ಬಾಕ್ಸಿಂಗ್ ಡೇ ಟೆಸ್ಟ್ ಸೋಲಿನ ಬೆನ್ನಲ್ಲೇ ಮಹತ್ವದ ಅಪ್‌ಡೇಟ್ ಕೊಟ್ಟ ರೋಹಿತ್ ಶರ್ಮಾ! ಟೀಂ ಇಂಡಿಯಾ ಪ್ಲಾನ್ ಏನು?

Published : Dec 30, 2024, 03:18 PM ISTUpdated : Dec 30, 2024, 03:30 PM IST
ಬಾಕ್ಸಿಂಗ್ ಡೇ ಟೆಸ್ಟ್ ಸೋಲಿನ ಬೆನ್ನಲ್ಲೇ ಮಹತ್ವದ ಅಪ್‌ಡೇಟ್ ಕೊಟ್ಟ ರೋಹಿತ್ ಶರ್ಮಾ! ಟೀಂ ಇಂಡಿಯಾ ಪ್ಲಾನ್ ಏನು?

ಸಾರಾಂಶ

ಆಸ್ಟ್ರೇಲಿಯಾ ವಿರುದ್ಧದ ನಾಲ್ಕನೇ ಟೆಸ್ಟ್‌ನಲ್ಲಿ 184 ರನ್‌ಗಳಿಂದ ಸೋತ ಭಾರತ, ಬಾರ್ಡರ್-ಗವಾಸ್ಕರ್ ಸರಣಿಯಲ್ಲಿ ೨-೧ರ ಹಿನ್ನಡೆ ಅನುಭವಿಸಿದೆ. ಈ ಸೋಲು ಭಾರತದ WTC ಫೈನಲ್‌ ಪ್ರವೇಶದ ಮೇಲೆ ಪರಿಣಾಮ ಬೀರಿದೆ. ನಾಯಕ ರೋಹಿತ್ ಶರ್ಮಾ ನಿರಾಸೆ ವ್ಯಕ್ತಪಡಿಸಿದರೂ, ಮುಂದಿನ ಪಂದ್ಯದಲ್ಲಿ ಉತ್ತಮ ಪ್ರದರ್ಶನ ನೀಡುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಬುಮ್ರಾ ಅವರ ಪ್ರದರ್ಶನವನ್ನು ಶ್ಲಾಘಿಸಿದ್ದಾರೆ.

ಮೆಲ್ಬರ್ನ್‌: ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ಪ್ಯಾಟ್ ಕಮಿನ್ಸ್ ನೇತೃತ್ವದ ಆಸ್ಟ್ರೇಲಿಯಾ ತಂಡವು 184 ರನ್ ಅಂತರದ ಭರ್ಜರಿ ಗೆಲುವು ಸಾಧಿಸಿದೆ. ಈ ಗೆಲುವಿನೊಂದಿಗೆ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯಲ್ಲಿ ಆತಿಥೇಯ ಆಸ್ಟ್ರೇಲಿಯಾ ತಂಡವು 2-1ರ ಮುನ್ನಡೆ ಸಾಧಿಸಿದೆ. ಇನ್ನು ಈ ಸೋಲಿನೊಂದಿಗೆ ರೋಹಿತ್ ಶರ್ಮಾ ನೇತೃತ್ವದ ಟೀಂ ಇಂಡಿಯಾದ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಕನಸಿಗೆ ಬಲವಾದ ಪೆಟ್ಟು ಬಿದ್ದಿದೆ. ಈ ಸೋಲಿನ ಬೆನ್ನಲ್ಲೇ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಮಹತ್ವದ ಅಪ್‌ಡೇಟ್ ನೀಡಿದ್ದಾರೆ.

ಬಾಕ್ಸಿಂಗ್ ಡೇ ಟೆಸ್ಟ್ ಸೋಲಿನ ಬೆನ್ನಲ್ಲೇ ರೋಹಿತ್ ಶರ್ಮಾ ಹೇಳಿದ್ದೇನು?:

ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ನಾಲ್ಕನೇ ಟೆಸ್ಟ್ ಪಂದ್ಯ ಸೋಲಿನ ಬಳಿಕ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಮನಬಿಚ್ಚಿ ಮಾತನಾಡಿದ್ದಾರೆ. 'ನಾನೀಗ ಎಲ್ಲಿದ್ದೆನೋ ಈಗಲೂ ಅಲ್ಲಿಯೇ ಇದ್ದೇನೆ. ಓರ್ವ ನಾಯಕನಾಗಿ ಹಾಗೂ ಆಟಗಾರನಾಗಿ ಈ ಬಾರಿ ನಾವು ಅಂದುಕೊಂಡಿದ್ದನ್ನು ಸಾಧಿಸಲು ಸಾಧ್ಯವಾಗಲಿಲ್ಲ. ಈ ಬಗ್ಗೆ ನಮಗೆ ನಿರಾಸೆಯಿದೆ. ಇದು ನಮ್ಮ ಮನಸ್ಥಿತಿಯ ಮೇಲೂ ಪರಿಣಾಮ ಬೀರುತ್ತದೆ. ಆದರೆ ಮುಂದಿನ ಪಂದ್ಯದಲ್ಲಿ ಒಂದು ತಂಡವಾಗಿ ಮುನ್ನಡೆಯಲು ಎದುರು ನೋಡುತ್ತಿದ್ದೇವೆ ಎಂದು ರೋಹಿತ್ ಶರ್ಮಾ ಹೇಳಿದ್ದಾರೆ.

