ಹಿಟ್ ಮ್ಯಾನ್ ಅಬ್ಬರಕ್ಕೆ ಕ್ರಿಸ್ ಗೇಲ್ ದಾಖಲೆ ಪುಡಿ ಪುಡಿ

Published : Aug 04, 2019, 10:55 PM ISTUpdated : Aug 05, 2019, 12:23 PM IST
ಹಿಟ್ ಮ್ಯಾನ್ ಅಬ್ಬರಕ್ಕೆ ಕ್ರಿಸ್ ಗೇಲ್ ದಾಖಲೆ ಪುಡಿ ಪುಡಿ

ಸಾರಾಂಶ

ಹಿಟ್ ಮ್ಯಾನ್ ರೋಹಿತ್ ಶರ್ಮಾ ದಾಖಲೆಯೊಂದನ್ನು ತಮ್ಮ ಹೆಸರಿಗೆ ಬರೆಸಿಕೊಂಡಿದ್ದಾರೆ. ಟಿ-20 ಮಾದರಿಯಲ್ಲಿ ಅತಿಹೆಚ್ಚಿನ ಸಿಕ್ಸರ್ ಸಿಡಿಸಿದ ಖ್ಯಾತಿ ಅವರದ್ದಾಗಿದೆ.

ಫ್ಲೋರಿಡಾ[ಆ. 04]   ವೆಸ್ಟ್‌ಇಂಡೀಸ್ ವಿರುದ್ಧದ ಎರಡನೇ ಟಿ -20 ಯಲ್ಲಿ ಅರ್ಧಶತಕ  ಸಿಡಿಸಿದ ಭಾರತದ ಆರಂಭಿಕ ದಾಂಡಿಗ ರೋಹಿತ್ ಶರ್ಮಾ ಕ್ರೀಸ್ ಗೇಲ್ ದಾಖಲೆಯನ್ನು ಮುರಿದಿದ್ದಾರೆ.

ಟಿ-20 ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ಸಿಕ್ಸರ್ ಬಾರಿಸಿದ ಹಿರಿಮೆಗೆ ಶರ್ಮಾ ಪಾತ್ರವಾಗಿದ್ದಾರೆ. ವಿಂಡೀಸ್ ದೈತ್ಯ ಕ್ರಿಸ್ ಗೇಲ್ ದಾಖಲೆಯನ್ನು ಮುರಿದಿರುವ ರೋಹಿತ್ ಈಗಾಗಲೇ 107 ಸಿಕ್ಸರ್‌ ಸಿಡಿಸಿ ನಂಬರ್ ಒನ್ ಸಿಕ್ಸರ್ ಸರದಾರ ಆಗಿದ್ದಾರೆ.

"

ಮನಸ್ತಾಪ ಬದಿಗಿಟ್ಟು ದಾಖಲೆ ಬರೆಯಲು ಕೊಹ್ಲಿ-ರೋಹಿತ್ ರೆಡಿ!

ಟಿ-20 ಕ್ರಿಕೆಟ್‌ನಲ್ಲಿ ಅತಿ ಹೆಚ್ಚು 21 ಅರ್ಧಶತಕಗಳನ್ನು ಬಾರಿಸಿದ ದಾಖಲೆಗೂ ರೋಹಿತ್ ಪಾತ್ರವಾಗಿದ್ದಾರೆ. ಭಾರತದ ನಾಯಕ ವಿರಾಟ್ ಕೊಹ್ಲಿ ದಾಖಲೆಯನ್ನು ಇದೇ ಪಂದ್ಯದಲ್ಲಿ ಮುರಿದಿದ್ದಾರೆ.

ಟಿ- 20 ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ಸಿಕ್ಸರ್‌ಗಳ ಪಟ್ಟಿ
107 ರೋಹಿತ್ ಶರ್ಮಾ 
105 ಕ್ರಿಸ್ ಗೇಲ್ 
103 ಮಾರ್ಟಿನ್ ಗಪ್ಟಿಲ್ 
92 ಕಾಲಿನ್ ಮನ್ರೊ 
91 ಬ್ರೆಂಡನ್ ಮೆಕಲಮ್ 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಚಿನ್ನಸ್ವಾಮಿಗೆ ಅಂತಾರಾಷ್ಟ್ರೀಯ ಮತ್ತು IPL ಪಂದ್ಯಗಳು ವಾಪಸ್; ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ
ಜೈಸ್ವಾಲ್‌ ಸಖತ್‌ ಸೆಂಚುರಿ, ಟೆಸ್ಟ್‌ ಸರಣಿ ಸೋಲಿಗೆ ಏಕದಿನದಲ್ಲಿ ಸೇಡು ತೀರಿಸಿಕೊಂಡ ಭಾರತ!