ಟೀಂ ಇಂಡಿಯಾ ಪರ ಆರಂಭಿಕನಾಗಿ ಅಪರೂಪದಲ್ಲೇ ಅಪರೂಪದ ದಾಖಲೆ ಬರೆದ ಕ್ಯಾಪ್ಟನ್ ರೋಹಿತ್ ಶರ್ಮಾ..!

By Naveen Kodase  |  First Published Aug 5, 2024, 6:13 PM IST

ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ, ಏಕದಿನ ಕ್ರಿಕೆಟ್‌ನಲ್ಲಿ ಆರಂಭಿನಾಗಿ ಅಪರೂಪದ ದಾಖಲೆ ನಿರ್ಮಿಸಿದ್ದಾರೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ


ಕೊಲಂಬೊ: ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಅವರ ದಾಖಲೆಯ ಕಿರೀಟಕ್ಕೆ ಮತ್ತೊಂದು ಗರಿ ಸೇರ್ಪಡೆಯಾಗಿದೆ. ಶ್ರೀಲಂಕಾ ಎದುರಿನ ಎರಡನೇ ಏಕದಿನ ಪಂದ್ಯದಲ್ಲಿ ಹಿಟ್‌ಮ್ಯಾನ್ ಖ್ಯಾತಿಯ ರೋಹಿತ್ ಶರ್ಮಾ, ಭಾರತ ಪರ ಅಪರೂಪದಲ್ಲೇ ಅಪರೂಪದ ದಾಖಲೆ ನಿರ್ಮಿಸಿದ್ದಾರೆ. 

ಹೌದು, ಇದೀಗ ರೋಹಿತ್ ಶರ್ಮಾ, ಏಕದಿನ ಕ್ರಿಕೆಟ್ ಇತಿಹಾಸದಲ್ಲಿ ಆರಂಭಿಕ ಬ್ಯಾಟರ್ ಆಗಿ 300 ಸಿಕ್ಸರ್ ಸಿಡಿಸಿದ ಭಾರತದ ಮೊದಲ ಹಾಗೂ ಜಗತ್ತಿನ ಒಟ್ಟಾರೆ ಎರಡನೇ ಓಪನ್ನಿಂಗ್ ಬ್ಯಾಟರ್ ಎನ್ನುವ ಅಪರೂಪದ ದಾಖಲೆ ನಿರ್ಮಿಸಿದ್ದಾರೆ. ಶ್ರೀಲಂಕಾ ಎದುರಿನ ಎರಡನೇ ಏಕದಿನ ಪಂದ್ಯದಲ್ಲಿ ರೋಹಿತ್ ಶರ್ಮಾ 32 ರನ್ ಬಾರಿಸುವ ವೇಳೆಯಲ್ಲಿ ಈ ಅಪರೂಪದ ದಾಖಲೆ ನಿರ್ಮಿಸಿದರು. ಲಂಕಾ ಎದುರಿನ ಎರಡನೇ ಏಕದಿನ ಪಂದ್ಯದಲ್ಲಿ ರೋಹಿತ್ ಶರ್ಮಾ, ಕೇವಲ 44 ಎಸೆತಗಳನ್ನು ಎದುರಿಸಿ 4 ಮುಗಿಲೆತ್ತರದ ಸಿಕ್ಸರ್ ಹಾಗೂ 5 ಮನಮೋಹಕ ಬೌಂಡರಿಗಳ ನೆರವಿನಿಂದ 64 ರನ್ ಸಿಡಿಸಿ ಮಿಂಚಿದರು. 

Tap to resize

Latest Videos

ಪತ್ನಿ ನತಾಶಾ ಕೈಕೊಟ್ಟ ಬಳಿಕ ಹಾರ್ದಿಕ್ ಪಾಂಡ್ಯಗೆ ಮತ್ತೊಂದು ಬಿಗ್ ಶಾಕ್..!

