ಗಾಲೆ ಟೆಸ್ಟ್‌: ಶುಭ್‌ಮನ್ ಗಿಲ್ ದಾಖಲೆ ನುಚ್ಚುನೂರು, WTC ಯಲ್ಲಿ ಯಾವ ಭಾರತೀಯನೂ ಮಾಡಿರದ ಅಪರೂಪದ ದಾಖಲೆ ನಿರ್ಮಿಸಿದ ರಿಷಭ್ ಪಂತ್!

Published : Aug 19, 2026, 11:40 AM IST
Rishabh Pant

ಸಾರಾಂಶ

ಶ್ರೀಲಂಕಾ ವಿರುದ್ಧದ ಗಾಲೆ ಟೆಸ್ಟ್‌ನಲ್ಲಿ ರಿಷಭ್ ಪಂತ್, ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನಲ್ಲಿ (WTC) ಭಾರತದ ಪರ ಅತಿ ಹೆಚ್ಚು ರನ್ ಗಳಿಸಿದ ಆಟಗಾರನಾಗಿ ಹೊರಹೊಮ್ಮಿದ್ದಾರೆ. ಈ ಮೂಲಕ ಶುಭಮನ್ ಗಿಲ್ ಅವರ ದಾಖಲೆಯನ್ನು ಮುರಿದಿರುವ ಪಂತ್, ಟೆಸ್ಟ್ ಕ್ರಿಕೆಟ್‌ನಲ್ಲಿ 100 ಸಿಕ್ಸರ್‌ಗಳನ್ನು ಪೂರೈಸಿದ ಮೊದಲ ಭಾರತೀಯ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ.

ಗಾಲೆ: ವಿಕೆಟ್ ಕೀಪರ್ ಬ್ಯಾಟರ್ ರಿಷಭ್ ಪಂತ್, ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನಲ್ಲಿ (WTC) ಭಾರತದ ಪರ ಅತಿ ಹೆಚ್ಚು ರನ್ ಗಳಿಸಿದ ಆಟಗಾರ ಎಂಬ ಹೊಸ ದಾಖಲೆ ಬರೆದಿದ್ದಾರೆ. ಶ್ರೀಲಂಕಾ ವಿರುದ್ಧದ ಮೊದಲ ಟೆಸ್ಟ್‌ನಲ್ಲಿ ಅವರು ಈ ಸಾಧನೆ ಮಾಡಿದ್ದು, ಭಾರತ ತಂಡದ ನಾಯಕ ಶುಭಮನ್ ಗಿಲ್ ಅವರ ಹೆಸರಿನಲ್ಲಿದ್ದ ಅಪರೂಪದ ದಾಖಲೆ ಇದೀಗ ನುಚ್ಚುನೂರಾಗಿದೆ.

ಗಾಲೆ ಟೆಸ್ಟ್‌ನ ಮೊದಲ ಇನ್ನಿಂಗ್ಸ್‌ನಲ್ಲಿ 39 ರನ್ ಗಳಿಸಿದ್ದ ಪಂತ್, ಎರಡನೇ ಇನ್ನಿಂಗ್ಸ್‌ನಲ್ಲಿ 69 ಎಸೆತಗಳಲ್ಲಿ 66 ರನ್‌ಗಳ ಸ್ಫೋಟಕ ಆಟವಾಡಿದರು. ಇದರೊಂದಿಗೆ, WTCಯಲ್ಲಿ ಆಡಿದ 41 ಪಂದ್ಯಗಳ 73 ಇನ್ನಿಂಗ್ಸ್‌ಗಳಿಂದ ಬರೋಬ್ಬರಿ 2885 ರನ್ ಸಿಡಿಸಿದ್ದಾರೆ. ಈ ಮೂಲಕ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಇತಿಹಾಸದಲ್ಲಿ ಗರಿಷ್ಠ ರನ್ ಬಾರಿಸಿದ ಭಾರತೀಯ ಬ್ಯಾಟರ್ ಎನ್ನುವ ಹಿರಿಮೆಗೆ ಪಾತ್ರರಾಗಿದ್ದಾರೆ.

ಎರಡನೇ ಸ್ಥಾನಕ್ಕೆ ಕುಸಿದ ಶುಭ್‌ಮನ್ ಗಿಲ್

ಇದೇ ಟೆಸ್ಟ್‌ನ ಎರಡೂ ಇನ್ನಿಂಗ್ಸ್‌ಗಳಲ್ಲಿ ವಿಫಲರಾದ ಶುಭಮನ್ ಗಿಲ್ ಈಗ ಎರಡನೇ ಸ್ಥಾನಕ್ಕೆ ಕುಸಿದಿದ್ದಾರೆ. ಅವರು ಮೊದಲ ಇನ್ನಿಂಗ್ಸ್‌ನಲ್ಲಿ 16 ಮತ್ತು ಎರಡನೇ ಇನ್ನಿಂಗ್ಸ್‌ನಲ್ಲಿ ಕೇವಲ 8 ರನ್ ಗಳಿಸಲಷ್ಟೇ ಶಕ್ತರಾದರು. ಗಿಲ್ 41 ಪಂದ್ಯಗಳಿಂದ ಒಟ್ಟು 2,867 ರನ್ ಗಳಿಸಿದ್ದಾರೆ. ಭಾರತದ ಪರ WTCಯಲ್ಲಿ ಅತಿ ಹೆಚ್ಚು ರನ್ ಗಳಿಸಿದವರ ಪಟ್ಟಿಯಲ್ಲಿ ಪಂತ್ ಮತ್ತು ಗಿಲ್ ನಂತರ ರೋಹಿತ್ ಶರ್ಮಾ, ರವೀಂದ್ರ ಜಡೇಜಾ ಮತ್ತು ವಿರಾಟ್ ಕೊಹ್ಲಿ ಇದ್ದಾರೆ.

