Team India ಗೆಲುವಿನ ದಡ ಸೇರಿಸಿದ ಪಂತ್, ರೋಹಿತ್ ರಿಯಾಕ್ಷನ್ ವಿಡಿಯೋ ವೈರಲ್‌..!

By Naveen Kodase  |  First Published Jul 18, 2022, 3:13 PM IST

* ಇಂಗ್ಲೆಂಡ್ ಎದುರು ಏಕದಿನ ಸರಣಿ ಗೆದ್ದು ಬೀಗಿದ ಟೀಂ ಇಂಡಿಯಾ
* ಟೀಂ ಇಂಡಿಯಾ ಗೆಲುವಿನಲ್ಲಿ ಮಹತ್ತರ ಪಾತ್ರ ನಿಭಾಯಿಸಿದ ರಿಷಭ್ ಪಂತ್
* ಇಂಗ್ಲೆಂಡ್ ಎದುರಿನ ನಿರ್ಣಾಯಕ ಪಂದ್ಯದಲ್ಲಿ ಚೊಚ್ಚಲ ಶತಕ ಚಚ್ಚಿದ ವಿಕೆಟ್ ಕೀಪರ್ ಬ್ಯಾಟರ್
* ಏಕದಿನ ಸರಣಿ ಗೆಲುವಿನ ಬೆನ್ನಲ್ಲೇ ರೋಹಿತ್ ಶರ್ಮಾ ರಿಯಾಕ್ಷನ್ ವೈರಲ್


ಮ್ಯಾಂಚೆಸ್ಟರ್(ಜು.18): ಭಾರತ ಹಾಗೂ ಇಂಗ್ಲೆಂಡ್ ತಂಡಗಳ ನಡುವಿನ ಮೂರನೇ ಹಾಗೂ ನಿರ್ಣಾಯಕ ಏಕದಿನ ಪಂದ್ಯದಲ್ಲಿ ರೋಹಿತ್ ಶರ್ಮಾ ನೇತೃತ್ವದ ಟೀಂ ಇಂಡಿಯಾ 5 ವಿಕೆಟ್‌ಗಳ ಅಂತರದ ಭರ್ಜರಿ ಗೆಲುವು ಸಾಧಿಸುವ ಮೂಲಕ 3 ಪಂದ್ಯಗಳ ಏಕದಿನ ಸರಣಿಯನ್ನು 2-1 ಅಂತರದಲ್ಲಿ ಕೈವಶ ಮಾಡಿಕೊಂಡಿದೆ. ಆರಂಭಿಕ ಆಘಾತದ ಹೊರತಾಗಿಯೂ ಹಾರ್ದಿಕ್ ಪಾಂಡ್ಯ-ರಿಷಭ್ ಪಂತ್ ಆಕರ್ಷಕ ಜತೆಯಾಟವಾಡುವ ಮೂಲಕ ತಂಡಕ್ಕೆ ಭರ್ಜರಿ ಗೆಲುವು ತಂದುಕೊಟ್ಟರು. ಅದರಲ್ಲೂ ವಿಕೆಟ್ ಕೀಪರ್ ಬ್ಯಾಟರ್ ರಿಷಭ್ ಪಂತ್ ಕೊನೆಯವರೆಗೂ ಹೋರಾಟ ಮಾಡಿ ತಂಡಕ್ಕೆ ಗೆಲುವು ತಂದುಕೊಡುವಲ್ಲಿ ಯಶಸ್ವಿಯಾದರು. ಇನ್ನು ಪಂದ್ಯ ಗೆಲ್ಲಿಸಿಕೊಟ್ಟ ರಿಷಭ್ ಪಂತ್ ಆಟ ನೋಡಿ ರಿಯಾಕ್ಷನ್ ನೀಡಿದ ನಾಯಕ ಶರ್ಮಾ ಅವರ ವಿಡಿಯೋವೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಹೌದು, ಭಾರತ ಹಾಗೂ ಇಂಗ್ಲೆಂಡ್ ತಂಡಗಳ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿಯ ಮೊದಲ ಪಂದ್ಯದಲ್ಲಿ ರೋಹಿತ್ ಶರ್ಮಾ ನೇತೃತ್ವದ ಟೀಂ ಇಂಡಿಯಾ 10 ವಿಕೆಟ್‌ಗಳ ಅಂತರದ ಭರ್ಜರಿ ಗೆಲುವು ಸಾಧಿಸಿತ್ತು. ಇದಾದ ಬಳಿಕ ಲಾರ್ಡ್ಸ್‌ ಮೈದಾನದಲ್ಲಿ ನಡೆದ ಎರಡನೇ ಏಕದಿನ ಪಂದ್ಯದಲ್ಲಿ ಜೋಸ್ ಬಟ್ಲರ್ ನೇತೃತ್ವದ ಇಂಗ್ಲೆಂಡ್ ತಂಡವು 100 ರನ್‌ಗಳ ಅಂತರದ ಭರ್ಜರಿ ಗೆಲುವು ಸಾಧಿಸುವ ಮೂಲಕ ಸರಣಿಯಲ್ಲಿ 1-1ರ ಸಮಬಲ ಸಾಧಿಸುವಂತೆ ಮಾಡಿತ್ತು. ಹೀಗಾಗಿ ಇಲ್ಲಿನ ಓಲ್ಡ್ ಟ್ರಾಫರ್ಡ್‌ ಮೈದಾನದಲ್ಲಿ ನಡೆದ ಮೂರನೇ ಹಾಗೂ ನಿರ್ಣಾಯಕ ಪಂದ್ಯದ ಮೇಲೆ ಎಲ್ಲರ ಚಿತ್ತ ನೆಟ್ಟಿತ್ತು.

