತ್ತು. ಈ ಕುರಿತು ನಡೆಯುತ್ತಿದ್ದ ತನಿಖೆಯ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಬೆಂಗಳೂರಿನ ಪೊಲೀಸ್ ಕಮಿಷನರ್ ಬಿ.ದಯಾನಂದ್ ಸೇರಿದಂತೆ ಕೆಲವು ಹಿರಿಯ ಅಧಿಕಾರಿಗಳನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿತ್ತು. ಇದೀಗ ರಾಜ್ಯ ಸರ್ಕಾರ ಮೂರು ದಿನಗಳ ಹಿಂದೆಯೇ ಈ ಅಮಾನತು ಆದೇಶವನ್ನು ಹಿಂಪಡೆದು, ಅವರ ಹೊಸ ಹುದ್ದೆಗಳಿಗೆ ನಿಯೋಜನೆ ನೀಡಿದೆ.
ಹೊಸ ಹುದ್ದೆ ಪಡೆದ ಅಧಿಕಾರಿಗಳ ವಿವರ:
ಸರ್ಕಾರದ ನಿರ್ಧಾರ:
ಈ ತೀರ್ಮಾನದಿಂದಾಗಿ ಅಮಾನತ್ತಿನಲ್ಲಿದ್ದ ಹಿರಿಯ ಅಧಿಕಾರಿಗಳಿಗೆ ಮತ್ತೆ ಸಕ್ರಿಯ ಸೇವೆಯಲ್ಲಿ ಅವಕಾಶ ಸಿಕ್ಕಿದ್ದು, ಇದು ಪೊಲೀಸ್ ಇಲಾಖೆಯಲ್ಲಿ ಮತ್ತೆ ಚರ್ಚೆ ಆರಂಭಿಸಿದೆ. ಕಾಲ್ತುಳಿತ ಪ್ರಕರಣದ ಸಂಪೂರ್ಣ ತನಿಖೆ ಪೂರ್ತಿಯಾಗಿಲ್ಲದ ಹಿನ್ನಲೆಯಲ್ಲಿ ಈ ನೇಮಕಾತಿಗಳ ತೀವ್ರತೆ ಕುರಿತಂತೆ ಹಲವರು ಪ್ರಶ್ನೆ ಎತ್ತಿದ್ದಾರೆ. ಸ್ಥಳೀಯವಾಗಿ ಹಾಗೂ ರಾಜಕೀಯ ವಲಯದಲ್ಲಿ ಈ ನಿಲುವಿಗೆ ಬಗೆ ಬಗೆಯ ಪ್ರತಿಕ್ರಿಯೆ ವ್ಯಕ್ತವಾಗುತ್ತಿದ್ದು, ಪ್ರಕರಣದ ನೈತಿಕ ಹೊಣೆಗಾರಿಕೆ ಯಾರು ಹೊರುತ್ತಾರೆ ಎಂಬ ಚರ್ಚೆ ಶುರುವಾಗಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.