2025ರ ಐಪಿಎಲ್ ಟೂರ್ನಿಯಲ್ಲಿ ರೋಹಿತ್ ಶರ್ಮಾ ಹಾಗೂ ಸೂರ್ಯಕುಮಾರ್ ಯಾದವ್ ಮುಂಬೈ ಇಂಡಿಯನ್ಸ್ ತಂಡವನ್ನು ತೊರೆಯಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ
ಬೆಂಗಳೂರು: 2025ನೇ ಸಾಲಿನ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಗೂ ಮುನ್ನ ಹಲವು ಅಚ್ಚರಿಗಳಿಗೆ ಕ್ರಿಕೆಟ್ ಅಭಿಮಾನಿಗಳು ಸಾಕ್ಷಿಯಾಗುವ ಸಾಧ್ಯತೆಯಿದೆ. ಮುಂಬೈ ಇಂಡಿಯನ್ಸ್ ತಂಡದ ಬ್ಯಾಟಿಂಗ್ ಬೆನ್ನೆಲುಬು ಎನಿಸಿಕೊಂಡಿರುವ ಮಾಜಿ ನಾಯಕ ರೋಹಿತ್ ಶರ್ಮಾ ಹಾಗೂ ಸೂರ್ಯಕುಮಾರ್ ಯಾದವ್, ಮುಂಬರುವ ಐಪಿಎಲ್ ಟೂರ್ನಿಗೂ ಮುನ್ನ ಮುಂಬೈ ಇಂಡಿಯನ್ಸ್ ತಂಡವನ್ನು ತೊರೆಯುವ ಸಾಧ್ಯತೆಯಿದೆ ಎಂದು ವರದಿಯಾಗಿದೆ. ಮುಂಬರುವ ಮೆಗಾ ಹರಾಜಿನಲ್ಲಿ ಈ ಇಬ್ಬರು ಆಟಗಾರರನ್ನು ಸೆಳೆದುಕೊಳ್ಳಲು ಕೋಲ್ಕತಾ ನೈಟ್ ರೈಡರ್ಸ್ ಮಾಸ್ಟರ್ ಪ್ಲಾನ್ ರೂಪಿಸಿದೆ ಎಂದು ದೈನಿಕ್ ಜಾಗರಣ್ ವರದಿ ಮಾಡಿದೆ.
5 ಬಾರಿಯ ಚಾಂಪಿಯನ್ ಮುಂಬೈ ಇಂಡಿಯನ್ಸ್ ತಂಡದ ಪಾಲಿಗೆ ಕಳೆದ ಬಾರಿಯ ಐಪಿಎಲ್ ಟೂರ್ನಿ ಸಾಕಷ್ಟು ಸವಾಲಿನಿಂದ ಕೂಡಿತ್ತು. ತಮ್ಮ ತಂಡದ ಯಶಸ್ವಿ ನಾಯಕನಾಗಿದ್ದ ರೋಹಿತ್ ಶರ್ಮಾ ಅವರನ್ನು ನಾಯಕತ್ವದಿಂದ ಕೆಳಗಿಳಿಸಿ ಹಾರ್ದಿಕ್ ಪಾಂಡ್ಯಗೆ ನಾಯಕತ್ವ ಪಟ್ಟ ಕಟ್ಟಲಾಗಿತ್ತು. ಇದು ಮುಂಬೈ ಇಂಡಿಯನ್ಸ್ ಪಾಳಯದಲ್ಲಿ ಬಣ ರಾಜಕೀಯಕ್ಕೆ ಕಾರಣವಾಗಿತ್ತು. ಇದೀಗ ಕೆಲ ವರದಿಗಳ ಪ್ರಕಾರ ತಂಡದ ಪ್ರಮುಖ ಶಕ್ತಿ ಎನಿಸಿಕೊಂಡಿರುವ ರೋಹಿತ್ ಶರ್ಮಾ ಹಾಗೂ ಸೂರ್ಯಕುಮಾರ್ ಯಾದವ್ ಮುಂಬೈ ಇಂಡಿಯನ್ಸ್ ತಂಡವನ್ನು ತೊರೆಯಲಿದ್ದಾರೆ ಎನ್ನಲಾಗುತ್ತಿದೆ.
undefined
ಭಾರತದ ಮೇಲೆ ಕಿಡಿಕಾರುವ ಪಾಕ್ ಆಟಗಾರನ ಪ್ರೀತಿ ಬಲೆಗೆ ಬಿದ್ದ ನಮ್ಮ ದೇಶದ ಪ್ಲೈಟ್ ಇಂಜಿನಿಯರ್..!
