ವಿಶ್ವಕಪ್ ಸೋಲಿನ ಬೆನ್ನಲ್ಲೇ ಮತ್ತೊಂದು ಶಾಕ್, ಟಿ20 ಕ್ರಿಕೆಟ್‌ಗೆ ರೋಹಿತ್ ಶರ್ಮಾ ವಿದಾಯ ಸಾಧ್ಯತೆ!

Published : Nov 22, 2023, 08:09 PM IST
ವಿಶ್ವಕಪ್ ಸೋಲಿನ ಬೆನ್ನಲ್ಲೇ ಮತ್ತೊಂದು ಶಾಕ್, ಟಿ20 ಕ್ರಿಕೆಟ್‌ಗೆ ರೋಹಿತ್ ಶರ್ಮಾ ವಿದಾಯ ಸಾಧ್ಯತೆ!

ಸಾರಾಂಶ

ವಿಶ್ವಕಪ್ ಸೋಲಿನ ನೋವು ಇನ್ನು ಅರಗಿಸಿಕೊಳ್ಳಲು ಸಾಧ್ಯವಾಗಿಲ್ಲ. ಇದರ ಬೆನ್ನಲ್ಲೇ ರೋಹಿತ್ ಶರ್ಮಾ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ಗೆ ವಿದಾಯ ಮಾತುಗಳು ಕೇಳಬರುತ್ತಿದೆ. ಈ ಕುರಿತು ಈಗಾಲೇ ಬಿಸಿಸಿಐ ಜೊತೆ ಚರ್ಚಿಸಿರುವ ಮಾಹಿತಿಯೂ ಬಹಿರಂಗವಾಗಿದೆ.

ಮುಂಬೈ(ನ.22) ಐಸಿಸಿ ವಿಶ್ವಕಪ್ ಟೂರ್ನಿಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿ ಅಂತಿಮ ಹಂತದಲ್ಲಿ ಪ್ರಶಸ್ತಿ ಕೈಚೆಲ್ಲಿದ ಭಾರತ ತೀವ್ರ ನಿರಾಸೆ ಅನುಭವಿಸಿದೆ. ಈ ಸೋಲಿನ ನೋವು ಇನ್ನು ಮಾಸಿಲ್ಲ. ಇದೀಗ ಮತ್ತೊಂದು ಶಾಕಿಂಗ್ ಮಾಹಿತಿ ಬಹಿರಂಗವಾಗಿದೆ. ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ಗೆ ವಿದಾಯ ಹೇಳಲು ನಿರ್ಧರಿಸಿದ್ದಾರೆ ಅನ್ನೋ ಮಾತುಗಳು ಕೇಳಿಬರುತ್ತಿದೆ. ಏಕದಿನ ವಿಶ್ವಕಪ್ ಟೂರ್ನಿಗೂ ಮೊದಲು ಬಿಸಿಸಿಐ ಜೊತೆ ಕುರಿತು ರೋಹಿತ್ ಶರ್ಮಾ ಮಾತನಾಡಿದ್ದಾರೆ. ಸ್ವಯಂಪ್ರೇರಿತವಾಗಿ ರೋಹಿತ್ ಶರ್ಮಾ ಈ ನಿರ್ಧಾರವನ್ನು ಬಿಸಿಸಿಐ ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ಜೊತೆ ಚರ್ಚಿಸಿರುವುದಾಗಿ ಬಿಸಿಸಿಐ ಮೂಲಗಳು ಹೇಳಿವೆ.

ಟಿ20 ವಿಶ್ವಕಪ್ ಸೆಮಿಫೈನಲ್ ಪಂದ್ಯದಲ್ಲಿ ಭಾರತದ ಸೋಲಿನ ಬಳಿಕ ರೋಹಿತ್ ಶರ್ಮಾ ಈ ನಿರ್ಧಾರ ಮಾಡಿರುವುದಾಗಿ ಬಿಸಿಸಿಐ ಮೂಲಗಳು ಹೇಳುತ್ತಿವೆ. ನವೆಂಬರ್ 2022ರಿಂದ ರೋಹಿತ್ ಶರ್ಮಾ ಟೀಂ ಇಂಡಿಯಾ ಪರ ಟಿ20 ಪಂದ್ಯ ಆಡಿಲ್ಲ. ರೋಹಿತ್ ಶರ್ಮಾ ಬದಲು ಹಾರ್ದಿಕ್ ಪಾಂಡ್ಯ ಟಿ20 ಮಾದರಿಯಲ್ಲಿ ಟೀಂ ಇಂಡಿಯಾವನ್ನು ಮುನ್ನಡೆಸಿದ್ದಾರೆ.  ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಹೆಚ್ಚಿನ ಗಮನ ಕೇಂದ್ರೀಕರಿಸಲು ರೋಹಿತ್ ಶರ್ಮಾ ಟಿ20 ಕ್ರಿಕೆಟ್‌ನಿಂದ ದೂರ ಉಳಿದಿದ್ದರು.

