ಬಾಂಗ್ಲಾದೇಶ ಎದುರಿನ ಟೆಸ್ಟ್‌ ಸರಣಿಗೆ ಟೀಂ ಇಂಡಿಯಾ ಅಭ್ಯಾಸ ಶುರು..!

Published : Sep 14, 2024, 11:41 AM IST
ಬಾಂಗ್ಲಾದೇಶ ಎದುರಿನ ಟೆಸ್ಟ್‌ ಸರಣಿಗೆ ಟೀಂ ಇಂಡಿಯಾ ಅಭ್ಯಾಸ ಶುರು..!

ಸಾರಾಂಶ

ಮುಂಬರುವ ಸೆಪ್ಟೆಂಬರ್ 19ರಿಂದ ಆರಂಭವಾಗಲಿರುವ ಬಾಂಗ್ಲಾದೇಶ ಎದುರಿನ ಟೆಸ್ಟ್ ಸರಣಿಗೆ ಟೀಂ ಇಂಡಿಯಾ ಆಟಗಾರರು ಅಭ್ಯಾಸ ಆರಂಭಿಸಿದ್ದಾರೆ. ಈ ಕುರಿತಾದ ರಿಪೋರ್ಟ್ ಇಲ್ಲಿದೆ ನೋಡಿ

ಚೆನ್ನೈ: ಸೆ.19ರಿಂದ ಆರಂಭಗೊಳ್ಳಲಿರುವ ಬಾಂಗ್ಲಾದೇಶ ವಿರುದ್ಧದ 2 ಪಂದ್ಯಗಳ ಟೆಸ್ಟ್ ಸರಣಿಗೆ ಟೀಂ ಇಂಡಿಯಾ ಆಟಗಾರರು ಶುಕ್ರವಾರ ಚೆನ್ನೈನ ಚೆಪಾಕ್ ಕ್ರೀಡಾಂಗಣದಲ್ಲಿ ಅಭ್ಯಾಸ ಆರಂಭಿಸಿದ್ದಾರೆ. ಆಟಗಾರರು ಇನ್ನೂ 5 ದಿನಗಳ ಅಭ್ಯಾಸ ಶಿಬಿರದಲ್ಲಿ ತೊಡಗಿಸಿಕೊಳ್ಳಲಿದ್ದಾರೆ. 

ವೇಗಿ ವೇಗಿ ಜಸ್‌ಪ್ರೀತ್ ಬುಮ್ರಾ, ಕೆ.ಎಲ್. ರಾಹುಲ್, ರಿಷಭ್ ಪಂತ್ ಸೇರಿದಂತೆ ಹಲವು ಆಟಗಾರರು ಗುರುವಾರವೇ ನಗರಕ್ಕೆ ಆಗಮಿಸಿದ್ದು, ವಿರಾಟ್ ಕೊಹ್ಲಿ, ನಾಯಕ ರೋಹಿತ್ ಶರ್ಮಾ ಸೇರಿ ಕೆಲ ಪ್ರಮುಖ ಆಟಗಾರರು ಶುಕ್ರವಾರ ತಂಡ ಕೂಡಿಕೊಂಡರು.  ಕೊಹ್ಲಿ ಸುಮಾರು 45 ನಿಮಿಷಗಳ ಕಾಲ ನೆಟ್ಸ್ ಅಭ್ಯಾಸ ನಡೆಸಿದರೆ, ಬುಮ್ರಾ ಗಂಟೆಗಳ ಕಾಲ ನೆಟ್ಸ್‌ನಲ್ಲಿ ಬೆವರಿಳಿಸಿದರು. 

Duleep Trophy ಭಾರತ ಸಿ 525ಕ್ಕೆ ಆಲೌಟ್‌: ‘ಬಿ’ ತಂಡವೂ ದಿಟ್ಟ ಉತ್ತರ

ರೋಹಿತ್ ಶರ್ಮಾ, ರವೀಂದ್ರ ಜಡೇಜಾ, ಆರ್.ಅಶ್ವಿನ್, ರಾಹುಲ್ ಸೇರಿದಂತೆ ಬಹುತೇಕ ಎಲ್ಲಾ ಆಟಗಾರರು ಮೈದಾನದಲ್ಲಿ ಕೆಲಹೊತ್ತು ಅಭ್ಯಾಸದಲ್ಲಿ ತೊಡಗಿಸಿಕೊಂಡರು. ಕೆಲ ಆಟಗಾರರು ಕಳೆದ ತಿಂಗಳು ಶ್ರೀಲಂಕಾ ವಿರುದ್ಧದ ಸರಣಿಯಲ್ಲಿ ಪಾಲ್ಗೊಂಡಿದ್ದರು. ಸದ್ಯ ಬಾಂಗ್ಲಾ ಸರಣಿಗೆ ಆಯ್ಕೆಯಾಗಿರುವ ಆಟಗಾರರ ಪೈಕಿ ಸರ್ಫರಾಜ್ ಖಾನ್ ಮಾತ್ರ ಇನ್ನೂ ತಂಡ ಕೂಡಿಕೊಳ್ಳಬೇಕಿದೆ. ಅವರು ಸದ್ಯ ದುಲೀಪ್ ಟ್ರೋಫಿ ಟೂರ್ನಿಯಲ್ಲಿ ಭಾರತ ‘ಬಿ’ ತಂಡದ ಪರ ಆಡುತ್ತಿದ್ದು. ಸೆ.15ರ ಬಳಿಕ ತಂಡ ಸೇರ್ಪಡೆಗೊಳ್ಳಲಿದ್ದಾರೆ.

