
ಅಹಮ್ಮದಾಬಾದ್(ನ.19) ಐಸಿಸಿ ವಿಶ್ವಕಪ ಟೂರ್ನಿಯಲ್ಲಿ ಅದ್ವಿತೀಯ ಪ್ರದರ್ಶನ ನೀಡಿದ್ದ ಭಾರತ, ಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಮುಗ್ಗರಿಸಿ ಟ್ರೋಫಿ ಕೈಚೆಲ್ಲಿದೆ. ಫೈನಲ್ ಪಂದ್ಯದಲ್ಲಿ ನಿರೀಕ್ಷಿತ ಪ್ರದರ್ಶನ ನೀಡಲು ಭಾರತ ವಿಫಲವಾಗಿತ್ತು. ಇಡೀ ಟೂರ್ನಿಯಲ್ಲಿ ಚಾಂಪಿಯನ್ ಆಟವಾಡಿದ್ದ ಭಾರತ ಫೈನಲ್ ಪಂದ್ಯದಲ್ಲಿ ಸೋಲಿನ ಶಾಕ್ ಟೀಂ ಇಂಡಿಯಾ ಕ್ರಿಕೆಟಿಗರ ದುಃಖದ ಕಟ್ಟೆ ಒಡೆಯುವಂತೆ ಮಾಡಿದೆ. ನಾಯಕ ರೋಹಿತ್ ಶರ್ಮಾ ಕಣ್ಮೀರು ಹಾಕಿದ್ದಾರೆ. ಇತ್ತ ಮೊಹಮ್ಮದ್ ಸಿರಾಜ್, ಕೆಎಲ್ ರಾಹುಲ್ ಸೇರಿದಂತೆ ಕ್ರಿಕೆಟಿಗರು ನೋವು ತಡೆದುಕೊಳ್ಳಲು ಸಾಧ್ಯವಾಗದೆ ಅತ್ತಿದ್ದಾರೆ. ಉಳಿದ ಕೆಲ ಕ್ರಿಕೆಟಿಗರು ಕ್ಯಾಮೆರಾ ಮುಂದೆ ಗಟ್ಟಿಯಾಗಿ ನಿಂತರೂ ಒಳಗಿನಿಂದ ಅಳುತ್ತಲೇ ಇದ್ದಾರೆ. ಈ ದೃಶ್ಯಗಳನ್ನು ನೋಡಿದ ಅಭಿಮಾನಿಗಳ ಕಣ್ಣಾಲಿ ತುಂಬಿ ಬಂದಿದೆ.
ಆಸ್ಟ್ರೇಲಿಯಾ ಗೆಲುವಿನ ದಡ ಸೇರುತ್ತಿದ್ದಂತೆ ಟೀಂ ಇಂಡಿಯಾ ಕ್ರಿಕೆಟಿಗರು ಕಣ್ಣುಗಳು ತುಂಬಿದೆ. ಕಣ್ಣೀರು ಜಿನುಗಿದೆ. ರೋಹಿತ್ ಶರ್ಮಾ ಕ್ಯಾಮೆರಾದಿಂದ ದೂರ ಸರಿಯಲು ಯತ್ನಿಸಿದ್ದಾರೆ. ಅಳುತ್ತಲೇ ಪೆವಿಲಿಯನ್ ಸೇರಿಕೊಂಡಿದ್ದಾರೆ. ಮೊಹಮ್ಮದ್ ಸಿರಾಜ್ ಪಿಚ್‌ಲ್ಲೇ ಕಣ್ಣೀರಿಟ್ಟಿದ್ದಾರೆ. ವೇಗಿ ಜಸ್ಪ್ರೀತ್ ಬುಮ್ರಾ ಸಂತೈಸಿದರೂ ನೋವು ತಡೆದುಕೊಳ್ಳಲು ಸಾಧ್ಯವಾಗಿಲ್ಲ.
ಇಂದು, ಎಂದೆಂದು ನಿಮ್ಮ ಜೊತೆ ನಾವಿದ್ದೇವೆ; ಟೀಂ ಇಂಡಿಯಾ ಧೈರ್ಯ ತುಂಬಿದ ಪ್ರಧಾನಿ ಮೋದಿ!
