200 ಟೆಸ್ಟ್ ಪಂದ್ಯಗಳನ್ನಾಡಿರುವ ಸಚಿನ್ ತೆಂಡುಲ್ಕರ್ 15, 921 ರನ್ ಬಾರಿಸಿದ್ದಾರೆ. ಇದರಲ್ಲಿ 51 ಶತಕಗಳು ಸೇರಿವೆ. ಇನ್ನು 463 ಏಕದಿನ ಪಂದ್ಯಗಳನ್ನಾಡಿ 19 ಶತಕ ಹಾಗೂ 96 ಅರ್ಧಶತಕ ಸಹಿತ 18,426 ರನ್ ಬಾರಿಸಿದ್ದಾರೆ. ಸಚಿನ್ ತೆಂಡುಲ್ಕರ್ ಭಾರತ ಪರ 6 ಬಾರಿ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಪಾಲ್ಗೊಂಡಿದ್ದಾರೆ.
ಮುಂಬೈ(ಫೆ.21): ಟೀಂ ಇಂಡಿಯಾ ಮಾಜಿ ದಿಗ್ಗಜ ಕ್ರಿಕೆಟಿಗ ಸಚಿನ್ ತೆಂಡುಲ್ಕರ್ ಅವರನ್ನು ಕ್ರಿಕೆಟ್ ದೇವರು ಎಂದೇ ಕರೆಯಲಾಗುತ್ತದೆ. ಅಂತಾತಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಹೇಳಿ ಒಂದು ದಶಕವೇ ಕಳೆದಿದ್ದರೂ, ಅವರ ಫ್ಯಾನ್ಸ್‌ಗೆ ತೆಂಡುಲ್ಕರ್ ಮೇಲಿನ ಅಭಿಮಾನ ಮಾತ್ರ ಒಂದಿಂಚೂ ಕಡಿಮೆಯಾಗಿಲ್ಲ.
ಹೌದು, ಸಚಿನ್ ತೆಂಡುಲ್ಕರ್‌ಗೆ ಜಗತ್ತಿನಾದ್ಯಂತ ಅಪಾರ ಅಭಿಮಾನಿಗಳಿದ್ದಾರೆ. ಸಚಿನ್ ಎಲ್ಲೇ ಹೋದರೂ ಅವರ ಅಭಿಮಾನಿಗಳು ಪ್ರೀತಿಯಿಂದ ಸಚ್ಚಿನ್.. ಸಚ್ಚಿನ್ ಎಂದು ಕೂಗುವುದೇ ಸರ್ವೇ ಸಾಮಾನ್ಯ. ಅದರಲ್ಲೂ ಕ್ರಿಕೆಟ್ ಆಡುವಾಗಲಂತೂ ಮೈದಾನದಲ್ಲಿದ್ದ ಪ್ರೇಕ್ಷಕರು ಸಚ್ಚಿನ್... ಸಚ್ಚಿನ್ ಎಂದು ಕೂಗುವುದನ್ನು ಕೇಳಿಸಿಕೊಂಡರೇ ಒಂದು ರೀತಿ ಮೈ ರೋಮಾಂಚನವಾಗುತ್ತಿತ್ತು. ಇದೀಗ ವಿಡಿಯೋವೊಂದು ವೈರಲ್ ಆಗುತ್ತಿದ್ದು, ಅದರಲ್ಲಿ ಸಚಿನ್ ವಿಮಾನದೊಳಗೆ ಬರುತ್ತಿದ್ದಂತೆಯೇ ವಿಮಾನದೊಳಗೆ ಕುಳಿತಿದ್ದ ಯಾತ್ರಿಕರು ಖುಷಿಯಿಂದ ಮತ್ತೊಮ್ಮೆ ಸಚ್ಚಿನ್, ಸಚ್ಚಿನ್ ಎಂದು ಜಯಘೋಷ ಮೊಳಗಿಸಿದ್ದಾರೆ. ಈ ವಿಡಿಯೋವೀಗ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ವೈರಲ್ ಆಗಿದೆ.
undefined
ವಿರಾಟ್ ಕೊಹ್ಲಿಗೆ ಗಂಡು ಮಗ ಹುಟ್ಟಿದ್ದಕ್ಕೆ ಪಾಕಿಸ್ತಾನದಲ್ಲಿ ಸಿಹಿ ಹಂಚಿ ಸಂಭ್ರಮಾಚರಣೆ..! ವಿಡಿಯೋ ವೈರಲ್
'Sachin, Sachin' chants in a flight for Sachin Tendulkar.
- The GOAT...!!!!pic.twitter.com/LmyvzMEmt0
200 ಟೆಸ್ಟ್ ಪಂದ್ಯಗಳನ್ನಾಡಿರುವ ಸಚಿನ್ ತೆಂಡುಲ್ಕರ್ 15, 921 ರನ್ ಬಾರಿಸಿದ್ದಾರೆ. ಇದರಲ್ಲಿ 51 ಶತಕಗಳು ಸೇರಿವೆ. ಇನ್ನು 463 ಏಕದಿನ ಪಂದ್ಯಗಳನ್ನಾಡಿ 19 ಶತಕ ಹಾಗೂ 96 ಅರ್ಧಶತಕ ಸಹಿತ 18,426 ರನ್ ಬಾರಿಸಿದ್ದಾರೆ. ಸಚಿನ್ ತೆಂಡುಲ್ಕರ್ ಭಾರತ ಪರ 6 ಬಾರಿ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಪಾಲ್ಗೊಂಡಿದ್ದಾರೆ.
ಸಚಿನ್ ತೆಂಡುಲ್ಕರ್ ಬಳಿಕ ವಿರಾಟ್ ಕೊಹ್ಲಿಗೂ ತಟ್ಟಿದ ಡೀಪ್ ಫೇಕ್ ಬಿಸಿ! ಆ ವಿಡಿಯೋ ಅವರದ್ದಲ್ಲ..!
ಕ್ರಿಕೆಟ್ ದಂತಕಥೆ ಸಚಿನ್ ತೆಂಡುಲ್ಕರ್ ಒಟ್ಟು 664 ಅಂತಾರಾಷ್ಟ್ರೀಯ ಪಂದ್ಯಗಳನ್ನಾಡಿ 34,357 ರನ್ ಬಾರಿಸಿದ್ದಾರೆ. ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 100 ಶತಕ ಸಿಡಿಸಿದ ಏಕೈಕ ಬ್ಯಾಟರ್ ಎನಿಸಿಕೊಂಡಿರುವ ಸಚಿನ್ ತೆಂಡುಲ್ಕರ್, 201 ವಿಕೆಟ್ ಕಬಳಿಸಿದ್ದಾರೆ. ಏಕದಿನ ಕ್ರಿಕೆಟ್‌ನಲ್ಲಿ ದ್ವಿಶತಕ ಬಾರಿಸಿದ ಮೊದಲ ಕ್ರಿಕೆಟಿಗ ಎನಿಸಿಕೊಂಡಿರುವ ತೆಂಡುಲ್ಕರ್, 2011ರ ಭಾರತ ಏಕದಿನ ವಿಶ್ವಕಪ್ ವಿಜೇತ ತಂಡದ ಸದಸ್ಯರು ಕೂಡಾ ಹೌದು.