ಟೆಸ್ಟ್ ವಿಶ್ವ ಚಾಂಪಿಯನ್‌ಶಿಪ್‌: ಮತ್ತೆ ನಂ.1 ಸ್ಥಾನಕ್ಕೆ ಏರಿದ ಭಾರತ

Published : Mar 04, 2024, 10:56 AM IST
ಟೆಸ್ಟ್ ವಿಶ್ವ ಚಾಂಪಿಯನ್‌ಶಿಪ್‌: ಮತ್ತೆ ನಂ.1 ಸ್ಥಾನಕ್ಕೆ ಏರಿದ ಭಾರತ

ಸಾರಾಂಶ

ಇಂಗ್ಲೆಂಡ್‌ ವಿರುದ್ಧದ 5 ಪಂದ್ಯಗಳ ಸರಣಿಯಲ್ಲಿ 3-1 ಮುನ್ನಡೆ ಸಾಧಿಸಿರುವ ರೋಹಿತ್‌ ಶರ್ಮಾ ನಾಯಕತ್ವದ ಭಾರತ ತಂಡ ಸದ್ಯ ಆಡಿರುವ ಒಟ್ಟು 8 ಪಂದ್ಯಗಳಲ್ಲಿ 5 ಗೆಲುವು, 2 ಸೋಲು ಹಾಗೂ 1 ಡ್ರಾದೊಂದಿಗೆ 62 ಅಂಕ ಗಳಿಸಿದ್ದು, ಶೇ.64.58 ಗೆಲುವಿನ ಪ್ರತಿಶತದೊಂದಿಗೆ ನಂ.1 ಸ್ಥಾನದಲ್ಲಿದೆ.

ದುಬೈ(ಫೆ.04): ಮೊದಲ ಎರಡು ಆವೃತ್ತಿಗಳಲ್ಲಿ ರನ್ನರ್‌-ಅಪ್‌ ಆಗಿರುವ ಟೀಂ ಇಂಡಿಯಾ 2023-25ರ ವಿಶ್ವ ಟೆಸ್ಟ್‌ ಚಾಂಪಿಯನ್‌ಶಿಪ್‌ ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದೆ. ಆಸ್ಟ್ರೇಲಿಯಾ ವಿರುದ್ಧ ಮೊದಲ ಟೆಸ್ಟ್‌ನಲ್ಲಿ ಸೋತ ಕಾರಣ ನ್ಯೂಜಿಲೆಂಡ್‌ ನಂ.1 ಸ್ಥಾನ ಕಳೆದುಕೊಂಡಿದೆ.

ಇಂಗ್ಲೆಂಡ್‌ ವಿರುದ್ಧದ 5 ಪಂದ್ಯಗಳ ಸರಣಿಯಲ್ಲಿ 3-1 ಮುನ್ನಡೆ ಸಾಧಿಸಿರುವ ರೋಹಿತ್‌ ಶರ್ಮಾ ನಾಯಕತ್ವದ ಭಾರತ ತಂಡ ಸದ್ಯ ಆಡಿರುವ ಒಟ್ಟು 8 ಪಂದ್ಯಗಳಲ್ಲಿ 5 ಗೆಲುವು, 2 ಸೋಲು ಹಾಗೂ 1 ಡ್ರಾದೊಂದಿಗೆ 62 ಅಂಕ ಗಳಿಸಿದ್ದು, ಶೇ.64.58 ಗೆಲುವಿನ ಪ್ರತಿಶತದೊಂದಿಗೆ ನಂ.1 ಸ್ಥಾನದಲ್ಲಿದೆ. ಕಿವೀಸ್ 5 ಪಂದ್ಯಗಳಲ್ಲಿ 3 ಗೆಲುವು, 2 ಸೋಲಿನೊಂದಿಗೆ ಶೇ. 60.00 ಗೆಲುವಿನ ಪ್ರತಿಶತ ಹೊಂದಿದ್ದು, 2ನೇ ಸ್ಥಾನದಲ್ಲಿದೆ.

ನಿವೃತ್ತಿ ಹೇಳಿದ್ದ ನೀಲ್ ವ್ಯಾಗ್ನರ್‌ ಮತ್ತೆ ಕಿವೀಸ್‌ ತಂಡಕ್ಕೆ?

ಹಾಲಿ ಚಾಂಪಿಯನ್‌ ಆಸ್ಟ್ರೇಲಿಯಾ 11 ಪಂದ್ಯಗಳಲ್ಲಿ 7 ಗೆಲುವು, 3 ಸೋಲು, 1 ಡ್ರಾದೊಂದಿಗೆ ಶೇ. 59.09 ಗೆಲುವಿನ ಪ್ರತಿಶತ ಹೊಂದಿದ್ದು, ಪಟ್ಟಿಯಲ್ಲಿ 3ನೇ ಸ್ಥಾನದಲ್ಲಿದೆ. ಕಿವೀಸ್‌ ವಿರುದ್ಧ 2ನೇ ಟೆಸ್ಟ್‌ನಲ್ಲೂ ಗೆದ್ದರೆ ತಂಡ 2ನೇ ಸ್ಥಾನಕ್ಕೇರುವ ಅವಕಾಶವಿದೆ. ಇದೇ ವೇಳೆ ಭಾರತ ವಿರುದ್ಧ ಸರಣಿ ಸೋಲುನುಭವಿಸಿರುವ ಇಂಗ್ಲೆಂಡ್‌(ಶೆ. 19.44) 8ನೇ ಸ್ಥಾನದಲ್ಲೇ ಉಳಿದುಕೊಂಡಿವೆ. ಇನ್ನು, ಬಾಂಗ್ಲಾದೇಶ, ಪಾಕಿಸ್ತಾನ, ವೆಸ್ಟ್‌ಇಂಡೀಸ್‌, ದಕ್ಷಿಣ ಆಫ್ರಿಕಾ ಕ್ರಮವಾಗಿ 4, 5, 6 ಮತ್ತು 7ನೇ ಸ್ಥಾನಗಳಲ್ಲಿವೆ.

