‘ಕೈತೊಳೆಯಿರಿ’ ಅಭಿಯಾನಕ್ಕೆ ಸಚಿನ್‌, ಸಿಂಧು ಬೆಂಬಲ

Suvarna News   | Asianet News
Published : Mar 19, 2020, 11:49 AM ISTUpdated : Mar 19, 2020, 02:05 PM IST
‘ಕೈತೊಳೆಯಿರಿ’ ಅಭಿಯಾನಕ್ಕೆ ಸಚಿನ್‌, ಸಿಂಧು ಬೆಂಬಲ

ಸಾರಾಂಶ

ಕೊರೋನಾ ವೈರಸ್‌ ಹರಡುತ್ತಿರುವ ಹಿನ್ನಲೆಯಲ್ಲಿ ಶಿಚಿತ್ವ ಕಾಪಾಡಲು ಮನವಿ ಮಾಡಲಾಗುತ್ತಿದೆ. ಇದೀಗ ಸಚಿನ್ ತೆಂಡುಲ್ಕರ್ ಹಾಗೂ ಪಿವಿ ಸಿಂಧು ವಿಶೇಷ ಅಭಿಯಾನದ ಮೂಲಕ ಜನರಲ್ಲಿ ಜಾಗೃತಿ ಮೂಡಿಸುತ್ತಿದ್ದಾರೆ. 

ಮುಂಬೈ(ಮಾ.19): ವಿಶ್ವ ಸಂಸ್ಥೆಯ ಅಂಗ ಸಂಸ್ಥೆಯಾಗಿರುವ ವಿಶ್ವ ಆರೋಗ್ಯ ಸಂಸ್ಥೆ(ಡಬ್ಲ್ಯುಎಚ್‌ಒ)ಯ ಶುಚಿತ್ವ ಅಭಿಯಾನಕ್ಕೆ ಕ್ರಿಕೆಟ್‌ ದಿಗ್ಗಜ ಸಚಿನ್‌ ತೆಂಡುಲ್ಕರ್‌, ಬ್ಯಾಡ್ಮಿಂಟನ್‌ ತಾರೆ ಪಿ.ವಿ.ಸಿಂಧು ಸೇರಿದಂತೆ ಇನ್ನೂ ಅನೇಕ ಭಾರತೀಯ ಕ್ರೀಡಾಪಟುಗಳು ಕೈಜೋಡಿಸಿದ್ದಾರೆ. 

"

 

ಇದನ್ನೂ ಓದಿ: IPL 2020 ಟೂರ್ನಿ ಆಯೋಜಿಸಲು ಬಿಸಿಸಿಐನಿಂದ ಪ್ಲಾನ್ B, ಜುಲೈನಲ್ಲಿ ಟೂರ್ನಿ?

ಕೊರೋನಾ ಸೋಂಕು ಭೀತಿ ಹಿನ್ನೆಲೆಯಲ್ಲಿ ‘ಕೈಗಳನ್ನು ಶುಚಿಯಾಗಿರಿಸಿಕೊಳ್ಳಿ’ ಎನ್ನುವ ಸಂದೇಶದೊಂದಿಗೆ ಡಬ್ಲ್ಯುಎಚ್‌ಒ ಆರಂಭಿಸಿರುವ ಅಭಿಯಾನ ಬೆಂಬಲಿಸಿರುವ ಸಚಿನ್‌ ಹಾಗೂ ಸಿಂಧು ತಮ್ಮ ಟ್ವೀಟರ್‌ ಖಾತೆಯಲ್ಲಿ ವಿಡಿಯೋವೊಂದನ್ನು ಪೋಸ್ಟ್‌ ಮಾಡಿದ್ದಾರೆ. ಕೈಗಳನ್ನು ಶುಚಿಯಾಗಿರಿಸಿಕೊಳ್ಳುವಂತೆ ತಮ್ಮ ಹಿಂಬಾಲಕರಿಗೆ ಕರೆ ನೀಡಿದ್ದಾರೆ.

 

ಇದನ್ನೂ ಓದಿ: ಕೊರೋನಾ ಆತಂಕ: 2020ರಲ್ಲೇ ಟೋಕಿಯೋ ಒಲಿಂಪಿಕ್ಸ್‌ ನಡೆಸಲು ಸಾಧ್ಯವೇ?

ಕೊರೋನಾ ವೈರಸ್ ಇದೀಗ ಭಾರತದಲ್ಲಿ ಹರಡುತ್ತಿರುವ ಹಿನ್ನಲೆಯಲ್ಲಿ ಸರ್ಕಾರ ಮುಂಜಾಗ್ರತ ಕ್ರಮಗಳನ್ನು ಕೈಗೊಳ್ಳುತ್ತಿದೆ. ಇದರ ಜೊತೆಗೆ ಸಾರ್ವಜನಿಕರು ಎಚ್ಚರ ವಹಿಸಬೇಕಿದೆ. ಶುಚಿತ್ವ ಕಾಪಾಡಲು ಮನವಿ ಮಾಡಲಾಗುತ್ತಿದೆ. ಕರ್ನಾಟಕದಲ್ಲೇ ಕೊರೋನಾ ಸೋಂಕಿತರ ಸಂಖ್ಯೆ 15ಕ್ಕೇರಿದೆ. ಹೀಗಾಗಿ ಎಚ್ಚರ ಅಗತ್ಯ.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಸಂಜು ಸ್ಯಾಮ್ಸನ್ ನನ್ನ ಅಣ್ಣನಿದ್ದಂತೆ; ಇಬ್ಬರ ಪೈಪೋಟಿ ಬಗ್ಗೆ ಮನಬಿಚ್ಚಿ ಮಾತಾಡಿದ ಜಿತೇಶ್ ಶರ್ಮಾ
ದಕ್ಷಿಣ ಆಫ್ರಿಕಾ ಎದುರು ಗೆದ್ದರೂ ನಿಂತಿಲ್ಲ ಚಿಂತೆ: 2ನೇ ಟಿ20ಗೆ ಭಾರತ ತಂಡದಲ್ಲಿ ಬದಲಾವಣೆ?