100 ಸಿಕ್ಸರ್ ಸಿಡಿಸಿದ ನಾಲ್ಕನೇ ಬ್ಯಾಟರ್:

ಈ ರನ್ ದಾಖಲೆಯ ಜೊತೆಗೆ, ಗಾಲೆ ಪಂದ್ಯದಲ್ಲಿ ರಿಷಭ್ ಪಂತ್ ಮತ್ತೊಂದು ಮೈಲಿಗಲ್ಲು ಸ್ಥಾಪಿಸಿದರು. ಟೆಸ್ಟ್ ಕ್ರಿಕೆಟ್‌ನಲ್ಲಿ 100 ಸಿಕ್ಸರ್‌ಗಳನ್ನು ಬಾರಿಸಿದ ಭಾರತದ ಮೊದಲ ಹಾಗೂ ಒಟ್ಟಾರೆ ನಾಲ್ಕನೇ ಬ್ಯಾಟರ್ ಎಂಬ ಹೆಗ್ಗಳಿಕೆಗೆ ಅವರು ಪಾತ್ರರಾದರು. ವಿಶ್ವ ಕ್ರಿಕೆಟ್‌ನಲ್ಲಿ ಅತಿವೇಗವಾಗಿ(51 ಪಂದ್ಯಗಳಲ್ಲಿ) ನೂರು ಸಿಕ್ಸರ್ ಸಿಡಿಸಿದ ಜಗತ್ತಿನ ಮೊದಲ ಬ್ಯಾಟರ್ ಎನ್ನುವ ದಾಖಲೆ ಕೂಡಾ ಪಂತ್ ಪಾಲಾಗಿದೆ. ಸದ್ಯ ಬೆನ್ ಸ್ಟೋಕ್ಸ್(138 ಸಿಕ್ಸರ್) ಅತಿಹೆಚ್ಚು ಸಿಕ್ಸರ್ ಸಿಡಿಸಿದ ಬ್ಯಾಟರ್‌ಗಳ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದ್ದರೇ, ಬ್ರೆಂಡನ್ ಮೆಕ್ಕಲಮ್(107) ಹಾಗೂ ಆಡಂ ಗಿಲ್‌ಕ್ರಿಸ್ಟ್‌(100) ಟಾಪ್-3 ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ. ಪಂತ್ ಬಾರಿಸಿದ 100 ಸಿಕ್ಸರ್‌ಗಳ ಪೈಕಿ 76 ಸಿಕ್ಸರ್‌ಗಳನ್ನು ಸ್ಪಿನ್ನರ್‌ಗಳ ವಿರುದ್ದ ಬಾರಿಸಿದ್ದು ವಿಶೇಷ.

ನಂಬರ್ ಒನ್ ಸ್ಥಾನದಲ್ಲಿದ್ದಾರೆ ಜೋ ರೂಟ್:

ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಇತಿಹಾಸದಲ್ಲೇ ಅತಿ ಹೆಚ್ಚು ರನ್ ಗಳಿಸಿದ ದಾಖಲೆ ಇಂಗ್ಲೆಂಡ್‌ನ ಮಾಜಿ ನಾಯಕ ಜೋ ರೂಟ್ ಹೆಸರಿನಲ್ಲಿದೆ. ರೂಟ್ 77 ಪಂದ್ಯಗಳಿಂದ 6,651 ರನ್ ಗಳಿಸಿ ಮೊದಲ ಸ್ಥಾನದಲ್ಲಿದ್ದಾರೆ. ಆಸ್ಟ್ರೇಲಿಯಾದ ಸ್ಟೀವ್ ಸ್ಮಿತ್ 4,679 ರನ್‌ಗಳೊಂದಿಗೆ ಎರಡನೇ ಸ್ಥಾನದಲ್ಲಿದ್ದಾರೆ. ಪಾಕಿಸ್ತಾನ ವಿರುದ್ಧ ಆರಂಭವಾಗಲಿರುವ ಮೂರು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಜೋ ರೂಟ್, WTCಯಲ್ಲಿ 7,000 ರನ್ ಪೂರೈಸಿದ ಮೊದಲ ಆಟಗಾರ ಎಂಬ ಅಪರೂಪದ ದಾಖಲೆ ಬರೆಯುವ ಸನಿಹದಲ್ಲಿದ್ದಾರೆ. ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ ಇತಿಹಾಸದಲ್ಲಿ ಏಳು ಸಾವಿರ ರನ್ ಪೂರೈಸಲು ಜೋ ರೂಟ್‌ಗೆ ಇನ್ನು ಕೇವಲ 349 ರನ್‌ಗಳ ಅಗತ್ಯವಿದೆ.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಮೈದಾನದಲ್ಲಿ ಈತನ ಕಾಮೆಂಟರಿ ನಗು ತರಿಸಿದ್ರೂ, ಕೆಲವೊಮ್ಮೆ ಇರಿಟೇಟ್ ಎಂದ ಅಜಿಂಕ್ಯ ರಹಾನೆ..! ಹೀಗಂದಿದ್ದು ಈ ಸ್ಟಾರ್ ಕ್ರಿಕೆಟರ್‌ಗೆ
ಅರ್ಧಶತಕ ಬಾರಿಸಿ ಮೈದಾನದಲ್ಲೇ ಕಣ್ಣೀರಿಟ್ಟ ನಿತೀಶ್ ರಾಣಾ: ಅಗಲಿದ ಅಮ್ಮನ ನೆನೆದು ಕ್ರಿಕೆಟಿಗ ಭಾವುಕ