IPL 2022: ರಾಜಸ್ಥಾನ ರಾಯಲ್ಸ್ ಎದುರು ಗೆದ್ದ ಬೆನ್ನಲ್ಲೇ ಮಹತ್ವದ ಹೇಳಿಕೆ ನೀಡಿದ ರೋಹಿತ್ ಶರ್ಮಾ..!

By Naveen KodaseFirst Published May 1, 2022, 4:49 PM IST
Highlights

* ಪ್ರಸಕ್ತ ಆವೃತ್ತಿಯ ಐಪಿಎಲ್‌ನಲ್ಲಿ ಮೊದಲ ಗೆಲುವು ದಾಖಲಿಸಿದ ಮುಂಬೈ ಇಂಡಿಯನ್ಸ್

* ರಾಜಸ್ಥಾನ ರಾಯಲ್ಸ್‌ ಎದುರು ಗೆದ್ದು ಬೀಗಿದ ರೋಹಿತ್ ಶರ್ಮಾ ಪಡೆ

* ಗೆಲುವಿನ ಬೆನ್ನಲ್ಲೇ ಅಚ್ಚರಿಯ ಹೇಳಿಕೆ ನೀಡಿದ ಮುಂಬೈ ನಾಯಕ ರೋಹಿತ್ ಶರ್ಮಾ

ಮುಂಬೈ(ಮೇ.01): 15ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ (Indian Premier League) ಟೂರ್ನಿಯಲ್ಲಿ ರೋಹಿತ್ ಶರ್ಮಾ (Rohit Sharma) ನೇತೃತ್ವದ ಮುಂಬೈ ಇಂಡಿಯನ್ಸ್ (Mumbai Indians) ತಂಡವು ಕೊನೆಗೂ ಗೆಲುವು ದಾಖಲಿಸುವಲ್ಲಿ ಯಶಸ್ವಿಯಾಗಿದೆ. ರೋಹಿತ್ ಶರ್ಮಾ 35ನೇ ಹುಟ್ಟುಹಬ್ಬಕ್ಕೆ ಮುಂಬೈ ಇಂಡಿಯನ್ಸ್‌ ತಂಡವು ಗೆಲುವಿನ ಉಡುಗೊರೆ ನೀಡುವಲ್ಲಿ ಯಶಸ್ವಿಯಾಗಿದೆ. ಪ್ರಸಕ್ತ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ ಸತತ 8 ಪಂದ್ಯಗಳನ್ನು ಸೋತು ಕಂಗಾಲಾಗಿದ್ದ 5 ಬಾರಿಯ ಚಾಂಪಿಯನ್ ಮುಂಬೈ ಇಂಡಿಯನ್ಸ್ ತಂಡವು ಕೊನೆಗೂ ಗೆಲುವಿನ ಹಳಿಗೆ ಮರಳುವಲ್ಲಿ ಯಶಸ್ವಿಯಾಗಿದೆ.

ಶನಿವಾರ ರಾತ್ರಿ ನಡೆದ ಪಂದ್ಯದಲ್ಲಿ ಬಲಿಷ್ಠ ರಾಜಸ್ಥಾನ ರಾಯಲ್ಸ್ (Rajasthan Royals) ತಂಡದ ಎದುರು ಮುಂಬೈ ಇಂಡಿಯನ್ಸ್‌ ತಂಡವು 5 ವಿಕೆಟ್‌ಗಳ ರೋಚಕ ಜಯ ಸಾಧಿಸುವ ಮೂಲಕ ಟೂರ್ನಿಯಲ್ಲಿ ಗೆಲುವಿನ ಖಾತೆ ತೆರೆದಿದೆ. ಪಂದ್ಯ ಮುಕ್ತಾಯದ ಬಳಿಕ ಮಾತನಾಡಿದ ಮುಂಬೈ ಇಂಡಿಯನ್ಸ್ ತಂಡದ ನಾಯಕ ರೋಹಿತ್ ಶರ್ಮಾ, ನಾವು ಇದೇ ರೀತಿ ಆಡುವುದು. ಇಂದು ನಮ್ಮ ತಂಡದ ಬೌಲಿಂಗ್ ಸಾಮರ್ಥ್ಯ ಅನಾವರಣವಾಗಿದೆ. ನಮ್ಮ ಬೌಲರ್‌ಗಳು ಎದುರಾಳಿ ಬ್ಯಾಟರ್‌ಗಳ ಮೇಲೆ ಒತ್ತಡವನ್ನು ಹೇರುತ್ತಲೇ ಬಂದರು. ನೀವು ನಿರಂತರವಾಗಿ ವಿಕೆಟ್ ಕಬಳಿಸುತ್ತಾ ಹೋದರೆ, ಎದುರಾಳಿ ತಂಡದ ಒತ್ತಡ ಹೆಚ್ಚಾಗುತ್ತಾ ಹೋಗುತ್ತೆ. ನಾವದನ್ನು ಇಂದು ಅಚ್ಚುಕಟ್ಟಾಗಿ ನಿಭಾಯಿಸಿದೆವು ಎಂದು ಹಿಟ್‌ ಮ್ಯಾನ್ ತಮ್ಮ ತಂಡದ ಬೌಲಿಂಗ್ ಪ್ರದರ್ಶನವನ್ನು ಗುಣಗಾನ ಮಾಡಿದ್ದಾರೆ.