ಬಾಕ್ಸಿಂಗ್ ಡೇ ಟೆಸ್ಟ್ ಸೋಲುತ್ತಿದ್ದಂತೆಯೇ ತಲೆಕೆಳಗಾದ WTC ಫೈನಲ್‌ ಲೆಕ್ಕಾಚಾರ! ಟೀಂ ಇಂಡಿಯಾಗಿದೆ ಲಾಸ್ಟ್ ಛಾನ್ಸ್?

ಸಿಡ್ನಿಯಲ್ಲಿ ಒಂದು ತಂಡವಾಗಿ ನಾವು ಏನು ಮಾಡಲು ಕ್ಷಮತೆಯಿದೆಯೋ ಅದನ್ನು ಮಾಡಲು ನಾವು ಎದುರು ನೋಡುತ್ತಿದ್ದೇವೆ. ನಾವು ಸಿಡ್ನಿ ಟೆಸ್ಟ್‌ ಪಂದ್ಯದಲ್ಲಿ ಉತ್ತಮವಾಗಿ ಅಡಲು ಪ್ರಯತ್ನ ಪಡುತ್ತೇವೆ ಎಂದು ಹಿಟ್‌ಮ್ಯಾನ್ ಖ್ಯಾತಿಯ ರೋಹಿತ್ ಶರ್ಮಾ ಹೇಳಿದ್ದಾರೆ.

ಬಾಕ್ಸಿಂಗ್ ಡೇ ಟೆಸ್ಟ್‌ನಲ್ಲಿ ಮುಗ್ಗರಿಸಿದ ಟೀಂ ಇಂಡಿಯಾ; ಕಾಂಗರೂ ಪಡೆಗೆ ಸರಣಿಯಲ್ಲಿ ಮುನ್ನಡೆ!

ಬುಮ್ರಾಗೆ ಸಿಗಲಿಲ್ಲ ಒಳ್ಳೆಯ ಸಾಥ್: 

ಟೀಂ ಇಂಡಿಯಾ ಪರ ಮಾರಕ ವೇಗಿ ಜಸ್ಪ್ರೀತ್ ಬುಮ್ರಾ ಮೆಲ್ಬರ್ನ್ ಟೆಸ್ಟ್‌ನ ಎರಡನೇ ಇನ್ನಿಂಗ್ಸ್‌ನಲ್ಲಿ 5 ವಿಕೆಟ್ ಕಬಳಿಸಿ ಮಿಂಚಿದರಾದರೂ ಮತ್ತೊಂದು ತುದಿಯಲ್ಲಿ ಸೂಕ್ತ ಸಾಥ್ ಸಿಗಲಿಲ್ಲ. ಈ ಬಗ್ಗೆ ಮಾತನಾಡಿರುವ ನಾಯಕ ರೋಹಿತ್ ಶರ್ಮಾ, 'ಬುಮ್ರಾ ಅವರೊಬ್ಬ ಅದ್ಭುತ ಆಟಗಾರ. ನಾವು ಅವರನ್ನು ಸಾಕಷ್ಟು ವರ್ಷಗಳಿಂದ ನೋಡುತ್ತಾ ಬಂದಿದ್ದೇವೆ. ಅವರು ನಮ್ಮ ತಂಡಕ್ಕೆ ಸಾಕಷ್ಟು ಕೊಡುಗೆ ನೀಡುತ್ತಾ ಬಂದಿದ್ದಾರೆ. ಅವರು ನಮ್ಮ ತಂಡದ ಪರ ಹಾಗೂ ದೇಶದ ಪರ ಇನ್ನಷ್ಟು ವರ್ಷ ಆಡಲಿದ್ದಾರೆ' ಎಂದು ರೋಹಿತ್ ಶರ್ಮಾ ಹೇಳಿದ್ದಾರೆ.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಜೈಸ್ವಾಲ್‌ ಸಖತ್‌ ಸೆಂಚುರಿ, ಟೆಸ್ಟ್‌ ಸರಣಿ ಸೋಲಿಗೆ ಏಕದಿನದಲ್ಲಿ ಸೇಡು ತೀರಿಸಿಕೊಂಡ ಭಾರತ!
ಫೋಟೋ ಹಂಚಿಕೊಂಡು 'ಡಾರ್ಲಿಂಗ್‌..' ಎಂದು ಬರೆದ ಸಾರಾ ತೆಂಡುಲ್ಕರ್‌