ವಿಶ್ವಕಪ್ ಬೆನ್ನಲ್ಲೇ ಐಸಿಸಿ ರ‍್ಯಾಂಕಿಂಗ್‌ ಪ್ರಕಟ, ವಿರಾಟ್ ಕೊಹ್ಲಿಗೆ ಭಡ್ತಿ, ಮೊದಲ ಸ್ಥಾನದಲ್ಲಿ ಗಿಲ್!

ಏಕದಿನ ವಿಶ್ವಕಪ್ ಟೂರ್ನಿಗೂ ಮೊದಲು ಬಿಸಿಸಿಐ ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ಜೊತೆ ಈ ಕುರಿತು ಚರ್ಚೆ ನಡೆಸಿದ್ದಾರೆ. ಟೆಸ್ಟ್, ಏಕದಿನ ಜೊತೆಗೆ ಟಿ20 ಕ್ರಿಕೆಟ್ ಜವಾಬ್ದಾರಿಗಳು ಹೆಚ್ಚಾಗಿದೆ. ಇದರ ಜೊತೆಗೆ ಐಪಿಎಲ್ ಟೂರ್ನಿ. ಹೀಗಾಗಿ ಮುಂದಿನ ಕ್ರಿಕೆಟ್‌ ಕರಿಯರ್‌ನಲ್ಲಿ ಇಂಜುರಿಗಳಿಂದ ಮುಕ್ತವಾಗಲು ಹಾಗೂ ಟೆಸ್ಟ್ ಕ್ರಿಕೆಟ್ ಹಾಗೂ ಏಕದಿನದ ಮೇಲೆ ಹೆಚ್ಚಿನ ಗಮನಕೇಂದ್ರಿಕರಿಸಲು ಟಿ20 ಕ್ರಿಕೆಟ್‌ನಿಂದ ದೂರ ಉಳಿಯುವ ನಿರ್ಧಾರ ಚರ್ಚಿಸಿದ್ದಾರೆ ಎಂದು ಬಿಸಿಸಿಐ ಮೂಲಗಳು ಹೇಳುತ್ತಿದೆ.

ರೋಹಿತ್ ಶರ್ಮಾ 148 ಟಿ20 ಪಂದ್ಯದಿಂದ 3853 ರನ್ ಸಿಡಿಸಿದ್ದಾರೆ. 140ರ ಸ್ಟ್ರೈಕ್ ರೇಟ್‌ನಲ್ಲಿ ಬ್ಯಾಟಿಂಗ್ ಮಾಡಿರುವ ರೋಹಿತ್ ಶರ್ಮಾ 2 ಸೆಂಚುರಿ ದಾಖಲಿಸಿದ್ದಾರೆ. ರೋಹಿತ್ ಶರ್ಮಾ ತಮ್ಮ ಸ್ಫೋಟಕ ಬ್ಯಾಟಿಂಗ್‌ ಮೂಲಕ ಅಭಿಮಾನಿಗಳ ನೆಚ್ಚಿನ ಕ್ರಿಕೆಟಿಗನಾಗಿದ್ದಾರೆ.  ಇದೀಗ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ನಿಂದ ದೂರ ಸರಿಯುವ ಮಾತುಗಳು ರೋಹಿತ್ ಅಭಿಮಾನಿಗಳಿಗೆ ಆತಂಕ ತರಿಸಿದೆ.

ಭಾರತ-ಆಫ್ಘಾನಿಸ್ತಾನ ಟಿ20 ಸರಣಿ ವೇಳಾಪಟ್ಟಿ ಪ್ರಕಟ, ಅಂತಿಮ ಪಂದ್ಯಕ್ಕೆ ಬೆಂಗಳೂರು ಆತಿಥ್ಯ!
 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಮೆಹೆಂದಿಯಾಗಿತ್ತು, ಆದರೆ ಮದುವೆಯಾಗಲ್ಲ: ಕೊನೆಗೂ Palash Muchhal ಜೊತೆಗಿನ ಸಂಬಂಧಕ್ಕೆ ತೆರೆ ಎಳೆದ Smriti Mandhana
ಚಿನ್ನಸ್ವಾಮಿಗೆ ಅಂತಾರಾಷ್ಟ್ರೀಯ ಮತ್ತು IPL ಪಂದ್ಯಗಳು ವಾಪಸ್; ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