ಡೆಲ್ಲಿ ಕ್ಯಾಪಿಟಲ್ಸ್ ತೊರೆಯಲು ಮುಂದಾದ್ರಾ ರಿಷಭ್..? ಪಂತ್ ಸೆಳೆಯಲು ಮುಂದಾಯ್ತಾ 5 ಬಾರಿಯ ಚಾಂಪಿಯನ್?

Published : Jul 20, 2024, 04:34 PM ISTUpdated : Jul 20, 2024, 06:21 PM IST
ಡೆಲ್ಲಿ ಕ್ಯಾಪಿಟಲ್ಸ್ ತೊರೆಯಲು ಮುಂದಾದ್ರಾ ರಿಷಭ್..? ಪಂತ್ ಸೆಳೆಯಲು ಮುಂದಾಯ್ತಾ 5 ಬಾರಿಯ ಚಾಂಪಿಯನ್?

ಸಾರಾಂಶ

ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕ ರಿಷಭ್ ಪಂತ್ ಅವರನ್ನು ಮುಂಬರುವ ಐಪಿಎಲ್ ಮೆಗಾ ಹರಾಜಿಗೂ ಮುನ್ನ ಫ್ರಾಂಚೈಸಿಯು ರಿಲೀಸ್ ಮಾಡುವ ಸಾಧ್ಯತೆಯಿದೆ. ಈ ಕುರಿತಾದ ರಿಪೋರ್ಟ್ ಇಲ್ಲಿದೆ ನೋಡಿ

ಬೆಂಗಳೂರು: 2025ರ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಗೂ ಮುನ್ನ ಟೀಂ ಇಂಡಿಯಾ ವಿಕೆಟ್ ಕೀಪರ್ ಬ್ಯಾಟರ್ ರಿಷಭ್ ಪಂತ್, ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ತೊರೆಯುವ ಸಾಧ್ಯತೆ ದಟ್ಟವಾಗಿದೆ ಎಂದು ವರದಿಯಾಗಿದೆ. ರಿಷಭ್ ಪಂತ್ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಪರ ಅತಿಹೆಚ್ಚು ಪಂದ್ಯವನ್ನಾಡಿದ ಹಾಗೂ ಅತಿಹೆಚ್ಚು ರನ್ ಗಳಿಸಿದ ಆಟಗಾರ ಎನಿಸಿಕೊಂಡಿದ್ದಾರೆ.

ಹೌದು, ದೈನಿಕ್ ಜಾಗರಣ್ ವೆಬ್‌ಸೈಟ್ ವರದಿಯ ಪ್ರಕಾರ, ಮುಂಬರುವ ಐಪಿಎಲ್ ಹರಾಜಿಗೂ ಮುನ್ನ ಡೆಲ್ಲಿ ಕ್ಯಾಪಿಟಲ್ಸ್ ಫ್ರಾಂಚೈಸಿಯು ರಿಷಭ್ ಪಂತ್ ಅವರನ್ನು ರೀಟೈನ್ ಮಾಡಿಕೊಳ್ಳುವ ಸಾಧ್ಯತೆ ಕಡಿಮೆಯಿದೆ ಎಂದು ವರದಿಯಾಗಿದೆ. ಒಂದು ವೇಳೆ ಡೆಲ್ಲಿ ಕ್ಯಾಪಿಟಲ್ಸ್ ಫ್ರಾಂಚೈಸಿಯು ರಿಷಭ್ ಪಂತ್ ಅವರನ್ನು ತಂಡದಿಂದ ರಿಲೀಸ್ ಮಾಡಿದರೆ, 5 ಬಾರಿಯ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ಫ್ರಾಂಚೈಸಿಯು ಪಂತ್ ಅವರನ್ನು ತನ್ನ ತೆಕ್ಕೆಗೆ ಸೆಳೆದುಕೊಳ್ಳಲು ತುದಿಗಾಲಿನಲ್ಲಿ ನಿಂತಿದೆ ಎಂದು ವರದಿಯಾಗಿದೆ.

ನತಾಶಾ ಔಟ್, ಬಾಲಿವುಡ್ ಹಾಟ್ ಬೆಡಗಿ ಇನ್: ಹೊಸ ಸಂಬಂಧ ಬೆಳೆಸಲು ರೆಡಿಯಾದ್ರಾ ಹಾರ್ದಿಕ್ ಪಾಂಡ್ಯ..!

ಚೆನ್ನೈ ಮಾಜಿ ನಾಯಕ, ವಿಕೆಟ್‌ ಕೀಪರ್ ಬ್ಯಾಟರ್ ಎಂ ಎಸ್ ಧೋನಿ ಸದ್ಯದಲ್ಲಿಯೇ ಐಪಿಎಲ್‌ಗೆ ವಿದಾಯ ಘೋಷಿಸುವ ಸಾಧ್ಯತೆ ಇರುವುದರಿಂದ ಭವಿಷ್ಯದ ದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಪಂತ್‌ಗೆ ಗಾಳ ಹಾಕಲು ಸಿಎಸ್‌ಕೆ ಫ್ರಾಂಚೈಸಿ ಮುಂದಾಗಿದೆ ಎನ್ನಲಾಗುತ್ತಿದೆ. 