ರೋಹಿತ್ ಶರ್ಮಾ ಅವರನ್ನು ನಾಯಕತ್ವದಿಂದ ಕೆಳಗಿಳಿಸಿ ಹಾರ್ದಿಕ್ ಪಾಂಡ್ಯಗೆ ನಾಯಕತ್ವ ಪಟ್ಟ ಕಟ್ಟಿದ ಬೆನ್ನಲ್ಲೇ ಮುಂಬೈ ಇಂಡಿಯನ್ಸ್ ಅಭಿಮಾನಿಗಳು ಹಾಗೂ ಕೆಲ ಆಟಗಾರರು ಫ್ರಾಂಚೈಸಿಯ ನಿರ್ಧಾರದ ಬಗ್ಗೆ ಅಸಮಾಧಾನ ಹೊರಹಾಕಿದ್ದರು ಎಂದು ವರದಿಯಾಗಿದೆ. ಕಳೆದ ಬಾರಿ ಮುಂಬೈ ಇಂಡಿಯನ್ಸ್ ಮಾಡಿದ ತಪ್ಪಿಗೆ ಈ ಬಾರಿಯೂ ಫ್ರಾಂಚೈಸಿ ಬೆಲೆ ತೆರುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ.
ಏಕಾಏಕಿ ರೋಹಿತ್ ಶರ್ಮಾ ಅವರನ್ನು ಕೆಳಗಿಳಿಸಿ ಪಾಂಡ್ಯಗೆ ನಾಯಕತ್ವ ಪಟ್ಟ ಕಟ್ಟಿದ್ದರಿಂದಲೇ ರೋಹಿತ್ ಶರ್ಮಾ ಹಾಗೂ ಸೂರ್ಯಕುಮಾರ್ ಯಾದವ್ ಮುಂಬೈ ಇಂಡಿಯನ್ಸ್ ತಂಡ ತೊರೆಯುವ ನಿರ್ಧಾರಕ್ಕೆ ಬಂದಿದ್ದಾರೆ ಎನ್ನಲಾಗುತ್ತಿದೆ. ಆದರೆ ಈ ಕುರಿತಂತೆ ಇದುವರೆಗೂ ಯಾವುದೇ ಅಧಿಕೃತ ಪ್ರಕಟಣೆ ಹೊರಬಿದ್ದಿಲ್ಲ.
KKR ಅಲ್ಲವೇ ಅಲ್ಲ, ಈ ಐಪಿಎಲ್ ತಂಡಕ್ಕೆ ರಾಹುಲ್ ದ್ರಾವಿಡ್ ಕೋಚ್; ಪ್ರಕಟಣೆಯೊಂದೇ ಬಾಕಿ..?
ಒಂದು ವೇಳೆ ರೋಹಿತ್ ಶರ್ಮಾ, ಮುಂಬೈ ಇಂಡಿಯನ್ಸ್ ತಂಡದಿಂದ ಹೊರಬಂದರೆ, 2025ರ ಐಪಿಎಲ್ ಟೂರ್ನಿಯಲ್ಲಿ ಹಿಟ್‌ಮ್ಯಾನ್ ಗುಜರಾತ್ ಟೈಟಾನ್ಸ್ ಇಲ್ಲವೇ ಡೆಲ್ಲಿ ಕ್ಯಾಪಿಟಲ್ಸ್ ತಂಡ ಕೂಡಿಕೊಳ್ಳಬಹುದು ಎನ್ನಲಾಗುತ್ತಿದೆ
ಇನ್ನೊಂದೆಡೆ ಲಖನೌ ಸೂಪರ್ ಜೈಂಟ್ಸ್ ತಂಡದ ನಾಯಕ ಕೆ ಎಲ್ ರಾಹುಲ್, ಮುಂಬರುವ ಐಪಿಎಲ್ ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಕೂಡಿಕೊಳ್ಳುವ ಸಾಧ್ಯತೆ ದಟ್ಟವಾಗಿದೆ ಎನ್ನಲಾಗುತ್ತಿದೆ. ಲಖನೌ ಮಾಲೀಕ ಸಂಜೀವ್ ಗೋಯೆಂಕಾ ಜತೆಗಿನ ಮುನಿಸಿನಿಂದಾಗಿ ರಾಹುಲ್ ಲಖನೌ ತಂಡ ತೊರೆಯಲಿದ್ದಾರೆ ಎನ್ನಲಾಗುತ್ತಿದೆ. ಕಳೆದ ಮೂರು ಸೀಸನ್‌ಗಳಲ್ಲಿ ಫಾಫ್ ಡು ಪ್ಲೆಸಿಸ್ ಆರ್‌ಸಿಬಿ ತಂಡದ ನಾಯಕರಾಗಿದ್ದರೂ ಕಪ್ ಗೆಲ್ಲಿಸಿಕೊಡಲು ಸಾಧ್ಯವಾಗಿರಲಿಲ್ಲ. ಹೀಗಾಗಿ ಕೆ ಎಲ್ ರಾಹುಲ್ ಅವರನ್ನು ಕರೆತಂದು ಕನ್ನಡಿಗನಿಗೆ ನಾಯಕ ಪಟ್ಟ ಕಟ್ಟಲು ಆರ್‌ಸಿಬಿ ಫ್ರಾಂಚೈಸಿ ತೀರ್ಮಾನಿಸಿದೆ ಎಂದು ವರದಿಯಾಗಿದೆ.