ಪತ್ನಿ ಮಗಳೊಂದಿಗೆ ಕಾಜಿರಂಗಾ ನ್ಯಾಷನಲ್ ಪಾರ್ಕ್‌ಗೆ ಭೇಟಿ ನೀಡಿದ ಸಚಿನ್ ತೆಂಡೂಲ್ಕರ್

Published : Apr 09, 2025, 10:21 AM ISTUpdated : Apr 09, 2025, 11:39 AM IST
ಪತ್ನಿ ಮಗಳೊಂದಿಗೆ ಕಾಜಿರಂಗಾ ನ್ಯಾಷನಲ್ ಪಾರ್ಕ್‌ಗೆ ಭೇಟಿ ನೀಡಿದ ಸಚಿನ್ ತೆಂಡೂಲ್ಕರ್

ಸಾರಾಂಶ

ಸಚಿನ್ ತೆಂಡೂಲ್ಕರ್ ತಮ್ಮ ಕುಟುಂಬದೊಂದಿಗೆ ಕಾಜಿರಂಗಾ ನ್ಯಾಷನಲ್ ಪಾರ್ಕ್‌ಗೆ ಭೇಟಿ ನೀಡಿದ್ದು, ಸಫಾರಿಯನ್ನು ಆನಂದಿಸಿದರು.

ಅಸ್ಸಾಂ: ಒಂದು ಕಡೆ ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್ ನಡೆಯುತ್ತಿದ್ದರೆ, ಮುಂಬೈ ಇಂಡಿಯನ್ಸ್‌ನ ಮೆಂಟರ್ ಮತ್ತು ಭಾರತ ತಂಡದ ಮಾಜಿ ಬ್ಯಾಟ್ಸ್‌ಮನ್ ಸಚಿನ್ ತೆಂಡೂಲ್ಕರ್ ತಮ್ಮ ಕುಟುಂಬದೊಂದಿಗೆ ಸಮಯ ಕಳೆಯುತ್ತಿದ್ದಾರೆ. ಗಾಡ್ ಆಫ್ ಕ್ರಿಕೆಟ್ ತಮ್ಮ ಪತ್ನಿ ಅಂಜಲಿ ತೆಂಡೂಲ್ಕರ್ ಮತ್ತು ಮಗಳು ಸಾರಾ ಜೊತೆ ಕಾಜಿರಂಗಾ ನ್ಯಾಷನಲ್ ಪಾರ್ಕ್‌ಗೆ ಭೇಟಿ ನೀಡಿ ಪ್ರಕೃತಿಯೊಂದಿಗೆ ಕೆಲ ಸಮಯ ಕಳೆದಿದ್ದಾರೆ. ಕ್ರಿಕೆಟಿಗ ಮತ್ತು ಅವರ ಕುಟುಂಬವನ್ನು ನೋಡಲು ಅಲ್ಲಿ ಜನಸಾಗರವೇ ಸೇರಿತ್ತು. ಹೀಗಾಗಿ ಸಚಿನ್ ಅಭಿಮಾನಿಗಳನ್ನು ನಿರಾಸೆಗೊಳಿಸದೆ ಅವರೊಂದಿಗೆ ಫೋಟೋ ತೆಗೆಸಿಕೊಂಡರು ಮತ್ತು ಆಟೋಗ್ರಾಫ್ ನೀಡಿದರು. ಸಚಿನ್ ಅವರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಓಪನ್ ಜೀಪ್‌ನಲ್ಲಿ ಸಫಾರಿ ಆನಂದಿಸಿದ ಮಾಸ್ಟರ್ ಬ್ಲಾಸ್ಟರ್