ರಿಷಭ್ ಪಂತ್ ಆರಂಭದಿಂದಲೂ ಐಪಿಎಲ್ ಟೂರ್ನಿಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಪ್ರತಿನಿಧಿಸುತ್ತಾ ಬಂದಿದ್ದಾರೆ. ಉತ್ತರಖಂಡ ಮೂಲದ ಎಡಗೈ ಬ್ಯಾಟರ್ ಆಗಿರುವ ರಿಷಭ್ ಪಂತ್, 2024ರ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದು 171 ರನ್ ಸಿಡಿಸಿದ್ದರು. 2016ರಲ್ಲಿ ಮೊದಲ ಬಾರಿಗೆ ಡೆಲ್ಲಿ ಕ್ಯಾಪಿಟಲ್ಸ್‌ ಮೂಲಕ ಐಪಿಎಲ್‌ಗೆ ಪಾದಾರ್ಪಣೆ ಮಾಡಿದ 111 ಪಂದ್ಯಗಳನ್ನಾಡಿ 35.3ರ ಬ್ಯಾಟಿಂಗ್ ಸರಾಸರಿಯಲ್ಲಿ 3,284 ರನ್ ಸಿಡಿಸಿದ್ದಾರೆ. ಕಳೆದ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ ರಿಷಭ್ ಪಂತ್, ಡೆಲ್ಲಿ ಕ್ಯಾಪಿಟಲ್ಸ್ ಪರ 13 ಪಂದ್ಯಗಳನ್ನಡಿ 446 ರನ್ ಸಿಡಿಸಿದ್ದರು.

ಟ್ರೋಫಿ ಬರ ಅನುಭವಿಸುತ್ತಿರುವ ಡೆಲ್ಲಿ ಕ್ಯಾಪಿಟಲ್ಸ್: ಆರ್‌ಸಿಬಿ ಹಾಗೂ ಪಂಜಾಬ್ ಕಿಂಗ್ಸ್‌ನಂತೆ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಕೂಡಾ ಚೊಚ್ಚಲ ಆವೃತ್ತಿಯಿಂದಲೂ ಐಪಿಎಲ್ ಆಡುತ್ತಾ ಬಂದಿದೆಯಾದರೂ ಇದುವರೆಗೂ ಕಪ್ ಗೆಲ್ಲಲು ಸಾಧ್ಯವಾಗಿಲ್ಲ. ಕಳೆದ 17 ಸೀಸನ್‌ಗಳಿಂದ ಕಪ್ ಗೆಲ್ಲಲು ವಿಫಲವಾಗಿರುವ ಡೆಲ್ಲಿ ಕ್ಯಾಪಿಟಲ್ಸ್, ಮುಂಬರುವ ಐಪಿಎಲ್ ಮೆಗಾ ಹರಾಜಿನಲ್ಲಿ ಸಾಕಷ್ಟು ಅಳೆದುತೂಗಿ ತಮಗೆ ಬೇಕಾದ ಆಟಗಾರರನ್ನು ಖರೀದಿಸಲು ರಣತಂತ್ರ ಹೆಣೆಯಲಾರಂಭಿಸಿದೆ ಎನ್ನಲಾಗುತ್ತಿದೆ. 

ಹಾರ್ದಿಕ್‌ ಪಾಂಡ್ಯಗೆ ಟಿ20 ನಾಯಕತ್ವ ಕೈ ತಪ್ಪಿದ್ದೇಕೆ? ಸೂರ್ಯಕುಮಾರ್ ಕ್ಯಾಪ್ಟನ್ ಆಗಿದ್ದು ಹೇಗೆ?

ಕಳೆದ ಆವೃತ್ತಿಯ ಐಪಿಎಲ್ ಟೂರ್ನಿಗೂ ಮುನ್ನ ಚೆನ್ನೈ ಸೂಪರ್ ಕಿಂಗ್ಸ್ ಫ್ರಾಂಚೈಸಿಯು ಋತುರಾಜ್ ಗಾಯಕ್ವಾಡ್‌ಗೆ ನಾಯಕತ್ವ ಪಟ್ಟ ಕಟ್ಟಿತ್ತು. ಆದರೆ ಸಿಎಸ್‌ಕೆ ತಂಡವು ಪ್ಲೇ ಆಫ್‌ಗೇರಲು ವಿಫಲವಾಗಿತ್ತು. ಇದೀಗ ಒಂದು ವೇಳೆ ರಿಷಭ್ ಪಂತ್ ಚೆನ್ನೈ ಸೂಪರ್ ಕಿಂಗ್ಸ್ ತಂಡ ಕೂಡಿಕೊಂಡರೆ, ನಾಯಕರಾಗುತ್ತಾರೋ ಅಥವಾ ವಿಕೆಟ್ ಕೀಪರ್ ಆಗಿ ಮುಂದುವರೆಯುತ್ತಾರೋ ಎನ್ನುವುದನ್ನು ಕಾದು ನೋಡಬೇಕಿದೆ.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಫೋಟೋ ಹಂಚಿಕೊಂಡು 'ಡಾರ್ಲಿಂಗ್‌..' ಎಂದು ಬರೆದ ಸಾರಾ ತೆಂಡುಲ್ಕರ್‌
ಕುಲ್ದೀಪ್-ಪ್ರಸಿದ್ದ್ ಮಾರಕ ದಾಳಿ; ಏಕದಿನ ಸರಣಿ ಗೆಲ್ಲಲು ಭಾರತಕ್ಕೆ ಸ್ಪರ್ಧಾತ್ಮಕ ಗುರಿ