ಇನ್ನು, ಬಾಂಗ್ಲಾದೇಶ ಆಟಗಾರರು ಭಾನುವಾರ ಅಥವಾ ಸೋಮವಾರ ಚೆನ್ನೈಗೆ ಆಗಮಿಸುವ ಸಾಧ್ಯೆತೆಯಿದೆ ಎಂದು ಹೇಳಲಾಗುತ್ತಿದೆ. ನಜ್ಮುಲ್ ಹೊಸೈನ್ ನಾಯಕತ್ವದ ತಂಡ ಇತ್ತೀಚೆಗಷ್ಟೇ ಪಾಕಿಸ್ತಾನವನ್ನು ಅವರದೇ ತವರಿನಲ್ಲಿ 2-0 ಅಂತರದಲ್ಲಿ ಸೋಲಿಸಿತ್ತು. ಭಾರತಕ್ಕೂ ಆಘಾತ ನೀಡುವ ವಿಶ್ವಾಸದೊಂದಿಗೆ ಆಟಗಾರರು ಚೆನ್ನೈಗೆ ಆಗಮಿಸಲಿದ್ದಾರೆ.

ಭಾರತ ಎದುರಿನ ಟೆಸ್ಟ್‌ ಸರಣಿಗೆ ಬಲಿಷ್ಠ ಬಾಂಗ್ಲಾದೇಶ ಕ್ರಿಕೆಟ್ ತಂಡ ಪ್ರಕಟ!

ಸದ್ಯ ಭಾರತ ತಂಡ ವಿಶ್ವ ಚಾಂಪಿಯನ್‌ಶಿಪ್ ಅಂಕಪಟ್ಟಿಯಲ್ಲಿ ಶೇಕಡಾ 68.52 ಗೆಲುವಿನ ಪ್ರತಿಶತದೊಂದಿಗೆ ಅಗ್ರಸ್ಥಾನದಲ್ಲಿದ್ದು, ಆಸ್ಟ್ರೇಲಿಯಾ (ಶೇ.65.50) 2ನೇ ಸ್ಥಾನದಲ್ಲಿದೆ. ಬಾಂಗ್ಲಾದೇಶ ಶೇ.45.83 ಗೆಲುವಿನ ಪ್ರತಿಶತದೊಂದಿಗೆ 4ನೇ ಸ್ಥಾನದಲ್ಲಿದೆ. ಭಾರತ ಹಾಗೂ ಬಾಂಗ್ಲಾ ನಡುವಿನ 2ನೇ ಪಂದ್ಯ ಸೆ.27ರಿಂದ ಕಾನ್ಪುರದಲ್ಲಿ ನಿಗದಿಯಾಗಿದೆ.

ಬೌಲಿಂಗ್ ಕೋಚ್ ಮೋರ್ನೆ ಮೊರ್ಕೆಲ್‌ಗೆ ಅಗ್ನಿ ಪರೀಕ್ಷೆ:

ಭಾರತ ತಂಡ ನೂತನ ಬೌಲಿಂಗ್ ಕೋಚ್ ಆಗಿ ನೇಮಕಗೊಂಡಿರುವ ದಕ್ಷಿಣ ಆಫ್ರಿಕಾದ ಮೋರ್ನೆ ಮಾರ್ಕೆಲ್ ಮೊದಲ ಬಾರಿ ತಂಡದ ಹುದ್ದೆ ಅಲಂಕರಿಸಲಿದ್ದು, ಅಗ್ನಿಪರೀಕ್ಷೆ ಎದುರಾಗಲಿದೆ. ಅವರು ಶುಕ್ರವಾರ ಭಾರತೀಯ ಆಟಗಾರರ ಜೊತೆ ಅಭ್ಯಾಸ ಶಿಬಿರದಲ್ಲಿ ಕಾಣಿಸಿಕೊಂಡರು.

ಇನ್ನು, ಮುಖ್ಯ ಕೋಚ್ ಗೌತಮ್ ಗಂಭೀರ್, ಸಹಾಯಕ ಕೋಚ್ ಅಭಿಷೇಕ್ ನಾಯರ್ ಕೂಡಾ ಮೊದಲ ಬಾರಿ ತವರಿನಲ್ಲಿ ಭಾರತದ ಕೋಚ್ ಆಗಿ ಕಾರ್ಯನಿರ್ವಹಿಸಲಿದ್ದಾರೆ. ಇತ್ತೀಚೆಗೆ ಅವರು ಶ್ರೀಲಂಕಾ ಪ್ರವಾಸಕ್ಕೂ ಮುನ್ನ ತಂಡಕ್ಕೆ ಕೋಚ್ ಆಗಿ ನೇಮಕಗೊಂಡಿದ್ದರು.
 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಸೈಲೆಂಟ್ ಆದ ಸೌತ್ ಆಫ್ರಿಕಾ , 74 ರನ್‌ಗೆ ಆಲೌಟ್ ಮಾಡಿ 101 ರನ್ ಗೆಲುವು ದಾಖಲಿಸಿದ ಭಾರತ
100 ಸಿಕ್ಸರ್ ದಾಖಲೆ ಬರೆದ ಹಾರ್ದಿಕ್ ಪಾಂಡ್ಯ, ಸೌತ್ ಆಫ್ರಿಕಾಗೆ 176 ರನ್ ಟಾರ್ಗೆಟ್