
ಲಾರ್ಡ್ಸ್: Rohit Sharma 34th ODI Century ಕ್ರಿಕೆಟ್ ಕಾಶಿ ಲಾರ್ಡ್ಸ್ ಮೈದಾನದಲ್ಲಿ ಹಿಟ್‌ಮ್ಯಾನ್ ಖ್ಯಾತಿಯ ರೋಹಿತ್ ಶರ್ಮಾ ಆಕರ್ಷಕ ಶತಕ ಸಿಡಿಸುವ ಮೂಲಕ ಟೀಕಾಕಾರರ ಬಾಯಿ ಮುಚ್ಚಿಸಿದ್ದಾರೆ. ರೋಹಿತ್ ಶರ್ಮಾಗೆ ವಯಸ್ಸಾಯ್ತು, ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಗುಡ್ ಬೈ ಹೇಳಿ ಯುವಕರಿಗೆ ಅವಕಾಶ ನೀಡಬೇಕು ಎಂದು ವ್ಯಂಗ್ಯವಾಡುವವರಿಗೆ ರೋಹಿತ್ ತಮ್ಮ ಬ್ಯಾಟ್ ಮೂಲಕವೇ ಉತ್ತರ ನೀಡುವಲ್ಲಿ ಯಶಸ್ವಿಯಾಗಿದ್ದಾರೆ. ಇದಷ್ಟೇ ಅಲ್ಲದೇ ಲಾರ್ಡ್ಸ್ ಮೈದಾನದಲ್ಲಿ ಏಕದಿನ ಕ್ರಿಕೆಟ್‌ನಲ್ಲಿ ಶತಕ ಸಿಡಿಸಿದ ಮೊದಲ ಭಾರತೀಯ ಬ್ಯಾಟರ್ ಎನ್ನುವ ಹಿರಿಮೆಗೆ ರೋಹಿತ್ ಶರ್ಮಾ ಪಾತ್ರರಾಗಿದ್ದಾರೆ.
ಇಂಗ್ಲೆಂಡ್ ಎದುರಿನ ಮೊದಲೆರಡು ಪಂದ್ಯಗಳಲ್ಲಿ ದೊಡ್ಡ ಇನ್ನಿಂಗ್ಸ್ ಕಟ್ಟಲು ವಿಫಲವಾಗಿದ್ದ ರೋಹಿತ್ ಶರ್ಮಾ, ನಿರ್ಣಾಯಕ ಏಕದಿನ ಪಂದ್ಯದಲ್ಲಿ ಸಮಯೋಚಿತ ಶತಕ ಸಿಡಿಸುವ ಮೂಲಕ ತನ್ನ ಸಾಮರ್ಥ್ಯವನ್ನು ಮತ್ತೊಮ್ಮೆ ಅನಾವರಣ ಮಾಡಿದ್ದರು. 84 ಎಸೆತಗಳನ್ನು ಎದುರಿಸಿದ ರೋಹಿತ್ ಶರ್ಮಾ, ಆದಿಲ್ ರಶೀದ್ ಬೌಲಿಂಗ್‌ನಲ್ಲಿ ಆಕರ್ಷಕ ಬೌಂಡರಿ ಬಾರಿಸುವ ಮೂಲಕ ವೃತ್ತಿಜೀವನದ 34ನೇ ಏಕದಿನ ಶತಕ ಸಿಡಿಸಿ ಸಂಭ್ರಮಿಸಿದರು.
ಇನ್ನು ರೋಹಿತ್ ಶರ್ಮಾ ಶತಕ ಸಿಡಿಸುತ್ತಿದ್ದಂತೆಯೇ ಲಾರ್ಡ್ಸ್ ಬಾಲ್ಕನಿಯಿಂದ ಪಂದ್ಯವನ್ನು ವೀಕ್ಷಿಸುತ್ತಿದ್ದ ಹೆಡ್ ಕೋಚ್ ಗೌತಮ್ ಗಂಭೀರ್ ಎದ್ದು ನಿಂತು ಚಪ್ಪಾಳೆ ತಟ್ಟುವ ಮೂಲಕ ಹಿಟ್‌ಮ್ಯಾನ್ ಆಟವನ್ನು ಸಂಭ್ರಮಿಸಿದರು. ರೋಹಿತ್ ಶರ್ಮಾ ಹಾಗೂ ಗೌತಮ್ ಗಂಭೀರ್ ನಡುವಿನ ಸಂಬಂಧ ಹದಗೆಟ್ಟಿದೆ. ರೋಹಿತ್ ನಿವೃತ್ತಿ ಪಡೆಯಲು ಗಂಭೀರ್ ಒತ್ತಡ ಹೇರುತ್ತಿದ್ದಾರೆ ಎನ್ನುವ ಗಾಳಿ ಸುದ್ದಿಗೆ ಇದೀಗ ತೆರೆ ಬಿದ್ದಿದೆ.
A statement 1️⃣0️⃣0️⃣ from the HITMAN! 😍
Rohit Sharma brings up a sensational century and becomes the first Indian to score an ODI hundred at Lord's! 🇮🇳#ENGvIND 3rd ODI 👉 Streaming LIVE on JioHotstar! pic.twitter.com/sFnq0hRAHq— Star Sports (@StarSportsIndia) July 19, 2026
2027ರ ಏಕದಿನ ವಿಶ್ವಕಪ್ ಮೇಲೆ ಕಣ್ಣಿಟ್ಟಿರುವ ರೋಹಿತ್ ಶರ್ಮಾ ಅವರಿಗೆ ಲಾರ್ಡ್ಸ್ ಪಂದ್ಯವೇ ಕೊನೆಯ ಅಂತಾರಾಷ್ಟ್ರೀಯ ಪಂದ್ಯವಾಗಲಿದೆ ಎನ್ನುವಂತಹ ಚರ್ಚೆ ಸೋಷಿಯಲ್ ಮೀಡಿಯಾದಲ್ಲಿ ಜೋರಾಗಿತ್ತು. ಆದರೆ ಇದೀಗ ಲಾರ್ಡ್ಸ್ ಮೈದಾನದಲ್ಲೇ ಶತಕ ಸಿಡಿಸುವ ಮೂಲಕ ರೋಹಿತ್ ಶರ್ಮಾ ಎಲ್ಲಾ ಗಾಸಿಪ್‌ಗೆ ಬ್ರೇಕ್ ಹಾಕುವ ಕೆಲಸ ಮಾಡಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.