ವಿಶ್ರಾಂತಿ ಬಳಿಕ ಧರ್ಮಶಾಲಾ ಟೆಸ್ಟ್‌ಗೆ ಆಟಗಾರರ ತಯಾರಿ

ಧರ್ಮಶಾಲಾ: 4ನೇ ಟೆಸ್ಟ್‌ ಬಳಿಕ ಕೆಲ ದಿನಗಳ ಕಾಲ ವಿಶ್ರಾಂತಿ ಪಡೆದುಕೊಂಡಿದ್ದ ಭಾರತ ಹಾಗೂ ಇಂಗ್ಲೆಂಡ್‌ ಆಟಗಾರರು ಸರಣಿಯ ಕೊನೆ ಟೆಸ್ಟ್‌ ಪಂದ್ಯಕ್ಕಾಗಿ ಭಾನುವಾರ ಧರ್ಮಶಾಲಾಗೆ ಆಗಮಿಸಿದ್ದಾರೆ. ಮಾ.7ರಿಂದ ಆರಂಭಗೊಳ್ಳಲಿರುವ ಟೆಸ್ಟ್‌ಗೆ ಸೋಮವಾರದಿಂದ ಉಭಯ ತಂಡಗಳ ಆಟಗಾರರು ಅಭ್ಯಾಸ ನಡೆಸಲಿದ್ದಾರೆ.

ರಾಂಚಿಯಲ್ಲಿ ನಡೆದಿದ್ದ 4ನೇ ಟೆಸ್ಟ್‌ ಪಂದ್ಯದ ಬಳಿಕ ಕೆಲ ಭಾರತೀಯ ಆಟಗಾರರು ತವರಿಗೆ ತೆರಳಿದ್ದರು. ಅತ್ತ ಇಂಗ್ಲೆಂಡ್‌ ಆಟಗಾರರು ಬೆಂಗಳೂರು ಹಾಗೂ ಚಂಡೀಗಢದಲ್ಲಿ ಕಾಲ ಕಳೆದಿದ್ದರು. ಸದ್ಯ 5ನೇ ಟೆಸ್ಟ್‌ಗಾಗಿ ಭಾನುವಾರ ಸಂಜೆ ಮತ್ತೆ ಧರ್ಮಶಾಲಾದಲ್ಲಿ ತಂಡವನ್ನು ಕೂಡಿಕೊಂಡಿದ್ದಾರೆ.

BCCI ಕಾರ್ಯದರ್ಶಿ ಜೈ ಶಾಗೆ ಹಿಗ್ಗಾಮುಗ್ಗಾ ಜಾಡಿಸಿದ ಗೌತಮ್ ಗಂಭೀರ್..!

ಸೋಮವಾರ ಬೆಳಗ್ಗೆ ಭಾರತೀಯ ಆಟಗಾರರ ಅಭ್ಯಾಸ ನಿಗದಿಯಾಗಿದೆ. ಆದರೆ ಅಭ್ಯಾಸಕ್ಕೆ ಮಳೆ ಅಡ್ಡಿಪಡಿಸುವ ಸಾಧ್ಯತೆ ಹೆಚ್ಚಿದೆ. ಈಗಾಗಲೇ ಧರ್ಮಶಾಲಾದಲ್ಲಿ ಮಳೆಯಾಗುತ್ತಿದ್ದು, ಇನ್ನೂ ಕೆಲ ದಿನ ವರ್ಷಧಾರೆಯಾಗುವ ಮುನ್ಸೂಚನೆ ಇದೆ.

ಸದ್ಯ ಸರಣಿಯಲ್ಲಿ ಭಾರತ 3-1 ಮುನ್ನಡೆ ಕಾಯ್ದುಕೊಂಡಿದ್ದು, ಕೊನೆ ಟೆಸ್ಟ್‌ನಲ್ಲೂ ಗೆಲ್ಲುವ ಮೂಲಕ ವಿಶ್ವ ಟೆಸ್ಟ್‌ ಚಾಂಪಿಯನ್‌ಶಿಪ್‌ನಲ್ಲಿ ಅಗ್ರಸ್ಥಾನ ಕಾಯ್ದುಕೊಳ್ಳುವ ನಿರೀಕ್ಷೆಯಲ್ಲಿದೆ. ಅತ್ತ ಇಂಗ್ಲೆಂಡ್‌ ಆರಂಭಿಕ ಟೆಸ್ಟ್‌ನ ಗೆಲುವಿನ ಹೊರತಾಗಿಯೂ ಹ್ಯಾಟ್ರಿಕ್‌ ಸೋಲನುಭವಿಸಿದ್ದು, ಗೆಲುವಿನೊಂದಿಗೆ ಭಾರತ ಪ್ರವಾಸ ಕೊನೆಗೊಳಿಸುವ ಕಾತರದಲ್ಲಿದೆ.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಡಿಕಾಕ್‌ ಡ್ಯಾಶಿಂಗ್‌ ಆಟದ ಮುಂದೆ ಥಂಡಾ ಹೊಡೆದ ಟೀಮ್‌ ಇಂಡಿಯಾ!
ಭಾರತ-ಪಾಕಿಸ್ತಾನ ಟಿ20 ವಿಶ್ವಕಪ್ ಪಂದ್ಯದ ಟಿಕೆಟ್ ಮಾರಾಟ ಆರಂಭ, 450 ರೂಗೆ ಬುಕಿಂಗ್ ಹೇಗೆ?