ರಿಷಭ್ ಪಂತ್‌ಗೆ ಭಾರತ 'ಎ' ತಂಡದ ನಾಯಕ ಪಟ್ಟ; ಮೈದಾನಕ್ಕಿಳಿಯಲು ರೆಡಿಯಾದ ಸ್ಪೋಟಕ ಬ್ಯಾಟರ್!

Published : Oct 21, 2025, 01:58 PM IST
Rishabh Pant

ಸಾರಾಂಶ

ಇಂಗ್ಲೆಂಡ್ ಪ್ರವಾಸದಲ್ಲಿ ಗಾಯಗೊಂಡಿದ್ದ ರಿಷಭ್ ಪಂತ್, ಇದೀಗ ಭಾರತ 'ಎ' ತಂಡದ ನಾಯಕರಾಗಿ ಸ್ಪರ್ಧಾತ್ಮಕ ಕ್ರಿಕೆಟ್‌ಗೆ ಮರಳಿದ್ದಾರೆ. ದಕ್ಷಿಣ ಆಫ್ರಿಕಾ 'ಎ' ವಿರುದ್ಧದ ನಾಲ್ಕು ದಿನಗಳ ಟೆಸ್ಟ್ ಸರಣಿಗೆ ಅವರನ್ನು ನಾಯಕರನ್ನಾಗಿ ನೇಮಿಸಲಾಗಿದ್ದು, ಈ ಸರಣಿಯು ಅವರ ಪುನರಾಗಮನಕ್ಕೆ ಮಹತ್ವದ ವೇದಿಕೆಯಾಗಿದೆ.

ಮುಂಬೈ: ಇಂಗ್ಲೆಂಡ್ ಪ್ರವಾಸದ ವೇಳೆ ಗಾಯಗೊಂಡಿದ್ದ ರಿಷಭ್ ಪಂತ್ ಅವರನ್ನು ಭಾರತ 'ಎ' ತಂಡದ ನಾಯಕರನ್ನಾಗಿ ನೇಮಕ ಮಾಡಲಾಗಿದೆ. ದಕ್ಷಿಣ ಆಫ್ರಿಕಾ ಎ ವಿರುದ್ಧದ ನಾಲ್ಕು ದಿನಗಳ ಟೆಸ್ಟ್ ಪಂದ್ಯಗಳಿಗೆ ಭಾರತ ಎ ತಂಡವನ್ನು ಪ್ರಕಟಿಸಲಾಗಿದೆ. ಭಾರತ 'ಎ' ತಂಡವು ದಕ್ಷಿಣ ಆಫ್ರಿಕಾ 'ಎ' ತಂಡದ ವಿರುದ್ದ ಎರಡು ಪಂದ್ಯಗಳನ್ನಾಡಲಿದೆ. ಜುಲೈನಲ್ಲಿ ಇಂಗ್ಲೆಂಡ್ ವಿರುದ್ಧ ನಡೆದ ಮ್ಯಾಂಚೆಸ್ಟರ್ ಟೆಸ್ಟ್‌ನಲ್ಲಿ ಬ್ಯಾಟಿಂಗ್ ಮಾಡುವಾಗ ಕ್ರಿಸ್ ವೋಕ್ಸ್ ಅವರ ಚೆಂಡು ಕಾಲಿಗೆ ಬಡಿದು ರಿಷಭ್ ಪಂತ್ ಗಾಯಗೊಂಡಿದ್ದರು. ನಂತರ ಇಂಗ್ಲೆಂಡ್ ವಿರುದ್ಧದ ಕೊನೆಯ ಟೆಸ್ಟ್ ಮತ್ತು ವೆಸ್ಟ್ ಇಂಡೀಸ್ ವಿರುದ್ಧದ ಟೆಸ್ಟ್ ಸರಣಿಯಿಂದಲೂ ಅವರು ಹೊರಗುಳಿದಿದ್ದರು.