Tap to resize

Latest Videos

ಟಾಸ್ ಸೋತರೂ ಮೊದಲು ಬ್ಯಾಟಿಂಗ್ ಮಾಡುವ ಅವಕಾಶ ಪಡೆದ ಆತಿಥೇಯ ಇಂಗ್ಲೆಂಡ್ ತಂಡವು ಮೊಹಮ್ಮದ್ ಸಿರಾಜ್ ಹಾಗೂ ಹಾರ್ದಿಕ್ ಪಾಂಡ್ಯ ಮಾರಕ ದಾಳಿಗೆ ತತ್ತರಿಸಿ 259 ರನ್‌ ಗಳಿಸಲಷ್ಟೇ ಶಕ್ತವಾಯಿತು. ಇನ್ನು 260 ರನ್‌ಗಳ ಸ್ಪರ್ಧಾತ್ಮಕ ಗುರಿ ಬೆನ್ನತ್ತಿದ ಟೀಂ ಇಂಡಿಯಾ, ಒಂದು ಹಂತದಲ್ಲಿ 72 ರನ್‌ಗಳಿಗೆ 4 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತ್ತು. ಈ ವೇಳೆ 5ನೇ ವಿಕೆಟ್‌ಗೆ ಹಾರ್ದಿಕ್ ಪಾಂಡ್ಯ ಹಾಗೂ ರಿಷಭ್ ಪಂತ್ ಜೋಡಿ ಸಮಯೋಚಿತ 133 ರನ್‌ಗಳ ಜತೆಯಾಟವಾಡುವ ಮೂಲಕ ತಂಡಕ್ಕೆ ಆಸರೆಯಾದರು. ಬೌಲಿಂಗ್‌ನಲ್ಲಿ 4 ವಿಕೆಟ್ ಕಬಳಿಸಿ ಮಿಂಚಿದ್ದ ಆಲ್ರೌಂಡರ್‌ ಹಾರ್ದಿಕ್ ಪಾಂಡ್ಯ, ಬ್ಯಾಟಿಂಗ್‌ನಲ್ಲಿ 71 ರನ್ ಬಾರಿಸಿ ಮಿಂಚಿದರು. 

ENG vs IND ಪಂತ್ ಶತಕದ ಅಬ್ಬರಕ್ಕೆ ಶರಣಾದ ಇಂಗ್ಲೆಂಡ್‌, ಭಾರತಕ್ಕೆ ಏಕದಿನ ಸರಣಿ!

ಚೊಚ್ಚಲ ಏಕದಿನ ಶತಕ ಸಿಡಿಸಿದ ಪಂತ್: ಟೀಂ ಇಂಡಿಯಾ ವಿಕೆಟ್ ಕೀಪರ್ ಬ್ಯಾಟರ್ ರಿಷಭ್ ಪಂತ್ 2018ರಲ್ಲಿ ಏಕದಿನ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿದ್ದರೂ ಸಹಾ ಇದುವರೆಗೂ ಶತಕ ಬಾರಿಸಲು ಯಶಸ್ವಿಯಾಗಿರಲಿಲ್ಲ. ಆದರೆ ಇಂಗ್ಲೆಂಡ್ ಎದುರಿನ ನಿರ್ಣಾಯಕ ಏಕದಿನ ಪಂದ್ಯದಲ್ಲಿ ಆಕರ್ಷಕ ಶತಕ ಸಿಡಿಸುವ ಮೂಲಕ ಟೀಂ ಇಂಡಿಯಾ ಸ್ಮರಣೀಯ ಗೆಲುವು ದಾಖಲಿಸುವಲ್ಲಿ ರಿಷಭ ಪಂತ್ ಮಹತ್ವದ ಪಾತ್ರ ವಹಿಸಿದರು. ರಿಷಭ್ ಪಂತ್ 113 ಎಸೆತಗಳನ್ನು ಎದುರಿಸಿ 16 ಬೌಂಡರಿ ಹಾಗೂ 2 ಸಿಕ್ಸರ್ ಸಹಿತ ಅಜೇತ 125 ರನ್ ಚಚ್ಚಿದರು. ರಿಷಭ್ ಪಂತ್ 43ನೇ ಓವರ್‌ನ ಮೊದಲ ಎಸೆತದಲ್ಲೇ ರಿವರ್ಸ್‌ ಸ್ವೀಪ್ ಮಾಡಿ ಬೌಂಡರಿ ಬಾರಿಸುವ ಮೂಲಕ ತಂಡವನ್ನು ಗೆಲುವಿನ ದಡ ಸೇರಿಸಿದರು. ಪಂತ್ ಬೌಂಡರಿ ಬಾರಿಸಿ ಪೆವಿಲಿಯನ್‌ನತ್ತ ಥಂಬ್ಸ್ ಅಪ್‌ ಮಾಡಿದರು. ಇದಕ್ಕೆ ಪ್ರತಿಯಾಗಿ ಡಗೌಟ್‌ನಲ್ಲಿ ನಿಂತಿದ್ದ ನಾಯಕ ರೋಹಿತ್ ಶರ್ಮಾ ಕೂಡಾ thumbs up ಮಾಡಿದರು. ಈ ವಿಡಿಯೋವೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

THOSE 👍'S🙌🔥👏 pic.twitter.com/AK43RyC5gk

— Jigar (@jigarudeshi45)
click me!