ಕಾಜಿರಂಗಾ ನ್ಯಾಷನಲ್ ಪಾರ್ಕ್ ತನ್ನ ಅಧಿಕೃತ ಟ್ವಿಟರ್ ಪುಟದಲ್ಲಿ ಕ್ರಿಕೆಟ್ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಅವರ ಕೆಲವು ಚಿತ್ರಗಳು ಮತ್ತು ವೀಡಿಯೊಗಳನ್ನು ಹಂಚಿಕೊಂಡಿದೆ. ಇದರಲ್ಲಿ ಅವರು ಕಾಜಿರಂಗಾ ನ್ಯಾಷನಲ್ ಪಾರ್ಕ್‌ನಲ್ಲಿ ಸಿಬ್ಬಂದಿ ಹಾಗೂ ಪೊಲೀಸರ ಜೊತೆ  ಸಫಾರಿ ಆನಂದಿಸುತ್ತಿರುವುದು ಕಂಡು ಬಂದಿದೆ. ಇದಕ್ಕೂ ಮೊದಲು, ಕೊಹೋರಾದ ಬೋರ್ಗೋಸ್ ರೆಸಾರ್ಟ್‌ನಲ್ಲಿ ಅವರಿಗೆ ಅದ್ಧೂರಿ ಸ್ವಾಗತ ನೀಡಲಾಯಿತು. ಸಚಿನ್ ಅವರನ್ನು ನೋಡಲು ರೆಸಾರ್ಟ್‌ಗೆ ಅನೇಕ ಜನರು ಬಂದಿದ್ದರು. ಈ ವೇಳೆ ಸಚಿನ್ ಅಭಿಮಾನಿಗಳೊಂದಿಗೆ ಖುಷಿಯಿಂದಲೇ ಮಾತನಾಡಿದರು ಮತ್ತು ಯುವ ಅಭಿಮಾನಿಗಳ ಕೈ ಕುಲುಕಿದರು. ಸಚಿನ್ ತೆಂಡೂಲ್ಕರ್ ಅವರ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಸಾವಿರಾರು ಜನರು ಇದನ್ನು ಲೈಕ್ ಮಾಡಿದ್ದಾರೆ. ಸಚಿನ್ ತಮ್ಮ ಪತ್ನಿ ಹಾಗೂ ಮಗಳೊಂದಿಗೆ ಆಗಾಗ ಹೀಗೆ ರಾಷ್ಟ್ರೀಯ ಪಾರ್ಕ್‌ಗಳಿಗೆ ಪ್ರವಾಸಿ ತಾಣಗಳಿಗೆ ಭೇಟಿ ನೀಡಿ ಸುಂದರ ಕ್ಷಣಗಳನ್ನು ಕಳೆಯುತ್ತಿರುತ್ತಾರೆ. 

ಏಕದಿನ ಕ್ರಿಕೆಟ್‌ನ ಸಾರ್ವಕಾಲಿಕ ಟಾಪ್ 5 ಏಕದಿನ ಬ್ಯಾಟರ್ ಆಯ್ಕೆ ಮಾಡಿದ ಎಬಿ ಡಿವಿಲಿಯರ್ಸ್!

ಸಚಿನ್ ಅವರ 24 ವರ್ಷಗಳ ಕ್ರಿಕೆಟ್ ವೃತ್ತಿ ಜೀವನ 

ಮುಂಬೈನಲ್ಲಿ ಜನಿಸಿದ ಸಚಿನ್ ತೆಂಡೂಲ್ಕರ್ 16 ನೇ ವಯಸ್ಸಿನಲ್ಲಿ ನವೆಂಬರ್ 15, 1989 ರಂದು ಟೆಸ್ಟ್ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿದರು. ನಂತರ ಡಿಸೆಂಬರ್ 18, 1989 ರಂದು ಅವರು ತಮ್ಮ ಮೊದಲ ಏಕದಿನ ಪಂದ್ಯವನ್ನು ಆಡಿದರು. ತಮ್ಮ ವೃತ್ತಿಜೀವನದಲ್ಲಿ ಅವರು 664 ಅಂತರಾಷ್ಟ್ರೀಯ ಪಂದ್ಯಗಳಲ್ಲಿ ಭಾಗವಹಿಸಿದ್ದು, ಅವರ ಹೆಸರಿನಲ್ಲಿ 34357 ರನ್ ಗಳಿಸಿದ್ದಾರೆ. ಸಚಿನ್ ತಮ್ಮ ಕ್ರಿಕೆಟ್ ವೃತ್ತಿಜೀವನದಲ್ಲಿ 100 ಅಂತರಾಷ್ಟ್ರೀಯ ಶತಕ ಮತ್ತು 164 ಅರ್ಧ ಶತಕಗಳನ್ನು ಗಳಿಸಿದ್ದಾರೆ. ಏಕದಿನ ಪಂದ್ಯದಲ್ಲಿ ದ್ವಿಶತಕ ಗಳಿಸಿದ ಮೊದಲ ಕ್ರಿಕೆಟಿಗ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ. ಅವರು 2011 ರಲ್ಲಿ ಏಕದಿನ ವಿಶ್ವಕಪ್ ವಿಜೇತ ತಂಡದ ಭಾಗವಾಗಿದ್ದರು.

ಗೋವಾದಲ್ಲೇ ಸಂತೋಷದ ವಿಚಾರ ಹಂಚಿಕೊಂಡ ಸಾರಾ ತೆಂಡೂಲ್ಕರ್!

 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

Ind vs SA: ಶುಭ್‌ಮನ್ ಗಿಲ್ ಫುಲ್ ಫಿಟ್; ಈ ಡೇಟ್‌ಗೆ ಟೀಂ ಇಂಡಿಯಾಗೆ ಕಮ್‌ಬ್ಯಾಕ್ ಮಾಡೋದು ಫಿಕ್ಸ್!
ಕ್ರೈಸ್ಟ್‌ಚರ್ಚ್ ಪವಾಡ: ಕಿವೀಸ್ ಎದುರು ಐತಿಹಾಸಿಕ ಡ್ರಾ ಸಾಧಿಸಿದ ವೆಸ್ಟ್ ಇಂಡೀಸ್!