ನಾಯಕ ರೋಹಿತ್ ಶರ್ಮಾ ಸ್ಪೋಟಕ ಬ್ಯಾಟಿಂಗ್ ಹೊರತಾಗಿಯೂ ಲಂಕಾ ಎದುರು ಟೀಂ ಇಂಡಿಯಾ ಸೋಲಿನ ಕಹಿಯುಂಡಿತು. ಇದೆಲ್ಲದರ ನಡುವೆ ಹಿಟ್‌ಮ್ಯಾನ್ ಸಿಕ್ಸರ್ ಸಿಡಿಸುವ ವಿಚಾರದಲ್ಲಿ ಹೊಸ ಮೈಲಿಗಲ್ಲು ನೆಟ್ಟಿದ್ದಾರೆ. ಸದ್ಯ ರೋಹಿತ್ ಶರ್ಮಾ 177 ಏಕದಿನ ಪಂದ್ಯಗಳನ್ನಾಡಿ 302 ಸಿಕ್ಸರ್ ಸಿಡಿಸುವ ಮೂಲಕ ಏಕದಿನ ಕ್ರಿಕೆಟ್‌ನಲ್ಲಿ ಗರಿಷ್ಠ ಸಿಕ್ಸರ್ ಸಿಡಿಸಿದ ಜಗತ್ತಿನ ಓಪನ್ನಿಂಗ್ ಬ್ಯಾಟರ್‌ಗಳ ಪಟ್ಟಿಯಲ್ಲಿ ಎರಡನೇ ಸ್ಥಾನಕ್ಕೇರಿದ್ದಾರೆ. ಇನ್ನು ಏಕದಿನ ಕ್ರಿಕೆಟ್ ಇತಿಹಾಸದಲ್ಲಿ ಗರಿಷ್ಠ ಸಿಕ್ಸರ್ ಸಿಡಿಸಿದ ಬ್ಯಾಟರ್ ಎನ್ನುವ ದಾಖಲೆ ಯೂನಿವರ್ಸಲ್ ಬಾಸ್ ಖ್ಯಾತಿಯ ಕ್ರಿಸ್ ಗೇಲ್ ಹೆಸರಿನಲ್ಲಿದೆ. ವಿಂಡೀಸ್ ಮಾಜಿ ಓಪನ್ನರ್ ಗೇಲ್ 280 ಏಕದಿನ ಪಂದ್ಯಗಳನ್ನಾಡಿ 328 ಸಿಕ್ಸರ್ ಸಿಡಿಸಿದ್ದಾರೆ. ಇನ್ನು ಈ ಪಟ್ಟಿಯಲ್ಲಿ ಲಂಕಾದ ಮಾಜಿ ಆರಂಭಿಕ ಬ್ಯಾಟರ್ ಸನತ್ ಜಯಸೂರ್ಯ 388 ಏಕದಿನ ಪಂದ್ಯಗಳನ್ನಾಡಿ 263 ಸಿಕ್ಸರ್ ಸಿಡಿಸಿದ್ದಾರೆ.

ಇನ್ನು ಒಟ್ಟಾರೆ ಏಕದಿನ ಕ್ರಿಕೆಟ್‌ನಲ್ಲಿ ಗರಿಷ್ಠ ಸಿಕ್ಸರ್ ಸಿಡಿಸಿದ ಬ್ಯಾಟರ್‌ಗಳ ಪಟ್ಟಿಯಲ್ಲಿ ರೋಹಿತ್ ಶರ್ಮಾ ಮೂರನೇ ಸ್ಥಾನದಲ್ಲಿದ್ದಾರೆ. ಸದ್ಯ ರೋಹಿತ್ ಶರ್ಮಾ 264 ಏಕದಿನ ಪಂದ್ಯಗಳನ್ನಾಡಿ 330 ಸಿಕ್ಸರ್ ಸಿಡಿಸಿದ್ದಾರೆ. ಮೊದಲ ಸ್ಥಾನದಲ್ಲಿ ಪಾಕಿಸ್ತಾನದ ಮಾಜಿ ಕ್ರಿಕೆಟಿಗ ಶಾಹಿದ್ ಅಫ್ರಿದಿ(351 ಸಿಕ್ಸರ್) ಹಾಗೂ ಎರಡನೇ ಸ್ಥಾನದಲ್ಲಿ ಕ್ರಿಸ್‌ ಗೇಲ್(331) ಇದ್ದಾರೆ.
 

click me!