Latest Videos

ಕೆಲ ಬೌಲರ್‌ಗಳನ್ನು ಹೊರತುಪಡಿಸಿ ಇದೇ ತಂಡವೇ ಆರಂಭಿಕ ಕೆಲ ಪಂದ್ಯಗಳಲ್ಲಿ ಕಣಕ್ಕಿಳಿದಿತ್ತು. ಕೆಲವೊಮ್ಮೆ ಕಾಂಬಿನೇಷನ್ ಸರಿಹೊಂದದಿದ್ದಾಗ, ತಂಡದಲ್ಲಿ ಬದಲಾವಣೆ ಮಾಡಬೇಕಾಗುತ್ತದೆ. ನವಿ ಮುಂಬೈನಲ್ಲಿರುವ ಪಿಚ್‌ ಕೊಂಚ ವಿಭಿನ್ನವಾಗಿದೆ.ಉಳಿದ ಪಿಚ್‌ಗಳು ಪ್ಲಾಟ್ ಆಗಿವೆ. ನಾವು ಒಳ್ಳೆಯ ಸಂಯೋಜನೆಯೊಂದಿಗೆ ಕಣಕ್ಕಿಳಿಯಲು ಕಳೆದ ಎಂಟು ಪಂದ್ಯಗಳಲ್ಲೂ ಪ್ರಯತ್ನಿಸಿದೆವು, ಆದರೆ ಕಳೆದೆಂಟು ಪಂದ್ಯಗಳಲ್ಲಿ ನಮಗೆ ನಿರೀಕ್ಷಿತ ಯಶಸ್ಸು ದಕ್ಕಿರಲಿಲ್ಲ ಎಂದು ಮುಂಬೈ ಇಂಡಿಯನ್ಸ್ ನಾಯಕ ರೋಹಿತ್ ಶರ್ಮಾ ಹೇಳಿದ್ದಾರೆ.

ಈ ಸಂದರ್ಭದಲ್ಲಿ ಒಂದು ಮಾತನಂತೂ ನಾನು ಹೇಳಲು ಬಯಸುತ್ತೇನೆ, ನಾವು ಎದುರಾಳಿಗಳ ನಡುವಿನ ಸೆಣಸಾಟದಲ್ಲಿ ಸಮೀಪ ಬಂದು ಸೋತಿದ್ದೇವೆ. ಕ್ಲೋಸ್‌ ಪಂದ್ಯಗಳನ್ನು ಗೆದ್ದಿದ್ದರೆ, ಈಗ ಪರಿಸ್ಥಿತಿ ಬೇರೆಯದ್ದೇ ಆಗಿರುತ್ತಿತ್ತು ಎಂದು ರೋಹಿತ್ ಶರ್ಮಾ ಹೇಳಿದ್ದಾರೆ.

IPL 2022: ಗುಜರಾತ್ ಟೈಟಾನ್ಸ್ ಯಶಸ್ಸಿನ ಸೀಕ್ರೇಟ್ ಬಿಚ್ಚಿಟ್ಟ ನಾಯಕ ಹಾರ್ದಿಕ್ ಪಾಂಡ್ಯ..!

ಮುಂಬೈ ಇಂಡಿಯನ್ಸ್‌ ಹಾಗೂ ರಾಜಸ್ಥಾನ ರಾಯಲ್ಸ್‌ ತಂಡಗಳ ನಡುವಿನ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ರಾಜಸ್ಥಾನ ರಾಯಲ್ಸ್‌ ತಂಡವು ಜೋಸ್ ಬಟ್ಲರ್(67) ಬಾರಿಸಿದ ಸಮಯೋಚಿತ ಅರ್ಧಶತಕದ ನೆರವಿನಿಂದ ನಿಗದಿತ 20 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ 158 ರನ್‌ ಕಲೆಹಾಕಿತ್ತು. ಇನ್ನು ಈ ಗುರಿ ಬೆನ್ನತ್ತಿದ ಮುಂಬೈ ಇಂಡಿಯನ್ಸ್‌ ತಂಡವು ಆರಂಭದಲ್ಲೇ ರೋಹಿತ್ ಶರ್ಮಾ ವಿಕೆಟ್ ಕಳೆದುಕೊಂಡಿತಾದರೂ, ಸೂರ್ಯಕುಮಾರ್ ಯಾದವ್(51) ಬಾರಿಸಿದ ಆಕರ್ಷಕ ಅರ್ಧಶತಕ, ತಿಲಕ್ ವರ್ಮಾ, ಟಿಮ್ ಡೇವಿಡ್ ಸ್ಪೋಟಕ ಬ್ಯಾಟಿಂಗ್ ನೆರವಿನಿಂದ ಇನ್ನೂ 4 ಎಸೆತಗಳು ಬಾಕಿ ಇರುವಂತೆ ಮುಂಬೈ ಇಂಡಿಯನ್ಸ್‌ ಗೆಲುವಿನ ನಗೆ ಬೀರಿತು. 

click me!