ಕ್ರಿಕೆಟ್ ಮೈದಾನಕ್ಕಿಳಿಯಲು ರೆಡಿಯಾದ ರಿಷಭ್ ಪಂತ್

ಮೂರು ತಿಂಗಳ ವಿರಾಮದ ನಂತರ ರಿಷಭ್ ಪಂತ್ ಸ್ಪರ್ಧಾತ್ಮಕ ಕ್ರಿಕೆಟ್‌ಗೆ ಮರಳುತ್ತಿದ್ದಾರೆ. ಅಕ್ಟೋಬರ್ 25 ರಂದು ಆರಂಭವಾಗುವ ದೆಹಲಿ-ಹಿಮಾಚಲ ಪ್ರದೇಶ ನಡುವಿನ ರಣಜಿ ಪಂದ್ಯದ ಮೂಲಕ ರಿಷಭ್ ಪಂತ್ ವಾಪಸಾಗಲಿದ್ದಾರೆ ಎಂದು ಈ ಹಿಂದೆ ವರದಿಯಾಗಿತ್ತು. ಸಾಯಿ ಸುದರ್ಶನ್ ಎ ತಂಡದ ಉಪನಾಯಕರಾಗಿದ್ದಾರೆ. ಮುಂದಿನ ತಿಂಗಳು ನಡೆಯಲಿರುವ ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿಗೂ ಮುನ್ನ ಈ ನಾಲ್ಕು ದಿನಗಳ ಟೆಸ್ಟ್ ಸರಣಿ ನಡೆಯಲಿದೆ.

ದಕ್ಷಿಣ ಆಫ್ರಿಕಾ ವಿರುದ್ಧದ ನಾಲ್ಕು ದಿನಗಳ ಟೆಸ್ಟ್ ಸರಣಿಯ ಮೊದಲ ಪಂದ್ಯಕ್ಕೆ 13 ಸದಸ್ಯರ ತಂಡದಲ್ಲಿ ಎನ್ ಜಗದೀಶನ್, ದೇವದತ್ ಪಡಿಕ್ಕಲ್, ರಜತ್ ಪಾಟಿದಾರ್, ಅಂಶುಲ್ ಕಾಂಬೋಜ್, ತನುಷ್ ಕೋಟ್ಯಾನ್ ಇದ್ದಾರೆ. ಎರಡನೇ ಪಂದ್ಯದ ತಂಡಕ್ಕೆ ಕೆಎಲ್ ರಾಹುಲ್, ಧ್ರುವ್ ಜುರೆಲ್, ಋತುರಾಜ್ ಗಾಯಕ್ವಾಡ್, ಖಲೀಲ್ ಅಹ್ಮದ್, ಅಭಿಮನ್ಯು ಈಶ್ವರನ್, ಪ್ರಸಿದ್ಧ್ ಕೃಷ್ಣ, ಮೊಹಮ್ಮದ್ ಸಿರಾಜ್, ಆಕಾಶ್ ದೀಪ್ ಮರಳಲಿದ್ದು, ಜಗದೀಶನ್, ಆಯುಷ್ ಮಾತ್ರೆ, ಪಾಟಿದಾರ್, ಅಂಶುಲ್ ಕಾಂಬೋಜ್, ಯಶ್ ಠಾಕೂರ್, ಆಯುಷ್ ಬದೋನಿ, ಸಾರಾನ್ಶ್‌ ಜೈನ್ ಅವರನ್ನು ಕೈಬಿಡಲಾಗಿದೆ. ರಣಜಿ ಟ್ರೋಫಿಯ ಮೊದಲ ಪಂದ್ಯದಲ್ಲಿ ತಮಿಳುನಾಡು ವಿರುದ್ಧ ಶತಕ ಬಾರಿಸಿ ಮಿಂಚಿದ್ದ ಇಶಾನ್ ಕಿಶನ್ ಅವರನ್ನು ತಂಡಕ್ಕೆ ಪರಿಗಣಿಸಿದೇ ಇರುವುದು ಸಾಕಷ್ಟು ಅಚ್ಚರಿಗೆ ಕಾರಣವಾಗಿದೆ.