ಇತ್ತ ಕೆಎಲ್ ರಾಹುಲ್ ಮೈದಾನಕ್ಕೆ ಮುಖ ಮುತ್ತಿ ನೋವನ್ನು ನಿಯಂತ್ರಿಸಿದ್ದಾರೆ. ಇನ್ನು ವಿರಾಟ್ ಕೊಹ್ಲಿ ಕ್ಯಾಮೆರಾ ಮುಂದೆ ಕಣ್ಣೀರು ತಡೆದುಕೊಂಡರು ಮುಖದಲ್ಲಿನ ನೋವು ಎಲ್ಲವನ್ನೂ ಹೇಳುತ್ತಿತ್ತು. ಟೀಂ ಇಂಡಿಯಾದ ಪ್ರತಿಯೊಬ್ಬರು ಸೋಲಿನ ನೋವಿನಲ್ಲಿ ಮುಳುಗಿದ್ದಾರೆ. ಈ ದೃಶ್ಯಗಳು ಅಭಿಮಾನಿಗಳ ಕಣ್ಣಲ್ಲಿ ನೀರು ತರಿಸಿದೆ.
ಹಲವು ಅಭಿಮಾನಿಗಳು ಬಿಕ್ಕಿ ಬಿಕ್ಕಿ ಅತ್ತಿದ್ದಾರೆ. ಸೋಲು ಗೆಲುವು ಕ್ರೀಡೆಯಲ್ಲಿ ಸಾಮಾನ್ಯ. ಆದರೂ ಚಾಂಪಿಯನ್ ಆಟ ಪ್ರದರ್ಶಿಸಿದ ಭಾರತ ಟ್ರೋಫಿ ಗೆಲ್ಲಲಿಲ್ಲ ಅನ್ನೋ ಕೊರಗು ಕಾಡುತ್ತಿದೆ. ಮುಂದಿನ ಸರಣಿಯಲ್ಲಿ ಟ್ರೋಫಿ ಗೆಲ್ಲುವಂತಾಗಲಿ ಎಂದು ಅಭಿಮಾನಿಗಳು ಹಾರೈಸಿದ್ದಾರೆ. ಭಾರತದ ದಿಟ್ಟ ಹೋರಾಟವನ್ನೂ ಅಭಿಮಾನಿಗಳು ಪ್ರಶಂಸಿಸಿದ್ದಾರೆ. ಟೀಂ ಇಂಡಿಯಾದ ಸೋಲಿನ ನೋವಿನಲ್ಲಿ ನಾವು ಭಾಗಿಗಳು ಎಂದು ಅಭಿಮಾನಿಗಳು ಪ್ರತಿಕ್ರಿಯಿಸಿದ್ದಾರೆ.
ತಿಣುಕಾಡಿ ಫೈನಲ್ ಪ್ರವೇಶಿಸಿ ಚಾಂಪಿಯನ್ ಆದ ಆಸ್ಟ್ರೇಲಿಯಾ, ಭಾರತಕ್ಕೆ 2003ರಂತೆ 23ರಲ್ಲೂ ಸೋಲು!
ಫೈನಲ್ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಭಾರತ 240 ರನ್ ಸಿಡಿಸಿ ಆಲೌಟ್ ಆಗಿತ್ತು. ಭಾರತದ ಪರ ನಾಯಕ ರೋಹಿತ್ ಶರ್ಮಾ 47, ವಿರಾಟ್ ಕೊಹ್ಲಿ 54 ಹಾಗೂ ಕೆಎಲ್ ರಾಹುಲ್ 66 ರನ್ ಸಿಡಿಸಿದ್ದರು. ಸುಲಭ ಗುರಿ ಚೇಸ್ ಮಾಡಿದ ಆಸ್ಟ್ರೇಲಿಯಾ 43 ಓವರ್‌ಗಳಲ್ಲಿ 4 ವಿಕೆಟ್ ಕಳೆದುಕೊಂಡು ಗೆಲುವು ದಾಖಲಿಸಿತು. ಟ್ರಾವಿಸ್ ಹೆಡ್ 137 ರನ್ ಸಿಡಿಸಿ ಆಸ್ಟ್ರೇಲಿಯಾಗೆ ಗೆಲುವು ತಂದುಕೊಟ್ಟರು. ಆಸ್ಟ್ರೇಲಿಯಾ 6ನೇ ಬಾರಿ ವಿಶ್ವಕಪ್ ಟ್ರೋಫಿ ಗೆದ್ದುಕೊಂಡಿತು.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.