ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ತಂಡ ನಿಧಾನಗತಿಯಲ್ಲಿ ಬೌಲಿಂಗ್ ಮಾಡಿದ ತಪ್ಪಿಗೆ ತಂಡದ ನಾಯಕ ರೋಹಿತ್ ಶರ್ಮಾಗೆ 12 ಲಕ್ಷ ರುಪಾಯಿ ದಂಡ ವಿಧಿಸಲಾಗಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.
ಚೆನ್ನೈ(ಏ.22): ಡೆಲ್ಲಿ ಕ್ಯಾಪಿಟಲ್ಸ್ ವಿರುದ್ದ ರೋಚಕ ಸೋಲು ಕಂಡ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್‌ಗೆ ಮತ್ತೊಂದು ಆಘಾತ ಎದುರಾಗಿದ್ದು, ನಾಯಕ ರೋಹಿತ್ ಶರ್ಮಾಗೆ ಬರೋಬ್ಬರಿ 12 ಲಕ್ಷ ರುಪಾಯಿ ದಂಡ ಬಿದ್ದಿದೆ. ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಮಂಗಳವಾರ ನಡೆದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡ ನಿಧಾನಗತಿ ಬೌಲಿಂಗ್ ಮಾಡಿದ್ದಕ್ಕೆ ನಾಯಕ ರೋಹಿತ್ ಶರ್ಮಾಗೆ 12 ಲಕ್ಷ ರುಪಾಯಿ ದಂಡ ವಿಧಿಸಲಾಗಿದೆ.
ನಿಗದಿತ 90 ನಿಮಿಷಗಳಲ್ಲಿ 20 ಓವರ್ ಮುಕ್ತಾಯಗೊಳಿಸಬೇಕು ಎನ್ನುವ ನಿಯಮವನ್ನು ಮುಂಬೈ ಪಾಲಿಸದ ಕಾರಣ ದಂಡ ಹಾಕಲಾಗಿದೆ. ಇದು ಮೊದಲ ಉಲ್ಲಂಘನೆಯಾಗಿದ್ದು, ಈ ಆವೃತ್ತಿಯಲ್ಲಿ ಮುಂಬೈ ಮತ್ತೊಮ್ಮೆ ನಿಧಾನಗತಿ ಬೌಲಿಂಗ್ ನಡೆಸಿದರೆ ನಾಯಕ ರೋಹಿತ್ ಶರ್ಮಾಗೆ 24 ಲಕ್ಷ ರುಪಾಯಿ ದಂಡ ಹಾಗೂ ಉಳಿದ ಆಡುವ ಹನ್ನೊಂದರ ಬಳಗದಲ್ಲಿರುವ ಆಟಗಾರರಿಗೆ ಪಂದ್ಯದ ಸಂಭಾವನೆಯ 25% ದಂಡ ವಿಧಿಸಲಾಗುತ್ತದೆ.
undefined
ಐಪಿಎಲ್ 2021: ರೋಹಿತ್ ಶರ್ಮಾ ವಿಕೆಟ್ ಕಬಳಿಸಿ ದಾಖಲೆ ಬರೆದ ಮಿಶ್ರಾ
ಈ ಆವೃತ್ತಿಯಲ್ಲೇ ಒಂದು ವೇಳೆ ಮೂರನೇ ಬಾರಿಗೆ ತಂಡ ನಿಧಾನಗತಿಯಲ್ಲಿ ಬೌಲಿಂಗ್ ಮಾಡಿದರೆ ನಾಯಕನಿಗೆ 30 ಲಕ್ಷ ರುಪಾಯಿ ದಂಡ ಹಾಗೂ ಒಂದು ಪಂದ್ಯದಿಂದ ನಿಷೇಧಕ್ಕೊಳಗಾಗಬೇಕಾಗುತ್ತದೆ. ಇದೇ ವೇಳೆ ಉಳಿದ ಆಟಗಾರರಿಗೆ ಪಂದ್ಯದ ಸಂಭಾವನೆಯ 50% ದಂಡವಾಗಿ ಪಾವತಿಸಬೇಕಾಗುತ್ತದೆ.