ರಿಷಭ್ ಪಂತ್ ಅನುಪಸ್ಥಿತಿಯಲ್ಲಿ ವೆಸ್ಟ್ ಇಂಡೀಸ್ ಎದುರಿನ ಎರಡು ಪಂದ್ಯಗಳ ಟೆಸ್ಟ್‌ ಸರಣಿಯಲ್ಲಿ ಧ್ರುವ್ ಜುರೆಲ್ ವಿಕೆಟ್ ಕೀಪರ್ ಬ್ಯಾಟರ್ ಆಗಿ ಕಣಕ್ಕಿಳಿದಿದ್ದರು. ಜುರೆಲ್ ಎರಡನೇ ಟೆಸ್ಟ್‌ನಲ್ಲಿ ಆಕರ್ಷಕ ಶತಕ ಸಿಡಿಸುವ ಮೂಲಕ ಗಮನ ಸೆಳೆದಿದ್ದರು. ಇದೀಗ ರಿಷಭ್ ಪಂತ್, ಭಾರತ ‘ಎ’ ಪರ ಅದ್ಭುತ ಆಟವಾಡುವ ಮೂಲಕ ಭಾರತ ಟೆಸ್ಟ್ ತಂಡವನ್ನು ಕೂಡಿಕೊಳ್ಳುವ ವಿಶ್ವಾಸದಲ್ಲಿದ್ದಾರೆ.

ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ನಾಲ್ಕು ದಿನಗಳ ಪಂದ್ಯಕ್ಕೆ ಭಾರತ ಎ ತಂಡ

ರಿಷಭ್ ಪಂತ್ (ನಾಯಕ), ಆಯುಷ್ ಮಾತ್ರೆ, ಎನ್ ಜಗದೀಶನ್, ಸಾಯಿ ಸುದರ್ಶನ್ (ಉಪನಾಯಕ), ದೇವದತ್ ಪಡಿಕ್ಕಲ್, ರಜತ್ ಪಾಟಿದಾರ್, ಹರ್ಷ್ ದುಬೆ, ತನುಷ್ ಕೋಟ್ಯಾನ್, ಮಾನವ್ ಸುತಾರ್, ಅಂಶುಲ್ ಕಾಂಬೋಜ್, ಯಶ್ ಠಾಕೂರ್, ಆಯುಷ್ ಬದೋನಿ, ಸಾರಾನ್ಶ್‌ ಜೈನ್.

ಎರಡನೇ ನಾಲ್ಕು ದಿನಗಳ ಪಂದ್ಯಕ್ಕೆ ಭಾರತೀಯ ತಂಡ

ರಿಷಭ್ ಪಂತ್ (ನಾಯಕ), ಕೆಎಲ್ ರಾಹುಲ್, ಧ್ರುವ್ ಜುರೆಲ್, ಸಾಯಿ ಸುದರ್ಶನ್ (ಉಪನಾಯಕ), ದೇವದತ್ ಪಡಿಕ್ಕಲ್, ರುತುರಾಜ್ ಗಾಯಕ್ವಾಡ್, ಹರ್ಷ್ ದುಬೆ, ತನುಷ್ ಕೋಡಿಯಾನ್, ಮಾನವ್ ಸುತಾರ್, ಖಲೀಲ್ ಅಹ್ಮದ್, ಗುರ್ನೂರ್ ಬ್ರಾರ್, ಅಭಿಮನ್ಯು ಈಶ್ವರನ್, ಪ್ರಸಿದ್ಧ್ ಕೃಷ್ಣ, ಮೊಹಮ್ಮದ್ ಸಿರಾಜ್, ಆಕಾಶ್ ದೀಪ್.

 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಕೆಎಸ್‌ಸಿಎ ಚುನಾವಣೆ: ಅಸ್ತಿತ್ವದಲ್ಲೇ ಇಲ್ಲದ ಕ್ಲಬ್‌ಗಳ ಹೆಸರು ಮತದಾನ ಪಟ್ಟಿಯಲ್ಲಿ ಪತ್ತೆ!
ಭಾರತ-ಆಫ್ರಿಕಾ ಫೈನಲ್ ಫೈಟ್: ಟೆಸ್ಟ್ ಸೋಲಿಗೆ ಸೇಡು ತೀರಿಸಿಕೊಳ್ಳುತ್ತಾ ಟೀಂ ಇಂಡಿಯಾ?